Site icon Vistara News

Fire Case: ಬಾಲ್ಕನಿಯಲ್ಲಿಟ್ಟಿದ್ದ 2 ಗ್ಯಾಸ್‌ ಸಿಲಿಂಡರ್‌ಗಳು ಸ್ಫೋಟ; ಮನೆಯೊಳಗೆಲ್ಲ‌ ಆವರಿಸಿದ ಬೆಂಕಿ

#image_title

ಬೆಂಗಳೂರು: ಇಲ್ಲಿನ ಚಾಮರಾಜಪೇಟೆಯ ವಿಠಲ ನಗರದಲ್ಲಿರುವ ಮನೆಯೊಂದರಲ್ಲಿ ಹೊರಗೆ ಇಟ್ಟಿದ್ದ ಎರಡು ಗ್ಯಾಸ್‌ ಸಿಲಿಂಡರ್‌ಗಳು (Fire Case) ಸೋರಿಕೆ ಆಗಿದ್ದು, ಪರಿಣಾಮ ಪಕ್ಕದ ಫ್ಲವರ್ ಡೆಕೋರೇಷನ್ ಅಂಗಡಿ ಬಳಿ ಬೆಂಕಿ ಕಾಣಿಸಿಕೊಂಡಿತು. ಇದರಿಂದ ಕ್ಷಣಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಮನೆಯಲ್ಲಿ ಯಾರೂ ಇಲ್ಲದ ವೇಳೆ ಅಗ್ನಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯವಾಗಿಲ್ಲ. ಗ್ಯಾಸ್‌ ಲೀಕ್‌ ಆಗಿ ಸ್ಫೋಟಗೊಂಡಿದ್ದು, ಮನೆಯ ಒಳಗೂ ಹಾನಿ ಆಗಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಅಲರ್ಟ್‌ ಆದ ಸ್ಥಳೀಯರು ಕೂಡಲೇ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿಯನ್ನು ರವಾನಿಸಿದ್ದಾರೆ.

ಇದನ್ನೂ ಓದಿ: Fire Accident: ಮಾರಿಜಾತ್ರೆಗೆ ಹೋಗುತ್ತಿದ್ದಾಗ ಕಾರಿಗೆ ಬೆಂಕಿ; ಬೆಂಗಳೂರಲ್ಲಿ ಅಗ್ನಿಅವಘಡಕ್ಕೆ ಐಷಾರಾಮಿ ಕಾರುಗಳು ಭಸ್ಮ

ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ‌ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದರು. ಇತ್ತ ಅಗ್ನಿ ಅವಘಡ ಸುದ್ದಿ ತಿಳಿಯುತ್ತಿದ್ದಂತೆ ನೂರಾರು ಸಂಖ್ಯೆಯಲ್ಲಿ ಜನರು ಜಮಾಯಿಸಿದರು. ಚಾಮರಾಜಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Exit mobile version