ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ. ಸುರೇಶ್ ಅವರು, ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಬೆಂಗಳೂರಿನಲ್ಲಿ ಶುಕ್ರವಾರ ಭೇಟಿ ಮಾಡಿ, ಅವೈಜ್ಞಾನಿಕ ಕಾಮಗಾರಿಯಿಂದ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಉಂಟಾದ ಪ್ರವಾಹ ಪರಿಸ್ಥಿತಿಯನ್ನು ಗಮನಕ್ಕೆ ತಂದು, ಸಮಸ್ಯೆ ಸರಿಪಡಿಸಲು ಮನವಿ ಮಾಡಿದರು.
ಇತ್ತೀಚೆಗೆ ಭಾರಿ ಮಳೆ ಸುರಿದಾಗ ರಾಮನಗರ, ಚನ್ನಪಟ್ಟಣ, ಮಂಡ್ಯದಲ್ಲಿ ಬೆಂಗಳೂರು- ಮೈಸೂರು ದಶಪಥ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿಯಿಂದ ಪ್ರವಾಹ ಉಂಟಾಗಿ ಹೆದ್ದಾರಿ ಜಲಾವೃತವಾಗಿತ್ತು. ಅದರಿಂದ ಪಕ್ಕದ ಮನೆಗಳು, ಕೃಷಿ ಜಮೀನುಗಳಿಗೆ ನೀರು ನುಗ್ಗಿ ಜನರು ಸಂಕಷ್ಟ ಅನುಭವಿಸಿದ ಬಗ್ಗೆ ಡಿಕೆ ಸಹೋದರರು, ಕೇಂದ್ರ ಸಚಿವರ ಗಮನಕ್ಕೆ ತಂದು, ಕಾಮಗಾರಿಯನ್ನು ವೈಜ್ಞಾನಿಕವಾಗಿ ಮಾಡಲು ಕ್ರಮ ಕೈಗೊಳ್ಳುವಂತೆ ಕೋರಿದರು.
ಇದೇ ವೇಳೆ ಕನಕಪುರ ಸಮೀಪ ಅರ್ಕಾವತಿ ನದಿಗೆ ಪರ್ಯಾಯ ಸೇತುವೆ ನಿರ್ಮಾಣ ಮಾಡಿ, ಕನಕಪುರ ನಗರ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಉಪಸ್ಥಿತರಿದ್ದರು.
ಇದನ್ನೂ ಓದಿ | ವಿಧಾನಸೌಧದಲ್ಲಿ ʼಅಪ್ಪುʼಗೆ ಕರ್ನಾಟಕ ರತ್ನ ಪ್ರದಾನ: ಮೊದಲ ಬಾರಿ ಕಲಾಕ್ಷೇತ್ರದಿಂದ ಹೊರಗೆ ರಾಜ್ಯೋತ್ಸವ