ಹಾಸನ: ಇಲ್ಲಿನ ಸಕಲೇಶಪುರ ತಾಲೂಕಿನ ಕಾಡುಮನೆ ಎಸ್ಟೇಟ್ ಸಮೀಪ ಕಾಡ್ಗಿಚ್ಚನ್ನು ನಂದಿಸಲು ಹೋಗಿದ್ದ ನಾಲ್ವರು ಅರಣ್ಯ ಇಲಾಖೆ ಸಿಬ್ಬಂದಿ (Fire Accident) ಗಾಯಗೊಂಡಿದ್ದಾರೆ. ಫಾರೆಸ್ಟರ್ ಮಂಜುನಾಥ್, ಅರಣ್ಯ ವೀಕ್ಷಕ ಸುಂದರೇಶ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಪಶ್ಚಿಮ ಘಟ್ಟದ ಕಾಡಿಗೆ ತಗುಲಿದ ಆಕಸ್ಮಿಕ ಬೆಂಕಿ ನಂದಿಸಲು ತೆರಳಿದ್ದ ವೇಳೆ ಈ ಅವಘಡ ಸಂಭವಿಸಿದೆ. ಇಬ್ಬರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಕಾಡಿನಿಂದ ಗ್ರಾಮಕ್ಕೆ ಸುಮಾರು ಐದು ಕಿ.ಮೀ. ದೂರ ಗಾಯಾಳುಗಳನ್ನು ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಹೊತ್ತು ತಂದಿದ್ದಾರೆ.
ಇದನ್ನೂ ಓದಿ: ಚಿಕ್ಕಪೇಟೆಯಲ್ಲಿ ಧ್ವಜ ಕಂಬ ತೆರವಿಗೆ ಕರವೇ ಕಾರ್ಯಕರ್ತನ ಕಿಡಿ; ನಡುರಸ್ತೆಯಲ್ಲಿ ವ್ಯಕ್ತಿಗೆ ಮಸಿ ಬಳಿದು ಎಳೆದಾಟ!
ಬೆಂಕಿಯಲ್ಲಿ ಸಿಲುಕಿ ಗಂಭೀರವಾಗಿ ಗಾಯಗೊಂಡಿರುವ ಸಿಬ್ಬಂದಿಯನ್ನು ಸಕಲೇಶಪುರ ಪಟ್ಟಣದ ಕ್ರಾಫರ್ಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಾಡುಮನೆ ಗ್ರಾಮದ ಮಣಿಬೀಡು ದೇವಸ್ಥಾನದ ಸಮೀಪ ಪಶ್ಚಿಮಘಟ್ಟದ ಕಾಡಿನಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿತ್ತು. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.