ಚಿಕ್ಕಮಗಳೂರು: ಮಲೆನಾಡಿನಲ್ಲಿ ಈ ವರ್ಷದ ಮೊದಲ ಕೆಎಫ್‌ಡಿ (ಮಂಗನಕಾಯಿಲೆ) ಪ್ರಕರಣ ಪತ್ತೆಯಾಗಿದೆ. ಬಾಳೆಹೊನ್ನೂರು ಮೂಲದ ವ್ಯಕ್ತಿಯಲ್ಲಿ KFD ಪತ್ತೆಯಾಗಿದೆ.
ಕೊಪ್ಪದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಜ್ವರದಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಟಿಕ್ಸ್ ಪರೀಕ್ಷೆಗೆ ಆರೋಗ್ಯ ಇಲಾಖೆ ಕಳುಹಿಸಿತ್ತು. ಫಲಿತಾಂಶ ಪಾಸಿಟಿವ್ ಬಂದಿದೆ. ಹೀಗಾಗಿ ಮಲೆನಾಡಿನಲ್ಲಿ ಮತ್ತೆ ಮಂಗನ ಕಾಯಿಲೆ ಭೀತಿ ಎದುರಾಗಿದ್ದು, ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್ ಸಾರಲಾಗಿದೆ. ಈ ವರ್ಷದ ಮೊದಲ ಕೆಎಫ್‌ಡಿ ಪ್ರಕರಣ ಇದಾಗಿದ್ದು, ವ್ಯಕ್ತಿ ಇದ್ದ ಸ್ಥಳ ಹಾಗೂ ಸುತ್ತಮುತ್ತಲಿನ ಪ್ರತಿಯೊಬ್ಬರ ಬಗ್ಗೆ ನಿಗಾ ಇಡಲಾಗಿದೆ.
ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ KFD ಆತಂಕವಿದ್ದು, ಪ್ರತಿವರ್ಷ ಹಲವಾರು ಮಂದಿಯನ್ನು ಬಾಧಿಸುತ್ತದೆ. ಮಂಗನ ಮೈಯ ಮೇಲಿರುವ ಉಣ್ಣೆಗಳಿಂದ ಮನುಷ್ಯರಿಗೆ ಹರಡುವ ಈ ಕಾಯಿಲೆಯ ವೈರಸ್, ತೀವ್ರ ಜ್ವರ ಹಾಗೂ ಮೈಕೈ ನೋವಿನಿಂದ ವ್ಯಕ್ತಿಯನ್ನು ಬಳಲಿಸುತ್ತದೆ. ಸೋಂಕು ರೋಗವಾಗಿರುವ ಇದರಿಂದ ಕೆಲಮಂದಿ ಮೃತಪಟ್ಟಿದ್ದು ಇದೆ.
ಇದನ್ನೂ ಓದಿ : KFD vaccine | ಮಂಗನ ಕಾಯಿಲೆ ತಡೆ ಲಸಿಕೆಗೆ ಅನುಮತಿಯೇ ಇಲ್ಲ; ಆದರೂ ಜನರಿಗೆ ನೀಡುತ್ತಿದೆ ಸರ್ಕಾರ!