ತುಮಕೂರು: ಜಿಲ್ಲೆಯ ತುರುವೇಕೆರೆ ತಾಲೂಕಿನ ಮಾಯಸಂದ್ರ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಮೂರು ಕೋಳಿ ಅಂಗಡಿಗಳು ಸುಟ್ಟು ಹೋಗಿವೆ. ಮಾರಯ್ಯ, ಮುಬಾರಕ್ ಪಾಷ ಹಾಗೂ ಕುಮಾರ್ ಅವರಿಗೆ ಸೇರಿದ ಕೋಳಿ ಅಂಗಡಿಗಳು ಸುಟ್ಟು ಕರಕಲಾಗಿದ್ದು, ಕೋಳಿಗಳೂ ಸತ್ತಿವೆ.
ಕೋಳಿಗಳಲ್ಲದೆ, ಅಂಗಡಿಗಳಲ್ಲಿದ್ದ ಪೀಠೋಪಕರಣ, ಜನರೇಟರ್, ತಕ್ಕಡಿ ಸೇರಿದಂತೆ ಹಲವು ವಸ್ತುಗಳು ಬೆಂಕಿಗಾಹುತಿಯಾಗಿವೆ. ಒಟ್ಟು ಹತ್ತು ಲಕ್ಷಕ್ಕೂ ಹೆಚ್ಚು ಮೌಲ್ಯ ನಷ್ಟವಾಗಿರುವ ಮಾಹಿತಿ ಇದೆ.
ಬೆಂಕಿಗೆ ಏನು ಕಾರಣ ಎಂದು ತಿಳಿದುಬಂದಿಲ್ಲ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಇಲ್ಲವೇ ಸಿಲಿಂಡರ್ ಸ್ಫೋಟದಿಂದ ದುರಂತ ಸಂಭವಿಸಿರುವ ಸಾಧ್ಯತೆ ಇದೆ. ಆದರೆ, ಇಲ್ಲಿರುವ ಸಿಲಿಂಡರ್ ಮಾತ್ರ ಸ್ಫೋಟವಾಗಿಲ್ಲ.
ಸ್ಥಳಕ್ಕೆ ಅಗ್ನಿಶಾಮಕ ದಳ ಭೇಟಿ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ. ತುರುವೇಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕೋಳಿ ಅಂಗಡಿಗಳು ಬೆಂಕಿಗಾಹುತಿಯಾದ ಹಿನ್ನೆಲೆಯಲ್ಲಿ ಅದರ ಮಾಲೀಕರು ಮತ್ತು ಕುಟುಂಬದವರು ತೀವ್ರ ನೋವು ಅನುಭವಿಸುತ್ತಿದ್ದಾರೆ.
ಇದನ್ನೂ ಓದಿ | Fire tragedy | ಪಕ್ಕದ ಜಮೀನಿನಿಂದ ಹಾರಿದ ಕಿಡಿ: 32 ಎಕರೆ ಪ್ರದೇಶದಲ್ಲಿ ಬೆಳೆದು ನಿಂತಿದ್ದ ಕಬ್ಬು ಸಂಪೂರ್ಣ ಭಸ್ಮ