ಬೆಂಗಳೂರು: ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್‌ಕೆಸಿಸಿಐ)ನ ಅಧ್ಯಕ್ಷ ಪ್ರಸಾದ್ ಹಾಗೂ ಬಿ.ವಿ.ಗೋಪಾಲ್ ರೆಡ್ಡಿ ದೆಹಲಿಯಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ (Flagship event) ಮಾಡಿದ್ದಾರೆ.
ಎಫ್‌ಕೆಸಿಸಿಐನಲ್ಲಿ ನಡೆಯಲಿರುವ ವಿದ್ಯಾರ್ಥಿಗಳ ಮಂಥನ, ಎಕ್ಸ್‌ಪೋ ಅವಾರ್ಡ್ ಸೇರಿದಂತೆ ಫ್ಲಾಗ್‌ಶಿಪ್ ಇವೆಂಟ್‌ಗೆ ಮುಖ್ಯ ಅತಿಥಿಯಾಗಿ ಬರುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಆಹ್ವಾನಿಸಲಾಗಿದೆ. ಭೇಟಿ ವೇಳೆ ಜಿಎಸ್‌ಟಿ ಮತ್ತು ಇತರ ತೆರಿಗೆ ಕಾನೂನುಗಳ ಅನುಷ್ಠಾನದಲ್ಲಿ ಎಫ್‌ಕೆಸಿಸಿಐ ನಿರ್ವಹಿಸಿದ ಸಕ್ರಿಯ ಪಾತ್ರ ಕುರಿತು ವಿತ್ತ ಸಚಿವರೊಂದಿಗೆ ಮಾತುಕತೆ ನಡೆಸಿದ್ದಾರೆ.
ಮುಂದಿನ ತಿಂಗಳು ಎಫ್‌ಕೆಸಿಸಿಐ ಕಚೇರಿಯಲ್ಲಿಯೇ ಕಾರ್ಯಕ್ರಮ ನಡೆಯಲಿದ್ದು, ಈಗಾಗಲೇ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನೂ ಆಹ್ವಾನಿಸಲಾಗಿದೆ.
ಇದನ್ನೂ ಓದಿ | ದೇಶದಲ್ಲಿ 5ಜಿ ಸೇವೆ ಶೀಘ್ರವೇ ಕಾರ್ಯಾರಂಭ: ನಿರ್ಮಲಾ ಸೀತಾರಾಮನ್