ಮಂಗಳೂರು: ಕಾರು ಡಿಕ್ಕಿ ಹೊಡೆದು ಯುವತಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟು, ನಾಲ್ವರು ಯುವತಿಯರು ಗಂಭೀರವಾಗಿ ಗಾಯಗೊಂಡಿರುವ ಘಟನೆ (Hit and Run Case) ನಗರದ ಮಣ್ಣಗುಡ್ಡ ಜಂಕ್ಷನ್ ಬಳಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು, ಫುಟ್‌ಪಾತ್ ಮೇಲೆ ಹೋಗುತ್ತಿದ್ದ ಯುವತಿಯರಿಗೆ ಡಿಕ್ಕಿ ಹೊಡೆದಿದ್ದರಿಂದ ದುರ್ಘಟನೆ ಸಂಭವಿಸಿದೆ.
ಸುರತ್ಕಲ್‌ನ ರೂಪಶ್ರೀ (23) ಮೃತಳು. ಸ್ವಾತಿ (26), ಹಿತ್ನವಿ (16), ಕೃತಿಕಾ (16), ಯತಿಕಾ (12) ಗಾಯಾಳುಗಳು. ನಗರದ ಮಣ್ಣಗುಡ್ಡ ಜಂಕ್ಷನ್ ಬಳಿ ಫುಟ್‌ಪಾತ್ ಮೇಲೆ ಯುವತಿಯರು ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಕಾರು ಫುಟ್‌ಪಾತ್ ಮೇಲೆ ನುಗ್ಗಿ ಯುವತಿಯರಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ರೂಪಶ್ರೀ ಸ್ಥಳದಲ್ಲೇ ಮೃತಪಟ್ಟಿದ್ದು, ಉಳಿದ ನಾಲ್ವರು ಯುವತಿಯರಿ ಗಾಯಗಳಾಗಿವೆ. ಅಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದ ಬಳಿಕ ಕಾರು ನಿಲ್ಲಿಸದೆ ಚಾಲಕ ಪರಾರಿಯಾಗಿದ್ದಾನೆ. ಘಟನೆಯ ದೃಶ್ಯ ಸಮೀಪದ ಕಟ್ಟಡದ ಸಿಸಿ ಟಿವಿಯಲ್ಲಿ ಸೆರೆಯಾಗಿತ್ತು. ನಂತರ ಕಾರು ಚಾಲಕ ಶ್ರೀ ಕಮಲೇಶ್ ಬಲದೇವ್ ಎಂಬಾತನನ್ನು ಪೊಲೀಸರು ಬಂಧಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ | Electric scooter : ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಕ್ಕೆ ಹೊತ್ತಿ ಉರಿದ ಮನೆ!
ಬಸ್ ಡ್ರೈವರ್ ಆದ ಕ್ಲೀನರ್; ಟೋಲ್ ಬಳಿ ನಿಂತಿದ್ದ ಕಾರಿಗೆ ಹಿಂಬದಿಯಿಂದ ಡಿಕ್ಕಿ!
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರದ ದೇವನಹಳ್ಳಿ ಹೊರವಲಯದ ಟೋಲ್ ಪ್ಲಾಜಾದಲ್ಲಿ ಖಾಸಗಿ ಬಸ್‌ವೊಂದು ಕಾರಿಗೆ (Road Accident) ಡಿಕ್ಕಿ ಹೊಡೆದಿದೆ. ಡ್ರೈವರ್ ಬದಲು ಕ್ಲೀನರ್ ಬಸ್ ಚಲಾಯಿಸಿದ್ದೇ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ನೋಡ ನೋಡುತ್ತಿದ್ದಂತೆ ಟೋಲ್‌ನಿಂದ ಮುಂದೆ ಹೋಗುತ್ತಿದ್ದ ಕಾರಿನ ಹಿಂಬದಿಗೆ ಬಸ್ ಡಿಕ್ಕಿ ಹೊಡೆದಿದೆ. ಹೈದರಾಬಾದ್ ಬೆಂಗಳೂರು ಹೆದ್ದಾರಿಯ ದೇವನಹಳ್ಳಿ ಟೋಲ್ ಬಳಿ ಘಟನೆ ನಡೆದಿದ್ದು, ಅಪಘಾತದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಕ್ಲೀನರ್‌ಗೆ ಬಸ್ ಓಡಿಸಲು ಕೊಟ್ಟಿದ್ದರಿಂದ ಟೋಲ್‌ನಲ್ಲಿ ಬಸ್ ನಿಯಂತ್ರಿಸಲಾಗದೆ ಕಾರಿಗೆ ಡಿಕ್ಕಿಯಾಗಿದೆ ಎಂದು ಆರೋಪಿಸಲಾಗಿದೆ. ಅದೃಷ್ಟವಶಾತ್ ಭಾರಿ ಅನಾಹುತವೊಂದು ತಪ್ಪಿದೆ. ಕಾರಿನಲ್ಲಿದ್ದವರು ಹಾಗೂ ಬಸ್‌ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇದನ್ನೂ ಓದಿ | Murder Case : ಬೆತ್ತಲೆಗೊಳಿಸಿ ಇಟ್ಟಿಗೆ ಕಲ್ಲಿನಿಂದ ಹೊಡೆದು ವ್ಯಕ್ತಿಯ ಬರ್ಬರ ಹತ್ಯೆ!
ಖಾಸಗಿ ಬಸ್‌ಗಳ ಅತಿವೇಗದ ಆತುರದಿಂದಲೂ ಇಂತಹ ಅವಘಡಗಳು ನಡೆಯುತ್ತಿವೆ. ಈ ಸಂಬಂಧ ಏರ್‌ಪೋರ್ಟ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.