ಬೆಂಗಳೂರು: ನಗರದ ಬಿಬಿಎಂಪಿ ಮುಖ್ಯ ಕಚೇರಿಯ ಅಗ್ನಿ ಅವಘಡ ಸಂಭವಿಸಿದ್ದರಿಂದ 9 ಮಂದಿ ಗಾಯಗೊಂಡಿದ್ದು, ಈ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದೆ. ಬಿಬಿಎಂಪಿ ಗುಣ ನಿಯಂತ್ರಣ ವಿಭಾಗದ ಪ್ರಯೋಗಾಲಯ ಮತ್ತು ಕಚೇರಿ ಕಟ್ಟಡದಲ್ಲಿ ಬೆಂಕಿ (Fire Accident) ಹೊತ್ತಿಕೊಂಡಿದೆ. ಮತ್ತೊಂದೆಡೆ ಕೊಠಡಿಗೆ ಬೆಂಕಿ ಬಿದ್ದಿರುವುದು ಆಕಸ್ಮಿಕವ್ಲ, ಷಡ್ಯಂತ್ರ. ಇದು ಬಿಜೆಪಿ ಕೃತ್ಯ, ಭ್ರಷ್ಟರನ್ನು ಹೆಡೆಮುರಿ ಕಟ್ಟುವುದು ನಿಶ್ಚಿತ ಎಂದು ರಾಜ್ಯ ಕಾಂಗ್ರೆಸ್ ಹೇಳಿರುವುದು ಕಂಡುಬಂದಿದೆ.
ಕಟ್ಟಡದಲ್ಲಿ ಬೆಂಕಿ ಹೊತ್ತಿಕೊಂಡ ಹಿನ್ನೆಲೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ 9 ಮಂದಿಯನ್ನು ಪೊಲೀಸ್ ವಾಹನದಲ್ಲಿ ಆಸ್ಪತ್ರೆಗೆ ರವಾನೆ ಮಾಡಲಾಯಿತು. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡುತ್ತಿದೆ. ಸ್ಥಳೀಯ ಪೊಲೀಸರು ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಸ್ಥಳದಲ್ಲಿ ನೂರಾರು ಬಿಬಿಎಂಪಿ ನೌಕರರು ಹಾಗೂ ಸಾರ್ವಜನಿಕರು ಜಮಾಯಿಸಿದ್ದಾರೆ.
ಘಟನೆ ನಡೆದ ಕಟ್ಟಡದಲ್ಲಿಯೇ ಬಿಬಿಎಂಪಿಯ ಮಹತ್ವದ ದಾಖಲೆಗಳಿದ್ದ ರೆಕಾರ್ಡ್ಸ್ ರೂಮ್ ಇದೆ. ಆದರೆ, ಅದೃಷ್ಟವಶಾತ್ ರೆಕಾರ್ಡ್ಸ್ ರೂಮ್‌ಗೆ ಯಾವುದೇ ಹಾನಿ ಆಗಿಲ್ಲ. ಬೆಂಜೀನ್ ಎನ್ನುವ ಕೆಮಿಕಲ್ ಸ್ಫೋಟವಾಗಿರುವುದು ಬೆಂಕಿ ಅವಘಡಕ್ಕೆ ಕಾರಣವಾಗಿದೆ. ಬೆಂಜಿನ್ ಕೆಮಿನಲ್ ಅನ್ನು ಬಿಟುಮಿನ್ ಟೆಸ್ಟ್‌ಗೆ ಬಳಸಲಾಗುತ್ತದೆ. ಬೆಂಜೀನ್ ಕೆಮಿಕಲ್ ಟೆಸ್ಟ್ ಮಾಡುವ ಹೇಳೆ ಓವನ್ ಬ್ಲಾಸ್ಟ್ ಆಗಿ ಅವಘಡ ನಡೆದಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ಇದನ್ನೂ ಓದಿ | Ceiling collapse : ಅಂಗನವಾಡಿ ಚಾವಣಿ ಕುಸಿದು 10 ತಿಂಗಳ ಮಗುವಿಗೆ ಗಾಯ, ನೋವಿನಲ್ಲೂ ನಗುವ ಪುಟಾಣಿ ನೋಡಿ!
ಬಿಜೆಪಿ ಷಡ್ಯಂತ್ರ ಎಂದ ಕಾಂಗ್ರೆಸ್
ಬಿಬಿಎಂಪಿ ಕಚೇರಿಯ ಪ್ರಯೋಗಾಲಯ ಕಟ್ಟಡಕ್ಕೆ ಬೆಂಕಿಬಿದ್ದ ಪ್ರಕರಣದ ಬಗ್ಗೆ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್, ಬಿಜೆಪಿ ಷಡ್ಯಂತ್ರ. 40 ಪರ್ಸೆಂಟ್ ಕಮಿಷನ್ ಆರೋಪ ತನಿಖೆಗೆ ಕ್ರಮ ವಹಿಸಿದ ಬೆನ್ನಲ್ಲೇ ಕಟ್ಟಡಕ್ಕೆ ಬೆಂಕಿ ಬಿದ್ದಿದೆ. ಇದು ಬಿಜೆಪಿ ಕೃತ್ಯ. ಭ್ರಷ್ಟರನ್ನು ಹೆಡೆಮುರಿ ಕಟ್ಟುವುದು ನಿಶ್ಚಿತ ಎಂದು ಕಾಂಗ್ರೆಸ್ ಆರೋಪಿಸಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ