ಬಾಗಲಕೋಟೆ : ಯುವಕನೊಬ್ಬ ರಿವಾಲ್ವರ್ ಹಿಡಿದು ಗಾಳಿಯಲ್ಲಿ ಫೈರಿಂಗ್ (Firing Case) ಮಾಡಿದ ಘಟನೆ ಬಾಗಲಕೋಟೆ ಜಿಲ್ಲೆಯ ತೇರದಾಳ ಪಟ್ಟಣದಲ್ಲಿ ನಡೆದಿದೆ. ಪೊಲೀಸ್ ಅಧಿಕಾರಿಗಳು ಯುವಕನ ವಿರುದ್ಧ ಕೇಸ್ ದಾಖಲಿಸಲು ಮುಂದಾಗಿದ್ದಾರೆ.
ಭುವನ್ ಎಂಬಾತ ರಿವಾಲ್ವರ್ ಹಿಡಿದು ಗಾಳಿಯಲ್ಲಿ ಗುಂಡು ಹಾರಿಸಿದ್ದು, ಇದನ್ನೂ ಮೊಬೈಲ್‌ನಲ್ಲಿ ವಿಡಿಯೊ ಮಾಡಿಕೊಂಡಿದ್ದಾನೆ. ಭುವನ್‌ನ ಅಜ್ಜ ಷಣ್ಮುಖ ಎಂಬುವವರು ರಿವಾಲ್ವರ್ ಪರ್ಮಿಷನ್ ಪಡೆದಿದ್ದಾರೆ.
ಲೈಸನ್ಸ್ ಹೊಂದಿರುವ ಅಜ್ಜ ಷಣ್ಮುಖ ಅವರ ರಿವಾಲ್ವರ್‌ನಿಂದ ಮೊಮ್ಮಗ ಭುವನ್ ಗಾಳಿಯಲ್ಲಿ ಗುಂಡು ಹಾರಿಸಿದ್ದಾನೆ. ಈ ಸಂಬಂಧ ರಿವಾಲ್ವರ್ ಲೈಸನ್ಸ್ ಕ್ಯಾನ್ಸಲ್ ಮಾಡುವಂತೆ ಡಿಸಿಗೆ ಬಾಗಲಕೋಟೆ ಎಸ್‌ಪಿ ಅಮರನಾಥ್ ರೆಡ್ಡಿ ಪತ್ರ ಬರೆಯಲು ಮುಂದಾಗಿದ್ದಾರೆ.
ಘಟನೆಯಲ್ಲಿ ಯಾವುದೇ ಅವಘಡ ಸಂಭವಿಸಿಲ್ಲ. ಆದರೆ ಲೈಸನ್ಸ್ ಪಡೆಯದೇ ಇರುವವರು ಫೈರಿಂಗ್ ಮಾಡಿದ್ದಕ್ಕೆ ಕೇಸ್ ದಾಖಲಿಸುತ್ತೇವೆ ಎಂದು ಅಮರನಾಥ್ ರೆಡ್ಡಿ ಮಾಹಿತಿ ನೀಡಿದ್ದಾರೆ.
ಮಾಂಸಕ್ಕಾಗಿ ನವಿಲುಗಳ ಸಂಹಾರ; ಭಕ್ಷಣೆಗೆ ಮುಂದಾಗಿದ್ದ ಮೂವರ ಬಂಧನ
ತುಮಕೂರು: ರಾಜ್ಯದಲ್ಲಿ ಹುಲಿ ಉಗುರಿನ ಪೆಂಡೆಂಟ್ ಪ್ರಕರಣ ಸದ್ದು ಮಾಡುತ್ತಿರುವ ಬೆನ್ನಲ್ಲೇ ರಾಷ್ಟ್ರಪಕ್ಷಿ ನವಿಲು ಮಾಂಸ (Peacock meat) ಭಕ್ಷಣೆಗೆ ಮುಂದಾಗಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ತುಮಕೂರಿನ (Tumkur News) ಮಾರನಾಯಕನಪಾಳ್ಯದಲ್ಲಿ ಘಟನೆ ನಡೆದಿದೆ.
ಬಿಟ್ಟಿಂಗ್ ನಾಯಕ್, ಬೈಷಾಕ್ ದಾವು, ದುಬಾ ಕಾಪತ್ ಬಂಧಿತ ಆರೋಪಿಗಳಾಗಿದ್ದು, ಇವರೆಲ್ಲವೂ ಒರಿಸ್ಸಾ ಮೂಲದವರಾಗಿದ್ದಾರೆ. ಮಾರನಾಯಕನಪಾಳ್ಯದ ಇಟ್ಟಿಗೆ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಇವರುಗಳು ನವಿಲು ಮಾಂಸ ಗಟ್ಟಿಯಾಗಿದ್ದು, ರುಚಿಯಾಗಿ ಇರುತ್ತದೆ ಎಂದು ಬೇಟೆಯಾಡುತ್ತಿದ್ದರು.
ಕಳೆದ ಹಲವು ದಿನಗಳಿಂದ ನವಿಲುಗಳನ್ನು ಕೊಂದು ತಿನ್ನುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಅರಣ್ಯಾಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ 1.5 ಕೆ.ಜಿ ನವಿಲಿನ ಹಸಿ ಮಾಂಸ, ನವಿಲಿನ ಎರಡು ಕಾಲುಗಳು, ಬೇಯಿಸಿದ ಮಾಂಸ ಹಾಗೂ ನವಿಲು ಹಿಡಿಯಲು ಬಳಸುತ್ತಿದ್ದ ಬಲೆಗಳು, ಉರುಳುಗಳು, ಮಾಂಸ ಬೇಯಿಸಿದ್ದ ಪಾತ್ರೆಗಳನ್ನು ವಶಕ್ಕೆ ಪಡೆಯಲಾಗಿದೆ.
ವಶಕ್ಕೆ ಪಡೆದ ಮಾಂಸವನ್ನು ಅರಣ್ಯಾಧಿಕಾರಿಗಳು ಎಫ್ಎಸ್ಎಲ್‌ಗೆ ಕಳುಹಿಸಿದ್ದಾರೆ. ಬಂಧಿತರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು, ಅಧಿಕಾರಿಗಳು ತನಿಖೆಯನ್ನು ಮುಂದುವರಿಸಿದ್ದಾರೆ
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ