Site icon Vistara News

Accident | ಟ್ರಕ್‌- ಆಟೋ ಮುಖಾಮುಖಿ ಡಿಕ್ಕಿಯಾಗಿ ಐವರ ಸಾವು; ಆರು ಮಂದಿಗೆ ಗಂಭೀರ ಗಾಯ

Wall collapse

ಬೀದರ್: ಜಿಲ್ಲೆ ಚಿಟಗುಪ್ಪಾ ತಾಲೂಕಿನ ಬೆಮ್ಮಳಖೇಡ ಗ್ರಾಮದ ಬಳಿ ಟ್ರಕ್ ಹಾಗೂ ಆಟೋ ನಡುವೆ ಮುಖಾಮುಖಿ ಡಿಕ್ಕಿಯಾಗಿ(Accident) ಐವರು ಮೃತಪಟ್ಟು, ಆರು ಮಂದಿಗೆ ಗಂಭೀರ ಗಾಯಗಳಾಗಿವೆ. ಪ್ರಭಾವತಿ (36), ಯಾದಮ್ಮ (40), ಗುಂಡಮ್ಮ (52), ಜಕ್ಕಮ್ಮ (32) ಹಾಗೂ ರುಕ್ಮಿಣಿ (60) ಮೃತರು. ಬೆಮಳಖೇಡಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ. ಗಾಯಾಳುಗಳನ್ನು ಬೀದರ್ ಹಾಗೂ ಮನ್ನಾಖೇಳ್ಳಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಗ್ಗೆ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ, ಹೊಸ ಮತ್ತು ನವೀಕರಿಸಬಹುದಾದ ಇಂಧನ ಖಾತೆ ರಾಜ್ಯ ಸಚಿವ ಹಾಗೂ ಬೀದರ್‌ ಸಂಸದ ಭಗವಂತ ಖೂಬಾ ಟ್ವೀಟ್‌ ಮಾಡಿದ್ದು, ಬೆಮಳಖೇಡಾ ಗ್ರಾಮದ ಹತ್ತಿರ ರಸ್ತೆ ಅಪಘಾತದಲ್ಲಿ ನಮ್ಮ ಜನರ ಸಾವು ಹಾಗೂ ಕೆಲವರು ತೀವ್ರವಾಗಿ ಗಾಯಗೊಂಡಿರುವ ಸುದ್ದಿ ಕೇಳಿ ದುಃಖವಾಯಿತು. ಬ್ರಿಮ್ಸ್ ಆಸ್ಪತ್ರೆಯ ನಿರ್ದೇಶಕರ ಜತೆ ಮಾತನಾಡಿ ಗಾಯಾಳುಗಳಿಗೆ ಅಗತ್ಯ ಚಿಕಿತ್ಸೆ ನೀಡಲು ಸೂಚಿಸಿದ್ದೇನೆ ಎಂದು ಹೇಳಿದ್ದಾರೆ.

ಸದ್ಯ ಬೆಂಗಳೂರಿನಲ್ಲಿರುವ ಕಾರಣ, ನಾಳೆ ಆಸ್ಪತ್ರೆಗೆ ತೆರಳಿ, ಗಾಯಾಳುಗಳನ್ನು ಭೇಟಿ ಮಾಡಿ ವೈದ್ಯರ ಜತೆ ಚರ್ಚಿಸುತ್ತೇನೆ. ಗಾಯಾಳುಗಳು ಶೀಘ್ರವಾಗಿ ಗುಣಮುಖರಾಗಲೆಂದು ಹಾರೈಸುತ್ತಾ, ದೇವರು ಮೃತರ ಆತ್ಮಕ್ಕೆ ಶಾಂತಿ ನೀಡಿ, ಅವರ ಕುಟುಂಬಕ್ಕೆ ದುಃಖ ತಡೆಯುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ | Leopard Attack | ಕೆ.ಆರ್.ನಗರದಲ್ಲಿ ಚಿರತೆ ದಾಳಿಯಿಂದ ಮೂವರಿಗೆ ಗಾಯ; ಸೆರೆ ಹಿಡಿದ ಅರಣ್ಯ ಇಲಾಖೆ ಸಿಬ್ಬಂದಿ

Exit mobile version