First Rank | 71ರ ಹರೆಯದಲ್ಲೂ ಸಿವಿಲ್‌ ಡಿಪ್ಲೊಮಾದಲ್ಲಿ ಮೊದಲ ರ‍್ಯಾಂಕ್‌ ಪಡೆದ ಶಿರಸಿಯ ನಾರಾಯಣ ಭಟ್‌! - Vistara News

ಉತ್ತರ ಕನ್ನಡ

First Rank | 71ರ ಹರೆಯದಲ್ಲೂ ಸಿವಿಲ್‌ ಡಿಪ್ಲೊಮಾದಲ್ಲಿ ಮೊದಲ ರ‍್ಯಾಂಕ್‌ ಪಡೆದ ಶಿರಸಿಯ ನಾರಾಯಣ ಭಟ್‌!

First Rank | ಇದು ಥೇಟ್‌ ಕಾಲೇಜು ಕುಮಾರ ಸಿನಿಮಾದ ಕತೆಯಂತಿರುವ ಸಾಧನೆ. ಆದರೆ, ಇವರು ಆ ಸಿನಿಮಾದ ಪ್ರಮುಖ ಪಾತ್ರಧಾರಿ ರವಿಶಂಕರ್‌ ಅವರಂತೆ ಅನಕ್ಷರಸ್ಥರಲ್ಲ. ಮೊದಲೇ ಮೆಕ್ಯಾನಿಕಲ್‌ ಡಿಪ್ಲೊಮಾ ಪದವೀಧರರಾಗಿ ಕೆಲಸ ಮಾಡಿ ನಿವೃತ್ತರಾದವರು. ಇವರು ಪುನಃ ಸಿವಿಲ್‌ ಡಿಪ್ಲೊಮಾ ಮಾಡಿ ಶೈಕ್ಷಣಿಕವಾಗಿ ಸಾಧನೆ ತೋರಿದ್ದಾರೆ.

VISTARANEWS.COM


on

diploma narayana
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶಿರಸಿ: ವಯಸ್ಸು ಆಯಿತೆಂದರೆ ಮರೆವು ಜಾಸ್ತಿ ಎಂದು ಹೇಳುತ್ತಾರೆ. ಆದರೆ, ಇಲ್ಲಿ ಒಬ್ಬ ವೃದ್ಧರು ವಯಸ್ಸು ಕೇವಲ ಸಂಖ್ಯೆಯಷ್ಟೇ ಎಂಬುದನ್ನು ಸಾಬೀತುಪಡಿಸಿದ್ದಾರೆ. 71 ರ ವಯಸ್ಸಿನಲ್ಲೂ ಮೂರು ವರ್ಷಗಳ ಕಾಲ ಡಿಪ್ಲೊಮಾ ಕಾಲೇಜಿಗೆ ತೆರಳಿ ಪಾಠ ಕೇಳಿ ಪರೀಕ್ಷೆ ಬರೆದಿರುವ ಇವರು ರಾಜ್ಯಕ್ಕೆ ಪ್ರಥಮ ರ‌್ಯಾಂಕ್ (First Rank) ಪಡೆದಿದ್ದಾರೆ‌.

First Rank
ನಾರಾಯಣ ಭಟ್‌

ಕಳೆದ ಮೂರು ವರ್ಷಗಳ ಹಿಂದೆ ಕನ್ನಡ ಚಿತ್ರರಂಗದ ಪರದೆಯಲ್ಲಿ ತೆರೆಕಂಡ ‘ಕಾಲೇಜ್ ಕುಮಾರ’ ಎಂಬ ಚಿತ್ರವನ್ನು ನೆನಪಿಸುವ ವಿಶೇಷ ಸನ್ನಿವೇಶ ಇದಾಗಿದೆ. ಶಿರಸಿಯ ಆದರ್ಶ ನಗರದ ನಿವಾಸಿ ನಾರಾಯಣ ಭಟ್ (71) ಎಂಬುವವರೇ ಈ ಸಾಧನೆ ಮಾಡಿದವರು.

ಕಾರವಾರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ 1973ರಲ್ಲಿ ಮೆಕ್ಯಾನಿಕಲ್ ಡಿಪ್ಲೊಮಾ ಕೋರ್ಸ್​​ನಲ್ಲಿ ರಾಜ್ಯಕ್ಕೆ ದ್ವಿತೀಯ ಶ್ರೇಣಿ ಪಡೆದಿದ್ದರು. ನಂತರ ಕಾರವಾರದ ಬಿಣಗಾದ ಕಾಸ್ಟಿಕ್ ಸೋಡಾ ಫ್ಯಾಕ್ಟರಿಯಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದರು. ಅಲ್ಲಿ ಸುಮಾರು 1993ರವರೆಗೆ ಕರ್ತವ್ಯ ನಿರ್ವಹಿಸಿ, ಬಳಿಕ ಗುಜರಾತ್​ನಲ್ಲಿ 2013ರವರೆಗೆ ಕಾರ್ಯನಿರ್ವಹಿಸಿ ನಿವೃತ್ತರಾದರು.

ಇದನ್ನೂ ಓದಿ | Home Tuition Class | ಮಂಡ್ಯ ಬಾಲಕಿ ಅತ್ಯಾಚಾರ ಬೆನ್ನಲ್ಲೇ ಅನಧಿಕೃತ ಟ್ಯೂಷನ್‌ಗೆ ಬ್ರೇಕ್‌; ಶಿಕ್ಷಣ ಇಲಾಖೆಯ ಹೊಸ ರೂಲ್ಸ್‌

೨೦೧೯ಕ್ಕೆ ಪಾಲಿಟೆಕ್ನಿಕ್‌ ಕಾಲೇಜಲ್ಲಿ ಪ್ರವೇಶ
ಈಗ ತಮ್ಮ ನಿವೃತ್ತಿ ಜೀವನವನ್ನು ಶಿರಸಿಗೆ ಬಂದು ಕಳೆಯುತ್ತಿದ್ದಾರೆ. ಇವರ ಮಕ್ಕಳು ಕೂಡ ಇಂಜಿನಿಯರ್‌ ಆಗಿ ಹೊರ ದೇಶಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಇವರಿಗೆ ಮನೆಯಲ್ಲಿ ಸುಮ್ಮನೆ ಕುಳಿತು ಸಮಯ ವ್ಯರ್ಥ ಮಾಡುವ ಬದಲು ಸಿವಿಲ್ ಡಿಪ್ಲೊಮಾ ಮಾಡಬೇಕೆಂಬ ಆಸೆ ಹುಟ್ಟಿದೆ. ಅದರಂತೆ ಮನೆಯವರ ಸಹಾಯದಿಂದ ಶಿರಸಿಯ ಆರ್.ಎನ್.ಶೆಟ್ಟಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ 2019ರಲ್ಲಿ ಪ್ರವೇಶಾತಿ ಪಡೆದುಕೊಂಡಿದ್ದಾರೆ.

ಪ್ರಾರಂಭದಲ್ಲಿ ಅಕ್ಕಪಕ್ಕದವರ ಮಾತುಗಳಿಂದ ಕೊಂಚ ಇರಿಸು ಮುರಿಸುಗೊಂಡರೂ, ಅದನ್ನೇ ಪಾಸಿಟಿವ್ ಆಗಿ ತೆಗೆದುಕೊಂಡು ದಿನ ನಿತ್ಯ, ಕಾಲೇಜಿನ ಸಮವಸ್ತ್ರ ಧರಿಸಿ ಸರಿಯಾದ ಸಮಯಕ್ಕೆ ತರಗತಿಗೆ ಹಾಜರಾಗುತ್ತಿದ್ದರು. ಅಷ್ಟೇ ಕಷ್ಟಪಟ್ಟು ಉತ್ತಮ ರೀತಿಯಲ್ಲಿ ಅಭ್ಯಾಸ ಮಾಡುತ್ತಿದ್ದರು.

ತಪ್ಪದೇ ಹೋಂ ವರ್ಕ್‌ ಮಾಡುತ್ತಿದ್ದರು
ಕಾಲೇಜಿನಲ್ಲಿ ಕೊಡುವ ನಿತ್ಯದ ಹೋಮ್ ವರ್ಕ್ ತಪ್ಪದೇ ಮಾಡಿಕೊಂಡು, ಯಾವುದೇ ತಪ್ಪಿಲ್ಲದ ಹಾಗೆ ಅಚ್ಚುಕಟ್ಟಾಗಿ ಅಭ್ಯಾಸ ಮಾಡಿಕೊಂಡು ಬರುವ ವಿದ್ಯಾರ್ಥಿಗಳ ಸಾಲಿನಲ್ಲಿ ಇವರು ಮುಂಚೂಣಿಲ್ಲಿದ್ದರು. ಜತೆಗೆ ಕಾಲೇಜಿನ ಆದರ್ಶ ವಿದ್ಯಾರ್ಥಿಯಾಗಿ ಗುರುತಿಸಿಕೊಂಡಿದ್ದರು. ಮೂರು ವರ್ಷಗಳ ಸಿವಿಲ್ ಡಿಪ್ಲೊಮಾ ಕೋರ್ಸ್​​ಗೆ, ನಿತ್ಯ ತರಗತಿಗೆ ಹಾಜರಾಗಿ ಮೊದಲ ವರ್ಷದಲ್ಲಿ ಶೇ. 91 ಅಂಕ ಗಳಿಸಿ ಪ್ರಥಮ ಸ್ಥಾನಗಳಿಸಿದ್ದರು. ನಂತರ ಅಂತಿಮವಾಗಿ 94.88 ಪ್ರತಿಶತ ಫಲಿತಾಂಶವನ್ನು ದಾಖಲಿಸಿದ್ದಾರೆ.

ಇವರ ಬಗ್ಗೆ ಕಾಲೇಜಿನಲ್ಲಿ ಒಳ್ಳೆಯ ಅಭಿಪ್ರಾಯವಿದ್ದು, ಆದರ್ಶ ವಿದ್ಯಾರ್ಥಿಯಾಗಿ ಗುರುತಿಸಿಕೊಂಡಿದ್ದಾರೆ. ಒಂದು ದಿನವೂ ತರಗತಿಗೆ ಗೈರಾಗದ ಇವರು, ಸಮವಸ್ತ್ರ ಇಲ್ಲದೆ ಹೋದವರೂ ಅಲ್ಲ. ವಿದ್ಯಾಭ್ಯಾಸದ ಜತೆಗೆ ಇತರೆ ಚಟುವಟಿಕೆಯಲ್ಲಿ ತೊಡಗಿ ಉತ್ತಮ ರೀತಿಯಲ್ಲಿ ಸಾಧನೆ ಮಾಡಿದ್ದಾರೆ ಎಂದು ಕಾಲೇಜು ಆಡಳಿತ ಮಂಡಳಿ ತಿಳಿಸಿದೆ.

ಸಿವಿಲ್ ಡಿಪ್ಲೋಮಾ ಪೂರ್ಣಗೊಳಿಸಿ ರಾಜ್ಯದಲ್ಲೇ ಫಸ್ಟ್ ರ‌್ಯಾಂಕ್‌ನಲ್ಲಿ ತೇರ್ಗಡೆಯಾಗಿ ಮಾದರಿಯಾಗಿದ್ದಾರೆ. ನವೆಂವರ್ 2ರಂದು ಬೆಂಗಳೂರಿನಲ್ಲಿ ನಡೆಯಲಿರುವ ಡಿಪ್ಲೊಮಾ ರ‌್ಯಾಂಕ್ ಪಡೆದ ವಿದ್ಯಾರ್ಥಿಗಳ ಅಭಿನಂದನಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು, ತಾಂತ್ರಿಕ ಶಿಕ್ಷಣ ಸಚಿವರು ಇವರನ್ನು ಗೌರವಿಸಲಿದ್ದಾರೆ ಎಂಬುದು ತಿಳಿದು ಬಂದಿದೆ.

ಇದನ್ನೂ ಓದಿ | ಸಹಕಾರಿ ಸೊಸೈಟಿಗಳು ಇನ್ನು ಮುಂದೆ ಸರ್ಕಾರಿ ಇ-ಮಾರ್ಕೆಟ್‌ನಲ್ಲಿ ಖರೀದಿಸಬಹುದು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಉತ್ತರ ಕನ್ನಡ

Uttara Kannada News: ಬನವಾಸಿಯ ಐತಿಹಾಸಿಕ ಶ್ರೀ ಉಮಾಮಧುಕೇಶ್ವರ ದೇವರ ಮಹಾರಥೋತ್ಸವ

Uttara Kannada News: ಬನವಾಸಿಯ ಐತಿಹಾಸಿಕ ಮಾತೋಬರ ಶ್ರೀ ಉಮಾಮಧುಕೇಶ್ವರ ದೇವರ ಮಹಾರಥೋತ್ಸವು ಭಕ್ತ ಸಾಗರದ ಮಧ್ಯೆ ವಿಜೃಂಭಣೆಯಿಂದ ನಡೆಯಿತು.

VISTARANEWS.COM


on

Mathobara Sri Umamadhukeshwara devara Maharathotsava at Banavasi
Koo

ಬನವಾಸಿ: ಬನವಾಸಿಯ ಐತಿಹಾಸಿಕ ಮಾತೋಬರ ಶ್ರೀ ಉಮಾಮಧುಕೇಶ್ವರ ದೇವರ ಮಹಾರಥೋತ್ಸವು ಭಕ್ತ ಸಾಗರದ ಮಧ್ಯೆ ವಿಜೃಂಭಣೆಯಿಂದ (Uttara Kannada News) ನಡೆಯಿತು.

ಮಹಾರಥೋತ್ಸವದ ಅಂಗವಾಗಿ ಗುರುವಾರ ಬೆಳಗ್ಗೆ ಶ್ರೀ ಮಧುಕೇಶ್ವರ ದೇವರಿಗೆ ವಿಶೇಷ ಪೂಜೆ ನೆರವೇರಿಸಿ, ಬಳಿಕ ದೇವರ ಉತ್ಸವ ಮೂರ್ತಿಯನ್ನು ಅಲಂಕೃತ ಪಲ್ಲಕ್ಕಿಯಲ್ಲಿಟ್ಟು ವಿವಿಧ ವಾದ್ಯ ಮೇಳದೊಂದಿಗೆ ಮೆರವಣಿಗೆ ಮಾಡಲಾಯಿತು. ರಥಕ್ಕೆ ಪೂಜೆ ಸಲ್ಲಿಸಿದ ಬಳಿಕ ಶ್ರೀ ಉಮಾಮಧುಕೇಶ್ವರ ದೇವರ ಉತ್ಸವ ಮೂರ್ತಿಯನ್ನು ಮನ್ಮಹಾಸ್ಯಂದನ ರಥದಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು.

ಇದನ್ನೂ ಓದಿ: Jackfruit Benefits: ಈ ಬೇಸಿಗೆಯಲ್ಲಿ ಹಲಸಿನಹಣ್ಣನ್ನು ಯಾಕೆ ತಿನ್ನಲೇಬೇಕು ಗೊತ್ತೆ? ಇಲ್ಲಿವೆ 10 ಕಾರಣಗಳು!

ಪ್ರತಿಷ್ಟಾಪನೆಯ ನಂತರ ಭಕ್ತರಿಗೆ ದರ್ಶನಕ್ಕಾಗಿ ಅವಕಾಶ ಕಲ್ಪಿಸಲಾಗಿತ್ತು. ಸಾವಿರಾರು ಭಕ್ತರು ಸರದಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದು, ಭಕ್ತಿ ಸಮರ್ಪಿಸಿದರು. ರಾತ್ರಿ 12 ಗಂಟೆಯವರೆಗೆ ಸಾವಿರಾರು ಭಕ್ತರು ದರ್ಶನ ಪಡೆದರು.

ಬಳಿಕ ರಾತ್ರಿ 12-30ಕ್ಕೆ ಮಹಾಮಂಗಳಾರತಿ ನೆರವೇರಿದ ಬಳಿಕ ಭಕ್ತರ ಹರ್ಷೋದ್ಗಾರದ ನಡುವೆ ಶ್ರೀ ಮಧುಕೇಶ್ವರ ದೇವರ ಮಹಾರಥೋತ್ಸವ ಆರಂಭಗೊಂಡಿತು. ಬೃಹತ್ ರುದ್ರಾಕ್ಷಿ ಮಾಲೆ, ವಿವಿಧ ಫಲ-ಪುಷ್ಪ, ವಿದ್ಯುತ್ ದೀಪಗಳಿಂದ ಅಲಂಕರಿಸಿದ ಮಹಾರಥವನ್ನು ಭಕ್ತ ಸಮೂಹ ಹರಹರ ಮಹಾದೇವ ಎಂಬ ಜಯ ಘೋಷ ಮೊಳಗಿಸುತ್ತ ಎಳೆಯುತ್ತ ಸಾಗಿದರು.

ಇದನ್ನೂ ಓದಿ: Wipro Q4 Results: ಐಟಿ ದೈತ್ಯ ವಿಪ್ರೋದ ನಿವ್ವಳ ಲಾಭದಲ್ಲಿ ಶೇ. 8ರಷ್ಟು ಕುಸಿತ

ನೆರೆದಿದ್ದ ಸಾವಿರಾರು ಭಕ್ತರು ಹೂ, ಬಾಳೆಹಣ್ಣು ರಥಕ್ಕೆ ಎಸೆದು ಭಕ್ತಿ ಸಮರ್ಪಿಸಿದರು. ಮಹಾ ರಥೋತ್ಸವವು ಶುಕ್ರವಾರ ಬೆಳಿಗ್ಗೆ 5 ಗಂಟೆ ವೇಳೆಗೆ ಸಂಪನ್ನಗೊಂಡಿತು.

Continue Reading

ಮಳೆ

Karnataka Weather : ವರ್ಷಾಘಾತಕ್ಕೆ ಉತ್ತರ ಕರ್ನಾಟಕ ಸುಸ್ತು; ರಾತ್ರಿಯೆಲ್ಲ ಗಾಳಿ ಸಹಿತ ಮಳೆಯಾರ್ಭಟ

Rain News : ಹಲವೆಡೆ ಸುರಿಯುತ್ತಿರುವ ಬಿರುಗಾಳಿ ಮಳೆಯು ನಾನಾ ಅನಾಹುತಗಳನ್ನು ಸೃಷ್ಟಿ ಮಾಡಿದೆ. ಗಾಳಿ ಮಳೆಗೆ ಮನೆಯ ಚಾವಣಿ ಹಾರಿ ಹೋಗಿದೆ. ಮತ್ತೊಂದು ಕಡೆಗೆ ಸಿಡಿಲಿಗೆ ಜಾನುವಾರು ಹಾಗೂ ತೆಂಗಿನ ಮರ ಸುಟ್ಟು ಕರಕಲಾಗಿದೆ. ಮುಂದಿನ 3 ಗಂಟೆಯಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka weather Forecast) ನೀಡಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಬೇಸಿಗೆ ಮಳೆ (Rain News) ಅಬ್ಬರ ಜೋರಾಗಿದೆ. ಬೆಂಗಳೂರು ಗ್ರಾಮಾಂತರದ ದೊಡ್ಡಬಳ್ಳಾಪುರ ಹಾಗೂ ಯಲಹಂಕದಲ್ಲಿ ವರ್ಷದ ಮೊದಲ ಮಳೆಯಾಗಿದೆ. ಕಾದ ಕೆಂಡದಂತಾಗಿದ್ದ ಧರೆಗೆ ಶುಕ್ರವಾರ ಮಧ್ಯಾಹ್ನ ಕೆಲಕಾಲ ಸುರಿದ ಮಳೆಯು ಜನರಲ್ಲಿ ಸಂತಸ (Karnataka weather Forecast) ಮೂಡಿಸಿತ್ತು.

ಶುಕ್ರವಾರ ಸಂಜೆ ನಂತರ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಕಲಬುರಗಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಮೇಲ್ಮೈ ಗಾಳಿಯೊಂದಿಗೆ ಲಘು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಜತೆಗೆ ಬಳ್ಳಾರಿ, ಬೀದರ್‌, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಮೈಸೂರು, ರಾಮನಗರ, ಶಿವಮೊಗ್ಗದ ಒಂದೆರಡು ಕಡೆಗಳಲ್ಲಿ ಗಾಳಿ ಸಹಿತ ಮಳೆಯಾಗಿದೆ.

ಇನ್ನೂ ತುಮಕೂರಿನ ಕುಣಿಗಲ್ ತಾಲೂಕು ಡಿ.ಹೊಸಹಳ್ಳಿ, ರಾಜೇಂದ್ರಪುರ ಭಾಗದಲ್ಲಿ ಗಾಳಿ- ಮಳೆಯ ಅಬ್ಬರಕ್ಕೆ ಮನೆಯ ಮೇಲ್ಛಾವಣಿಗಳು ಹಾರಿಹೋಗಿದ್ದವು. ಜತೆಗೆ ಮರಗಳೆಲ್ಲವೂ ಧರೆಗುರುಳಿದ್ದವು. ಕುಣಿಗಲ್ ತಾಲೂಕಿನ ಹಲವೆಡೆ ನಿನ್ನೆ ತುಂತುರು ಮಳೆಯೊಂದಿಗೆ ಬಿರುಗಾಳಿ ಬೀಸಿದೆ. ಬಿರುಗಾಳಿಯ ರಭಸಕ್ಕೆ 30ಕ್ಕೂ ಹೆಚ್ಚು ಮರಗಳು ನೆಲಸಮವಾಗಿತ್ತು. ಡಿ.ಹೊಸಹಳ್ಳಿಯಲ್ಲಿ ಶಾಲಾ ಕಟ್ಟಡದ ಮೇಲೆ ಬೃಹತ್ ಗಾತ್ರದ ಮರವೊಂದು ಬಿದ್ದಿತ್ತು. ಇನ್ನು ರಾಜೇಂದ್ರಪುರ ಗ್ರಾಮದಲ್ಲಿ ಕಲ್ಲೂರಯ್ಯ, ಬರಿಯಯ್ಯ, ಚಿಕ್ಕಕೂರಲಯ್ಯ ಎಂಬುವವರ ಮನೆಗಳ ಮೇಲ್ಛಾವಣಿಯೇ ಹಾರಿಹೋಗಿತ್ತು. ಸ್ಥಳಕ್ಕೆ ಕುಣಿಗಲ್ ಶಾಸಕ ಡಾ.ರಂಗನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದನ್ನೂ ಓದಿ: Fraud Case : ಉದ್ಯಮಿಗೆ ಚಮತ್ಕಾರಿ ಚೆಂಬು ಕೊಟ್ಟವರು ಅರೆಸ್ಟ್‌; 22 ಬ್ಯಾಂಕ್‌ಗಳಿಗೆ ಟೋಪಿ ಹಾಕಿದ ಫ್ಯಾಮಿಲಿ ಲಾಕ್‌

ಸಿಡಿಲು ಬಿಡಿದು ಹೊತ್ತಿ ಉರಿದ ತೆಂಗಿನ ಮರ

ಚಿಕ್ಕಮಗಳೂರಿನ ಬಾಳೆಹೊನ್ನುರು-ಕೊಪ್ಪ ರಸ್ತೆಯಲ್ಲಿ ಮಧ್ಯರಾತ್ರಿ ಸಿಡಿಲು ಬಡಿದು ತೆಂಗಿನ ಮರವೊಂದು ಹೊತ್ತಿ ಉರಿದಿತ್ತು. ಕೊಪ್ಪ ರಸ್ತೆಯ ಇಸಾಕ್ ಎಂಬುವರ ಮನೆಯ ತೆಂಗಿನ ಮರ ಹೊತ್ತಿ ಉರಿದಿತ್ತು. ಸಿಡಿಲು ಬಡಿದು ಸಂಪೂರ್ಣ ಸುಟ್ಟುಹೋಗಿತ್ತು. ಕಳೆದ ರಾತ್ರಿ ಬಾಳೆಹೊನ್ನೂರು ಸುತ್ತಮುತ್ತ ಗಾಳಿ-ಮಳೆ ಸುರಿದಿತ್ತು.

karnataka weather Forecast

ಸಿಡಿಲಿಗೆ ಮುರಿದು ಬಿದ್ದ ದೇವಾಲಯದ ಗರುಡುಗಂಬ

ಸಿಡಿಲು ಬಡಿದು ದೇವಾಲಯದ ಗರುಡುಗಂಬ ಮುರಿದು ಬಿದ್ದಿತ್ತು. ವಿಜಯನಗರ ಜಿಲ್ಲೆಯ ಹಡಗಲಿ ತಾಲೂಕಿನ ಹಗರನೂರಿನಲ್ಲಿ ಘಟನೆ ನಡೆದಿತ್ತು. ನಿನ್ನೆ ತಡರಾತ್ರಿ ಗುಡುಗು ಸಹಿತ ಆಲಿಕಲ್ಲು ಮಳೆಯಾಗಿತ್ತು. ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಸೇರಿದ ಗರಡುಗಂಬಕ್ಕೆ ಸಿಡಿಲು ಬಡಿದ ಪರಿಣಾಮ ಮುರಿದು ಬಿದ್ದಿತ್ತು. ಅಲ್ಲದೆ ಹಿರೇಹಡಗಲಿಯಲ್ಲಿ ರೈತ ಬಂದ್ರಕಳ್ಳಿ ಲಂಕೆಪ್ಪ ಎಂಬವರ ಹಸುವು ಸಿಡಿಲಿಗೆ ಬಲಿಯಾಗಿತ್ತು. ಹಿರೇಕೊಳಚಿ, ಚಿಕ್ಕಕೊಳಚಿ, ನಾಗತಿಬಸಾಪುರ ಹಿರೇಹಡಗಲಿ ಸೇರಿ ಹತ್ತಾರು ಗ್ರಾಮಗಳಲ್ಲಿ ಮಳೆಯಾಗಿದೆ. ಹಗರನೂರು ಗ್ರಾಮದ ರಸ್ತೆ ಮೇಲೆ ಮರಗಳು ಬಿದ್ದು ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ವಾಸದ ಮನೆ, ದನದ ಕೊಟ್ಟಿಗೆ ಮೇಲೆ ಹಾಕಲಾಗಿದ್ದ ತಗಡುಗಳು ಬಿರುಗಾಳಿಗೆ ಹಾರಿಹೋಗಿದ್ದವು.

ಉತ್ತರ ಕರ್ನಾಟಕದಲ್ಲಿ ಮಳೆ ಅಬ್ಬರ

ಗುರುವಾರದಂದು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಕರಾವಳಿ, ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಅಥಣಿ ಹಾಗೂ ನಿಪ್ಪಾಣಿಯಲ್ಲಿ ತಲಾ 6 ಸೆಂ.ಮೀ ಮಳೆಯಾಗಿದೆ. ಮಹಾಲಿಂಗಪುರ 4, ಹೊನ್ನಾವರ, ಲೋಕಾಪುರ, ಗದಗ, ಚಿಕ್ಕೋಡಿ, ಸೇಡಬಾಳ, ಟಿಕ್ಕೋಟ, ಹುಂಚದಕಟ್ಟೆ, ಬೇಲೂರು, ತ್ಯಾಗರ್ತಿಯಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ.

ಮುಂಡಗೋಡು, ಹಾವೇರಿ, ಹಾವೇರಿ ಎಪಿಎಂಸಿ , ರಬಕವಿ , ಕುಂದಗೋಳ , ಸಂಕೇಶ್ವರ, ಕಲಘಟಗಿ , ಯಡವಾಡ, ಪೊನ್ನಂಪೇಟೆ, ಕೊಡಗು, ಹರಪನಹಳ್ಳಿಯಲ್ಲಿ ತಲಾ 2 ಸೆಂ.ಮೀ ಹಾಗೂ ಹಳಿಯಾಳ, ಸಿದ್ದಾಪುರ, ಗೋಕಾಕ್‌ , ರಾಣೆಬೆನ್ನೂರು, ಧಾರವಾಡ, ಮಂಡ್ಯದಲ್ಲಿ 1 ಸೆಂ.ಮೀ ಮಳೆಯಾಗಿದೆ. ರಾಜ್ಯದಲ್ಲಿ ಗರಿಷ್ಠ ಉಷ್ಣಾಂಶ 41.4 ಡಿ.ಸೆ ಕಲಬುರಗಿ ಮತ್ತು ರಾಯಚೂರಿನಲ್ಲಿ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉತ್ತರ ಕನ್ನಡ

Self Harming : ಕಾಲೇಜಿನಿಂದ ಬಂದವಳೇ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ

Self Harming : ಕಾಲೇಜು ಮುಗಿಸಿ ಮನೆಗೆ ವಾಪಸ್‌ ಬಂದಿದ್ದ ಯುವತಿ, ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದು ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

VISTARANEWS.COM


on

By

Self Harming In Karwar
Koo

ಕಾರವಾರ: ಬಾವಿಗೆ ಹಾರಿ ಯುವತಿಯೊಬ್ಬಳು ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾಳೆ. ಈ ಘಟನೆ ಉತ್ತರಕನ್ನಡ ಜಿಲ್ಲೆಯ ಭಟ್ಕಳದ ಬೆಳಕೆಯ ಕಟಗೇರಿಯಲ್ಲಿ ನಡೆದಿದೆ. ದೀಕ್ಷಾ ನಾಯ್ಕ (22) ಮೃತ ದುರ್ದೈವಿ.

ದೀಕ್ಷಾ ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿಯಾಗಿದ್ದಳು. ಎಂದಿನಂತೆ ಬೆಳಗ್ಗೆ ಕಾಲೇಜಿ ಹೋಗಿ ಮನೆಗೆ ಬಂದಿದ್ದಳು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಗಳು ಕಾಣದಿದ್ದಾಗ ಪೋಷಕರು ಹುಡುಕಾಟ ನಡೆಸಿದ್ದಾರೆ. ಕಡೆಗೆ ಅನುಮಾನಗೊಂಡು ಬಾವಿಯಲ್ಲಿ ನೋಡಿದಾಗ ಮೃತದೇಹವು ಪತ್ತೆಯಾಗಿದೆ.

ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀರಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ: Assault Case: ಸಿಸಿಬಿ ಪೊಲೀಸರ ಮೇಲೆ ಕಲ್ಲು, ದೊಣ್ಣೆಯಿಂದ ನೈಜೀರಿಯಾ ಪ್ರಜೆಗಳು ಅಟ್ಯಾಕ್‌

ಸಾಲಗಾರರ ಕಾಟ; ಹೆಂಡತಿ-ಮಕ್ಕಳಿಗೆ ವಿಷವಿಕ್ಕಿ ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪಾಪಿ

ಮಂಡ್ಯ: ಐಪಿಎಲ್ ಕ್ರಿಕೆಟ್‌ ಬೆಟ್ಟಿಂಗ್‌ನಲ್ಲಿ (IPL‌ Betting) ಲಕ್ಷಾಂತರ ರೂಪಾಯಿ ಕಳೆದುಕೊಂಡ ವ್ಯಕ್ತಿಯೊಬ್ಬ ಸಾಲಗಾರರ ಕಾಟಕ್ಕೆ ಬೇಸತ್ತು, ಹೆಂಡತಿ, ಮಕ್ಕಳಿಗೆ ವಿಷ ನೀಡಿ (Self Harming) ಕೊಂದಿದ್ದಾನೆ. ಬಳಿಕ ತಾನು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಮಂಡ್ಯದ ನಾಗಮಂಗಲ ಪಟ್ಟಣದಲ್ಲಿ ಘಟನೆ ನಡೆದಿದೆ.

ನರಸಿಂಹ ಎಂಬಾತ ಈ ಕೃತ್ಯವೆಸಗಿದ್ದಾನೆ. ಪತ್ನಿ ಕೀರ್ತನ (23) ಮಕ್ಕಳಾದ ಜಯಸಿಂಹ (4) ದೀಪಿಕಾ (1) ಮೃತ ದುರ್ದೈವಿ. ಅಸ್ವಸ್ಥನಾಗಿರುವ ನರಸಿಂಹನನ್ನು ನಾಗಮಂಗಲ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಐಪಿಎಲ್ ಕ್ರಿಕೆಟ್‌ ನೋಡುತ್ತಿದ್ದ ನರಸಿಂಹ ಬೆಟ್ಟಂಗ್‌ನ ಹಿಂದೆ ಬಿದ್ದಿದ್ದ. ಇದರಲ್ಲಿ ಲಕ್ಷಾಂತರ ರೂಪಾಯಿ ಹಣವನ್ನು ಕಳೆದುಕೊಂಡಿದ್ದ ಎಂದು ತಿಳಿದು ಬಂದಿದೆ. ಬೆಟ್ಟಿಂಗ್‌ನಲ್ಲಿ ಹಣ ಕಳೆದುಕೊಳ್ಳುತ್ತಿದ್ದರೂ ಇವತ್ತಲ್ಲ ನಾಳೆ ಮರಳಿ ಬರುತ್ತದೆ ಎನ್ನುವ ಭರವಸೆಯೊಂದಿಗೆ ಮೇಲಿಂದ ಮೇಲೆ ಸಾಲ ಮಾಡಿ ಲಕ್ಷಾಂತರ ರೂ. ಕಳೆದುಕೊಂಡಿದ್ದ.

ಇದರಿಂದ ಮನನೊಂದ ನರಸಿಂಹ ಪತ್ನಿ ಹಾಗೂ ಪುಟ್ಟ ಮಕ್ಕಳಿಬ್ಬರಿಗೆ ವಿಷ ನೀಡಿ ಹತ್ಯೆ ಮಾಡಿದ್ದಾನೆ. ಅವರೆಲ್ಲೂ ಮೃತಪಟ್ಟ ಬಳಿಕ ತಾನೂ ವಿಷ ಸೇವಿಸಿದ್ದಾನೆ. ಸದ್ಯ ನಾಗಮಂಗಲ ಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: Road Accident : ಸೈಕಲ್‌ಗೆ ಗುದ್ದಿದ ಕಾರು, ನರಳಾಡಿ ವ್ಯಕ್ತಿ ಸಾವು; ಹಿಟ್‌ ಆ್ಯಂಡ್‌ ರನ್‌ಗೆ ಬೈಕ್‌ ಸವಾರ ಬಲಿ

ರೈಲಿಗೆ ತಲೆ ಕೊಟ್ಟು ಮಣಿಪಾಲ್‌ ಆಸ್ಪತ್ರೆಯ ಸ್ಟಾಫ್ ನರ್ಸ್ ಸೂಸೈಡ್‌

ಬೆಂಗಳೂರು: ರೈಲಿಗೆ ಸಿಲುಕಿ ಯುವಕನೊಬ್ಬ ಆತ್ಮಹತ್ಯೆಗೆ (Student death) ಶರಣಾಗಿದ್ದಾರೆ. ಬೆಂಗಳೂರಿನ ದೀಪಾಂಜಲಿನಗರ ರೈಲ್ವೆ ಟ್ರಾಕ್ ಬಳಿ ಘಟನೆ ನಡೆದಿದೆ. ವಿಜಯಪುರ ಮೂಲದ ಚನ್ನಬಸು ಅಶೋಕ್ (22) ಮೃತ ದುರ್ದೈವಿ.

ಚನ್ನಬಸು ಅಶೋಕ್‌ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ. ಬೆಂಗಳೂರಿನ ತನ್ನ ಚಿಕ್ಕಮ್ಮನೊಟ್ಟಿಗೆ ವಾಸವಾಗಿದ್ದ. ಇಂದು ಗುರುವಾರ ಮನೆಯಿಂದ ಹೊರಟವನು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸಿಟಿ ರೈಲ್ವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : 40 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ; ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

Rain News: ರಾಜ್ಯದ ಹಲವೆಡೆ ಮಳೆಯು ಅಬ್ಬರಿಸುತ್ತಿದೆ. ಗುಡುಗು, ಸಿಡಿಲು ಸಹಿತ ಬಿರುಗಾಳಿ ಮಳೆಯಾಗುತ್ತಿದ್ದು, ಜನರು ತತ್ತರಿಸಿ ಹೋಗಿದ್ದಾರೆ. ಶುಕ್ರವಾರವೂ ಭಾರಿ ಮಳೆಯಾಗುವ ನಿರೀಕ್ಷೆ ಇದ್ದು, ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ. ಜತೆಗೆ ವಿವಿಧೆಡೆ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

ದಕ್ಷಿಣ ಒಳನಾಡಿನ ಮೈಸೂರು ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ನಿರೀಕ್ಷೆ ಇದೆ.

ಉತ್ತರ ಒಳನಾಡಿನ ಬೆಳಗಾವಿ ಮತ್ತು ಹಾವೇರಿ ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗಲಿದೆ. ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಕರಾವಳಿಯ ಉತ್ತರ ಕನ್ನಡ ಜಿಲ್ಲೆಯಲ್ಲಿ ಚದುರಿದಂತೆ ಹಾಗೂ ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: IPL‌ Betting: ಸಾಲಗಾರರ ಕಾಟ; ಹೆಂಡತಿ-ಮಕ್ಕಳಿಗೆ ವಿಷವಿಕ್ಕಿ ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪಾಪಿ

ತಾಪಮಾನದ ಮುನ್ಸೂಚನೆ

ಏಪ್ರಿಲ್ 19 ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 2 ದಿನಗಳಲ್ಲಿ ಗರಿಷ್ಟ ಉಷ್ಣಾಂಶದಲ್ಲಿ ಹೆಚ್ಚಿನ ಬಡಲಾವಣೆ ಇರುವುದಿಲ್ಲ. ನಂತರದ 3 ದಿನಗಳವರೆಗೆ ಕ್ರಮೇಣ 2-3 ಡಿ.ಸೆ ಏರಿಕೆಯಾಗುತ್ತದೆ.

ಗುಡುಗು ಮುನ್ನೆಚ್ಚರಿಕೆ

ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಗಾಳಿಯ ವೇಗ ಗಂಟೆಗೆ 30-40 ಕಿಮೀ ತಲುಪುವ ಜತೆಗೆ ಮೇಲ್ಮೈ ಮಾರುತಗಳು ಬಲವಾದ ಮತ್ತು ರಭಸದಿಂದ ಕೂಡಿರುವ ಸಾಧ್ಯತೆಯಿದೆ.

ಮುಂದಿನ 48 ಗಂಟೆಯಲ್ಲಿ ಭಾಗಶಃ ಮೋಡ ಕವಿದ ಆಕಾಶವಿರುತ್ತದೆ. ಸಂಜೆ/ರಾತ್ರಿ ಸಮಯದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ. ಗರಿಷ್ಠ ಉಷ್ಣಾಂಶ 37 ಮತ್ತು ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Diabetic Controle
ಲೈಫ್‌ಸ್ಟೈಲ್9 mins ago

Diabetic Controle: ಕಾಡುವ ಮಧುಮೇಹ ನಿಯಂತ್ರಣಕ್ಕೆ ಇಲ್ಲಿದೆ ಸುಲಭ ತಂತ್ರ

Banned Films
ಸಿನಿಮಾ10 mins ago

Banned Film: ಈ 9 ಹಾಲಿವುಡ್ ಚಿತ್ರಗಳು ಭಾರತದಲ್ಲಿ ಬ್ಯಾನ್!

Workers protest
ವಿದೇಶ15 mins ago

Workers protest: ಇಸ್ರೇಲ್​ ಜತೆಗಿನ ಒಪ್ಪಂದ ವಿರೋಧಿಸಿ ಪ್ರತಿಭಟಿಸಿದ್ದ ಗೂಗಲ್​​ನ 28​ ಉದ್ಯೋಗಿಗಳ ವಜಾ

Cardiac Arrest
ಲೈಫ್‌ಸ್ಟೈಲ್20 mins ago

Cardiac Arrest: ಮಹಿಳೆಯರೇ ಹುಷಾರು; ನೀವು ಮಾಡುವ ಈ ತಪ್ಪುಗಳೇ ಹೃದಯಾಘಾತಕ್ಕೆಕಾರಣ!

Mathobara Sri Umamadhukeshwara devara Maharathotsava at Banavasi
ಉತ್ತರ ಕನ್ನಡ20 mins ago

Uttara Kannada News: ಬನವಾಸಿಯ ಐತಿಹಾಸಿಕ ಶ್ರೀ ಉಮಾಮಧುಕೇಶ್ವರ ದೇವರ ಮಹಾರಥೋತ್ಸವ

MLA Narendraswamy Election campaign in various places at Malavalli Assembly Constituency
ಮಂಡ್ಯ24 mins ago

Lok Sabha Election 2024: ರೈತನ ಮಗ ಸ್ಟಾರ್ ಚಂದ್ರು ಗೆಲ್ಲಿಸಿ, ಜಿಲ್ಲೆಯ ಸ್ವಾಭಿಮಾನ ಉಳಿಸಿ: ಶಾಸಕ ನರೇಂದ್ರಸ್ವಾಮಿ

IPL 2024
ಪ್ರಮುಖ ಸುದ್ದಿ34 mins ago

IPL 2024 : ಆರ್​ಸಿಬಿ, ಕೊಹ್ಲಿಯ ನೆರವು ಸ್ಮರಿಸಿದ ಕೆ. ಎಲ್ ರಾಹುಲ್​

Lok Sabha Election 2024
ಕರ್ನಾಟಕ46 mins ago

Lok Sabha Election 2024: ಕಾಂಗ್ರೆಸ್‌-ಬಿಜೆಪಿ ಮಧ್ಯೆ ʼಚೆಂಬುʼ ವಾರ್; ಗ್ಯಾರಂಟಿಗಳಿಂದ ಜನರಿಗೆ ಕಾಂಗ್ರೆಸ್‌ ಟೋಪಿ ಎಂದ ವಿಜಯೇಂದ್ರ

Summer Fashion
ಫ್ಯಾಷನ್51 mins ago

Summer Fashion: ಬದಲಾಯ್ತು ಜೆನ್‌ ಜಿ ಹುಡುಗರ ಸಮ್ಮರ್‌ ಫ್ಯಾಷನ್‌ ಸ್ಟೇಟ್‌ಮೆಂಟ್ಸ್‌

Instagram Reel
ದೇಶ1 hour ago

Instagram Reel: ಪ್ರಾಣಕ್ಕೇ ಕುತ್ತು ತಂದ ಇನ್‌ಸ್ಟಾಗ್ರಾಮ್‌ ರೀಲ್ಸ್‌; ಸಾಹಸ ಪ್ರದರ್ಶಿಸಲು ಹೋಗಿ 21 ವರ್ಷದ ಯುವಕ ಸಾವು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Neha Murder Case
ಹುಬ್ಬಳ್ಳಿ4 hours ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ14 hours ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ3 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ4 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20244 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20245 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ6 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ7 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ1 week ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

ಟ್ರೆಂಡಿಂಗ್‌