Site icon Vistara News

Car Accident: ತೆಲಂಗಾಣದಲ್ಲಿ ಭೀಕರ ಕಾರು ಅಪಘಾತ; ಬಳ್ಳಾರಿ ಬಸವನಕುಂಟೆಯ ಐವರ ದುರ್ಮರಣ

Five killed in car accident in Telangana

ಬಳ್ಳಾರಿ: ತೆಲಂಗಾಣದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ (Car Accident) ಬಳ್ಳಾರಿಯ ಬಸವನಕುಂಟೆಯ ಐವರು ದುರ್ಮರಣ ಹೊಂದಿದ್ದಾರೆ. ತೆಲಂಗಾಣದ ವನಪರ್ತಿ ಜಿಲ್ಲೆಯ ಕೊತ್ತಕೋಟ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿಯಾಗಿದ್ದರಿಂದ ಮೂವರು ಮಕ್ಕಳು ಸೇರಿ ಐವರು ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಬಳ್ಳಾರಿ ಬಸವನಕುಂಟೆಯ ನಿವಾಸಿಗಳಾದ ಅಬ್ದುಲ್ ರೆಹಮಾನ್(30), ಫಾತಿಮಾ(50), ಬುಸ್ರಾ(2), ವಾಸಿ (1), ಮರಿಯಾ(5) ಮೃತರು. ಎರ್ಟಿಗಾ ಕಾರಿನಲ್ಲಿ ಏಳು ಜನ ಹೈದರಾಬಾದ್‌ಗೆ ಪ್ರಯಾಣ ಮಾಡುವ ವೇಳೆ ದುರ್ಘಟನೆ ನಡೆದಿದೆ. ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಂದು ಮಗು ಆಸ್ಪತ್ರೆಗೆ ಸಾಗಿಸುವಾಗ ಕೊನೆಯುಸಿರೆಳೆದಿದೆ. ತೀವ್ರವಾಗಿ ಗಾಯಗೊಂಡ ಇಬ್ಬರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ | Sedition Case : ಹೌದಾ, ಅರೆಸ್ಟ್ ಆಗಿದ್ದಾರಾ? ; ದೇಶದ್ರೋಹಿಗಳ ಸೆರೆಗೆ ಪರಮೇಶ್ವರ್‌ ಫಸ್ಟ್‌ ರಿಯಾಕ್ಷನ್‌!

ಪ್ರೀತಿ ನಿರಾಕರಿಸಿದ್ದಕ್ಕೆ 10ನೇ ತರಗತಿ ವಿದ್ಯಾರ್ಥಿನಿಯನ್ನು ಕೊಂದು, ರೈಲಿಗೆ ತಲೆಕೊಟ್ಟ ಯುವಕ!

ಹಾಸನ: ಪ್ರೀತಿ ನಿರಾಕರಿಸಿದ್ದಕ್ಕೆ ಶಾಲಾ ಬಾಲಕಿಯನ್ನು ಕೊಂದು, ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವುದು ಅರಸೀಕೆರೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 10ನೇ ತರಗತಿ ವಿದ್ಯಾರ್ಥಿನಿಯ ಕತ್ತು ಸೀಳಿ ಬರ್ಬರ ಕೊಲೆ (Murder Case) ಮಾಡಿರುವ ಯುವಕ, ಬಳಿಕ ರೈಲಿಗೆ ತಲೆಕೊಟ್ಟು ಪ್ರಾಣ ಬಿಟ್ಟಿದ್ದಾನೆ.

ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಬೆಳಗುಂಬ ಗ್ರಾಮದಲ್ಲಿ ಘಟನೆ ನಡೆದಿದೆ. ಬೆಳಗುಂಬ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಭೂಮಿಕಾ ಕೊಲೆಯಾದ ಬಾಲಕಿ, ಶರತ್‌ (23) ಕೊಲೆಮಾಡಿದ ಆರೋಪಿ. ವಿದ್ಯಾರ್ಥಿನಿ ಶಾಲೆ ಮುಗಿಸಿ ಹೋಗುವಾಗ ತೋಟದಲ್ಲಿ ಆಕೆಯನ್ನು ಅಡ್ಡಗಟ್ಟಿ ಯುವಕ ಕೊಲೆ ಮಾಡಿದ್ದಾನೆ.

ಇದನ್ನೂ ಓದಿ | Naxalite Srimathi: ನಕ್ಸಲ್ ಹೋರಾಟಗಾರ್ತಿ ಶ್ರೀಮತಿ ಪೊಲೀಸ್‌ ಕಸ್ಟಡಿಗೆ

ಕೊಲೆ ಮಾಡಿದ ನಂತರ ಅರಸೀಕೆರೆ ಸಮೀಪ ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಹಾಸನ ಎಸ್ಪಿ ಮೊಹಮ್ಮದ್ ಸುಜೀತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Exit mobile version