Site icon Vistara News

Fire Accident : ರಸ್ತೆಯಲ್ಲಿ ನಿಂತಿದ್ದ ಟ್ರ್ಯಾಕ್ಟರ್‌ಗೆ ಆಕಸ್ಮಿಕ ಬೆಂಕಿ; ಅರ್ಧ ಗಂಟೆಯಲ್ಲಿ ಧಗ ಧಗನೆ ಹೊತ್ತಿ ಉರಿಯಿತು!

fire tractor in raichur

ರಾಯಚೂರು: ಹೊರವಲಯ ಯರಮರಸ್ ಕ್ಯಾಂಪ್ ಬಳಿ ರಸ್ತೆಯಲ್ಲಿ ನಿಂತಿದ್ದ ಟ್ರ್ಯಾಕ್ಟರ್‌ವೊಂದರಲ್ಲಿ ಆಕಸ್ಮಿಕ ಬೆಂಕಿ (Fire Accident) ತಗುಲಿದ್ದು, ಅರ್ಧ ಗಂಟೆಗೂ ಹೆಚ್ಚು ಕಾಲ ಹೊತ್ತಿ ಉರಿದಿದೆ.

ಇಂಜಿನ್ ಬಿಸಿಯಿಂದ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸುಮಾರು 30 ನಿಮಿಷಗಳ ಕಾಲ ಟ್ರ್ಯಾಕ್ಟರ್ ಹೊತ್ತಿ ಉರಿದಿದೆ. ತಕ್ಷಣವೇ ಅಗ್ನಿಶಾಮಕ ದಳ ಸಿಬ್ಬಂದಿಗೆ ವಿಷಯ ಮುಟ್ಟಿಸಿದೆ. ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಕಾರ್ಯಾಚರಣೆ ನಡೆಸಿದ್ದಾರೆ.

ಈ ಹಿನ್ನೆಲೆಯಲ್ಲಿ ಹೈದರಾಬಾದ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಟ್ರಾಫಿಕ್ ತೆರವುಗೊಳಿಸಲು ಪೊಲೀಸರು ಹರಸಾಹಸಪಟ್ಟಿದ್ದಾರೆ. ರಾಯಚೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Karnataka Election | ಹಳೆ ಮೈಸೂರಿನಲ್ಲಿ ಬಿಜೆಪಿ ಅಬ್ಬರಕ್ಕೆ ಬೆದರಿದ ಕಾಂಗ್ರೆಸ್‌-ಜೆಡಿಎಸ್‌?: ಹೌದೆನ್ನುತ್ತವೆ ಘಟನಾವಳಿಗಳು

Exit mobile version