ಮೈಸೂರು: ರಾಜ್ಯದಲ್ಲಿ ಧ್ವಜ ದಂಗಲ್ ಮುಂದುವರಿದಿದೆ. ಮಂಡ್ಯದ ಕೆರಗೋಡಿನಲ್ಲಿ ಹನುಮ ಧ್ವಜ ತೆರವು ಬೆನ್ನಲ್ಲೇ ಮೈಸೂರಿನಲ್ಲಿ ಟಿಪ್ಪು ಬಾವುಟಕ್ಕೆ (Tipuʼs Flag) ಆಕ್ಷೇಪ ವ್ಯಕ್ತವಾಗಿದ್ದರಿಂದ ಧ್ವಜವನ್ನು ಜಿಲ್ಲಾಡಳಿತ ತೆರವುಗೊಳಿಸಿದೆ. ಪಾರ್ಕ್‌ನಲ್ಲಿ ಟಿಪ್ಪು ಬಾವುಟ ಹಾರಿಸಲು ಅನುಮತಿ ಕೊಟ್ಟವರಾರು ಎಂದು ಸಂಸದ ಪ್ರತಾಪ್ ಸಿಂಹ ಅವರು ಪ್ರಶ್ನಿಸಿದ ಹಿನ್ನೆಲೆಯಲ್ಲಿ ಎಚ್ಚೆತ್ತ ಜಿಲ್ಲಾಡಳಿತ, ಟಿಪ್ಪು ಬಾವುಟವನ್ನು ತೆರವುಗೊಳಿಸಿದೆ. ಆದರೆ, ಈ ಘಟನೆ ಬೆನ್ನಲ್ಲೇ ನಗರದ ಮತ್ತೊಂದು ಪಾರ್ಕ್‌ನಲ್ಲಿ ಹಸಿರು ಧ್ವಜ ಹಾರಾಡುತ್ತಿರುವುದು ಕಂಡುಬಂದಿದೆ.
ಮೈಸೂರಿನ ಕೈಲಾಸಪುರಂನ ಮೊಟ್ಟೆಕೇರಿಯ ಅಂಬೇಡ್ಕರ್ ಪಾರ್ಕ್‌ನಲ್ಲಿ ಟಿಪ್ಪು ಬಾವುಟ ಹಾರಾಡುತ್ತಿತ್ತು. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಾಕಿ ಸಂಸದರು ಪ್ರಶ್ನಿಸಿದ್ದರು. ಸಿಎಂ ಸಿದ್ದರಾಮಯ್ಯ, ಗೃಹ ಮಂತ್ರಿ ಡಾ.ಜಿ.ಪರಮೇಶ್ವರ್ ಅವರೇ, ಸರ್ಕಾರಿ ಜಾಗದಲ್ಲಿ ಟಿಪ್ಪು ಬಾವುಟ ಹಾರಾಟಕ್ಕೆ ಅನುಮತಿ ಕೊಟ್ಟವರು ಯಾರು ಎಂದು ಪ್ರಶ್ನಿಸಿದ್ದರು. ಹೀಗಾಗಿ ವಿವಾದವಾಗುವ ಮುನ್ನವೇ ಎಚ್ಚೆತ್ತ ಮೈಸೂರು ಜಿಲ್ಲಾಡಳಿತ, ಟಿಪ್ಪು ಬಾವುಟವನ್ನು ತೆರವು ಮಾಡಿದೆ.
ಮೈಸೂರಿನ ಕೈಲಾಸಪುರಂನ ಮೊಟ್ಟೆಕೇರಿ ಶ್ರೀನಿವಾಸ ಟೆಂಪಲ್ ರೋಡ್ ನಲ್ಲಿರುವ ಅಂಬೇಡ್ಕರ್ ಪಾರ್ಕ್ ನಲ್ಲಿ ಟಿಪ್ಪು ಭಾವುಟ ಹಾಕಿದ್ದಾರಲ್ಲಾ ಅವರು ಯಾರ ಅನುಮತಿ ಪಡೆದಿದ್ದಾರೆ ಸಿದ್ದರಾಮಯ್ಯನವರೇ, ಪರಮೇಶ್ವರರೇ? pic.twitter.com/vpnIlbIlno
— Pratap Simha (@mepratap) January 30, 2024
ಒಂದು ಬಾವುಟ ತೆಗೆದು ಪಕ್ಕದಲ್ಲೇ ಇನ್ನೊಂದನ್ನೇಕೆ ಬಿಟ್ಟಿದ್ದೀರಿ?
ಟಿಪ್ಪು ಬಾವುಟ ತೆರವು ಮಾಡಿದ ಬಗ್ಗೆ ಪ್ರತಿಕ್ರಿಯಿಸಿರುವ ಸಂಸದ ಪ್ರತಾಪ್ ಸಿಂಹ ಅವರು, ಮೈಸೂರು ಜಿಲ್ಲಾಡಳಿತಕ್ಕೆ ಧನ್ಯವಾದಗಳು, ಆದರೆ ಒಂದು ಬಾವುಟ ತೆಗೆದು ಪಕ್ಕದಲ್ಲೇ ಇನ್ನೊಂದನ್ನೇಕೆ ಬಿಟ್ಟಿದ್ದೀರಿ? ನಾನೇ ಸ್ಥಳಕ್ಕೆ ಬಂದು ತೋರಿಸಬೇಕಾ? ಕೈಲಾಸಪುರಂ, 4ನೇ ಮುಖ್ಯರಸ್ತೆ, ಅಂಬೇಡ್ಕರ್ ಪಾರ್ಕ್, ಶ್ರೀನಿವಾಸ ದೇವಸ್ಥಾನ ರಸ್ತೆಯಲ್ಲಿ ಮತ್ತೊಂದು ಧ್ವಜವಿರುವುದು ಕಾಣುತ್ತಿಲ್ಲವೇ ಎಂದು ಪ್ರಶ್ನಿಸಿದ್ದಾರೆ.
ಮೈಸೂರು ಜಿಲ್ಲಾಡಳಿತಕ್ಕೆ ಧನ್ಯವಾದಗಳು, ಆದ್ರೆ ಒಂದು ಬಾವುಟ ತೆಗೆದು ಪಕ್ಕದಲ್ಲೇ ಇನ್ನೊಂದನ್ನೇಕೆ ಬಿಟ್ಟಿದ್ದೀರಿ? ನಾನೇ ಸ್ಥಳಕ್ಕೆ ಬಂದು ತೋರಿಸಬೇಕಾ? ಕೈಲಾಸ್ ಪುರಂ, 4 ನೇ ಮುಖ್ಯರಸ್ತೆ, ಅಂಬೇಡ್ಕರ್ ಪಾರ್ಕ್, ಶ್ರೀನಿವಾಸ ದೇವಸ್ಥಾನ ರಸ್ತೆಯಲ್ಲಿ ಮತ್ತೊಂದು ಧ್ವಜವಿರುವುದು ಕಾಣುತ್ತಿಲ್ಲವೇ? pic.twitter.com/mdzSPu3l5q
— Pratap Simha (@mepratap) January 31, 2024
ಇದನ್ನೂ ಓದಿ | Bhatkal News: ಭಟ್ಕಳ ಭಗವಾಧ್ವಜ ತೆರವಿನಲ್ಲಿ ಉಸ್ತುವಾರಿ ಸಚಿವರ ಕೈವಾಡ: ಹರಿಪ್ರಕಾಶ್ ಕೋಣೆಮನೆ ಆರೋಪ
ಬೆಂಗಳೂರಲ್ಲಿ ಮತ್ತೊಂದೆಡೆ ಹಸಿರು ಧ್ವಜ
ಬೆಂಗಳೂರು: ಶಿವಾಜಿನಗರದ ಚಾಂದಿನಿ ಚೌಕ್ನ ಬೀದಿ ದೀಪದ ಮೇಲೆ ಹಸಿರು ಧ್ವಜ ತೆರವು ಬೆನ್ನಲ್ಲೇ ಚಾಮರಾಜಪೇಟೆ ಕ್ಷೇತ್ರದ ಜೆಜೆ ನಗರದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಹಸಿರು ಮತ್ತು ಹಳದಿ ಬಣ್ಣದ ಧ್ವಜ ಹಾರಿಸಿರುವುದಕ್ಕೆ ಆಕ್ಷೇಪ ವ್ಯಕ್ತವಾಗಿದೆ.
ಈ ಬಗ್ಗೆ ಶಶಾಂಕ್ ಜೆಎಸ್ ಎಂಬುವರು ಟ್ವೀಟ್ ಮಾಡಿ, ಚಾಮರಾಜಪೇಟೆ ಕ್ಷೇತ್ರದ ಜೆಜೆ ನಗರ ಪೊಲೀಸ್ ಠಾಣೆ ಎದುರಲ್ಲಿ, ಸಾರ್ವಜನಿಕ ಸ್ಥಳದಲ್ಲಿ ಹಸಿರು ಧ್ವಜ ಹಾರಿಸಲಾಗಿದೆ. ಇದಕ್ಕೆ ಹೇಗೆ ಅವಕಾಶ ಮಾಡಿಕೊಟ್ಟಿದ್ದೀರಿ ಎಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಪ್ರಶ್ನಿಸಿದ್ದಾರೆ.