ನವದೆಹಲಿ: ಜೂನ್ 1 ರಿಂದ ಜುಲೈ 31 ರವರೆಗೆ ಕರ್ನಾಟಕದ (Karnataka) ಕರಾವಳಿ (Coastal Belt) ಪ್ರದೇಶದಲ್ಲಿ ವಾರ್ಷಿಕ 61 ದಿನಗಳ ಕಾಲ ಮೀನುಗಾರಿಕೆಯನ್ನು ನಿಷೇಧಿಸಲಾಗಿದೆ(Fishing Ban). 10 ಎಚ್‌ಪಿ ಮತ್ತು ಅದಕ್ಕಿಂತ ಹೆಚ್ಚಿನ ಇನ್‌ಬೋರ್ಡ್ ಅಥವಾ ಔಟ್‌ಬೋರ್ಡ್ ಎಂಜಿನ್‌ಗಳನ್ನು ಅಳವಡಿಸಲಾಗಿರುವ ಯಾಂತ್ರೀಕೃತ ದೋಣಿಗಳು ಮತ್ತು ಸಾಂಪ್ರದಾಯಿಕ ದೋಣಿಗಳನ್ನು ಈ ಅವಧಿಯಲ್ಲಿ ಮೀನುಗಾರಿಕೆ ಚಟುವಟಿಕೆಗಳನ್ನು ಕೈಗೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಹೀಗಿದ್ದಾಗ್ಯೂ, 10 ಎಚ್‌ಪಿ ಸಾಮರ್ಥ್ಯದವರೆಗಿನ ಯಾಂತ್ರಿಕೃತ ಎಂಜಿನ್‌ಗಳು ಮತ್ತು ದೇಶಿ ದೋಣಿಗಳನ್ನು ಬಳಸಿಕೊಂಡು ಕರಾವಳಿ ಮೀನುಗಾರಿಕೆ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಮೀನುಗಾರರಿಗೆ ಅನುಮತಿ ನೀಡಲಾಗಿದೆ ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಈ 61 ದಿನಗಳ ನಿಷೇಧದ ಸಮಯದಲ್ಲಿ ನಿಯಮಗಳನ್ನು ಉಲ್ಲಂಘಿಸುವ ಮೀನುಗಾರರಿಗೆ ಕರ್ನಾಟಕ ಸಮುದ್ರ ಮೀನುಗಾರಿಕೆ ಕಾಯ್ದೆ 1986ರ ಅಡಿಯಲ್ಲಿ ದಂಡ ವಿಧಿಸಲಾಗುವುದು ಮತ್ತು ಒಂದು ವರ್ಷದವರೆಗೆ ಡೀಸೆಲ್ ಸಬ್ಸಿಡಿ ಪಡೆಯಲು ಅನರ್ಹಗೊಳಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ: Uttara kannada News: ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆ; 12 ಜನ ಮೀನುಗಾರರ ರಕ್ಷಣೆ
ಮಳೆಗಾಲದ ವೇಳೆ ಆಳ ಸಮುದ್ರದಲ್ಲಿ ಮೀನುಗಾರಿಕೆ ಚಟುವಟಿಕೆಗಳನ್ನು ನಿಯಂತ್ರಿಸುವುದು ಮತ್ತು ಸಮುದ್ರ ಸಂಪನ್ಮೂಲಗಳನ್ನು ಸಂರಕ್ಷಿಸುವುದು ಈ ನಿಷೇಧದ ಹಿಂದಿನ ಉದ್ದೇಶವಾಗಿದೆ. ಮಳೆಗಾಲವು ಪ್ರಮುಖ ಮೀನು ಪ್ರಭೇದಗಳ ಸಂತಾನೋತ್ಪತ್ತಿ ಅವಧಿಯಾಗಿರುತ್ತದೆ. ಹಾಗಾಗಿ ಎಲ್ಲಾ ಮೀನುಗಾರರು ಆದೇಶವನ್ನು ಪಾಲಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕರ್ನಾಟಕದ ಇನ್ನಷ್ಟು ಕುತೂಹಲಕರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.