Site icon Vistara News

Fire Accident : ರೈಲು ಎಂಜಿನ್‌ನಲ್ಲಿ ಬೆಂಕಿ; ಸಮಯಪ್ರಜ್ಞೆ ಮೆರೆದ ಪೈಲಟ್‌, ಸಾವಿರಾರು ಪ್ರಯಾಣಿಕರು ಬಚಾವ್‌

Karnataka Express train

ಬೆಂಗಳೂರು: ಕೆ.ಕೆ ಎಕ್ಸ್‌ಪ್ರೆಸ್‌ (Karnataka Express) ರೈಲಿನ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪೈಲಟ್‌ನ ಸಮಯಪ್ರಜ್ಞೆಯಿಂದಾಗಿ ಅನಾಹುತವೊಂದು ತಪ್ಪಿದೆ. ಶನಿವಾರ (ಜು.1) ಸಂಜೆ 7.30ಕ್ಕೆ ಬೆಂಗಳೂರಿನಿಂದ ಹೊರಟ್ಟಿದ್ದ ಕೆಕೆ ಎಕ್ಸ್‌ಪ್ರೆಸ್‌ ರೈಲಿನ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅತಿ ವೇಗವಾಗಿ ಚಲಿಸುತ್ತಿದ್ದ ರೈಲಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಪೈಲಟ್‌ ರೈಲು ನಿಲ್ಲಿಸಿ, ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ.

ದಟ್ಟ ಹೊಗೆ ಕಾಣಿಸಿಕೊಳ್ಳುತ್ತಿದ್ದ ಕೆಳಗಿಳಿದ ಪ್ರಯಾಣಿಕರು

ತಾಂತ್ರಿಕ ಸಮಸ್ಯೆಯಿಂದ ರೈಲು ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಬೆಂಗಳೂರಿನಿಂದ ದೆಹಲಿಗೆ ರೈಲು ಹೊರಟಿತ್ತು. ಭಾನುವಾರ ಬೆಳಗ್ಗೆ ಮಹಾರಾಷ್ಟ್ರ ಸೊಲ್ಲಾಪುರದ ಮೋಹಳ ತಾಲೂಕಿನ ಘಾಟಘೆ ಗ್ರಾಮದ ಸಮೀಪ ಬರುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡು ದಟ್ಟ ಹೊಗೆ ಕಾಣಿಸಿಕೊಂಡಿದೆ. ಕೂಡಲೇ ಎಚ್ಚೆತ್ತುಕೊಂಡ ಪೈಲಟ್‌ ರೈಲು ಸ್ಥಗಿತಗೊಳಿಸಿದ್ದಾರೆ.

ಕರ್ನಾಟಕ ಎಕ್ಸ್‌ಪ್ರೆಸ್‌ ರೈಲಿನ ಎಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ

ಬೆಂಕಿ ಆವರಿಸುತ್ತಿದ್ದಂತೆ ಪೈಲಟ್‌ ರೈಲಿನಿಂದ ಜಿಗಿದಿದ್ದಾರೆ. ಪರಿಣಾಮ ಬೆಂಕಿ ತಗುಲಿದ್ದು ಗಾಯಗೊಂಡಿದ್ದಾರೆ. ಗಾಯಗೊಂಡಿದ್ದ ಪೈಲಟ್‌ನನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕರ್ನಾಟಕ ಎಕ್ಸ್‌ಪ್ರೆಸ್‌ ರೈಲಿಗೆ ಮತ್ತೊಂದು ಎಂಜಿನ್‌ ಜೋಡಣೆ

ಪೈಲಟ್‌ನ ಸಮಯ ಪ್ರಜ್ಞೆಯಿಂದಾಗಿ ಸಾವಿರಾರು ಪ್ರಯಾಣಿಕರ ಜೀವ ಉಳಿದಿದೆ. ಸದ್ಯ ಸ್ಥಳಕ್ಕಾಗಮಿಸಿರುವ ಅಧಿಕಾರಿಗಳು ರೈಲಿಗೆ ಮತ್ತೊಂದು ಎಂಜಿನ್ ಜೋಡಣೆ ಮಾಡಿದ್ದು, ಅಲ್ಲಿಂದ ದೆಹಲಿಗೆ ಪ್ರಯಾಣ ಮುಂದುವರಿದಿದೆ.

ಎಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version