ಬೆಂಗಳೂರು: ಅಪಾರ್ಟ್‌ಮೆಂಟ್‌ನ ಲಿಫ್ಟ್‌ನಲ್ಲಿ ಬಾಲಕಿಗೆ ಫುಡ್ ಡೆಲಿವರಿ ಬಾಯ್ ಲೈಂಗಿಕ ಕಿರುಕುಳ ನೀಡಿರುವ ಘಟನೆ (Harassment Case) ನಗರದ ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗ್ರಾಹಕರೊಬ್ಬರಿಗೆ ಫುಡ್ ಡೆಲಿವರಿ ಮಾಡಲು ಬಂದಿದ್ದ ವ್ಯಕ್ತಿ, ಲಿಫ್ಟ್‌ನಲ್ಲಿ ಹೋಗುತ್ತಿದ್ದಾಗ 10 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಹೀಗಾಗಿ ಆರೋಪಿಯನ್ನು ಪೊಲೀಸರು ಬಂಧಿಸಿ, ಪೋಕ್ಸೊ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಚೇತನ್ (30) ಬಂಧಿತ ಆರೋಪಿ. ತಲಘಟ್ಟಪುರದ ಅಪಾರ್ಟ್‌ನಲ್ಲಿ ಒಬ್ಬರು ಗುರುವಾರ ಆನ್‌ಲೈನ್‌ನಲ್ಲಿ ಫುಡ್ ಆರ್ಡರ್ ಮಾಡಿದ್ದರು. ಹೀಗಾಗಿ ಡೆಲಿವರಿ ಬಾಯ್ ಪಾರ್ಸೆಲ್ ತೆಗೆದುಕೊಂಡು ಅಪಾರ್ಟ್‌ಮೆಂಟ್‌ಗೆ ಬಂದಿದ್ದ. ಈ ವೇಳೆ 10ನೇ ಅಂತಸ್ತಿನಲ್ಲಿರುವ ಫ್ಲ್ಯಾಟ್‌ಗೆ ಬಾಲಕಿ ತೆರಳುತ್ತಿದ್ದಳು. ಅದೇ ಸಮಯದಲ್ಲಿ ಲಿಫ್ಟ್‌ನೊಳಗೆ ಹೋದ ಡೆಲಿವರಿ ಬಾಯ್, ಬಾಲಕಿಗೆ ಲೈಗಿಕ ಕಿರುಕುಳ ನೀಡಿದ್ದಾನೆ. ಆ ದೃಶ್ಯ ಸಿಸಿ ಕ್ಯಾಮೆರಾದಲ್ಲೂ ಸೆರೆಯಾಗಿತ್ತು. ಹೀಗಾಗಿ ಆರೋಪಿಯನ್ನು ತಲಘಟ್ಟಪುರ ಪೊಲೀಸರು ಬಂಧಿಸಿ, ಪೋಕ್ಸೊ ಕಾಯ್ದೆ ಅಡಿ ಕೇಸ್ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ | Road accident: ಒಮ್ಮೆಲೇ ಅಡ್ಡ ಬಂದ ನಾಯಿಯ ಜೀವ ಉಳಿಸಲು ಹೋಗಿ ಸ್ಕೂಟರ್ ಸವಾರ ಸಾವು
ಶಿರಸಿಯಲ್ಲಿ 4 ವರ್ಷದ ಬಾಲಕಿಯ ಅತ್ಯಾಚಾರಕ್ಕೆ ಯತ್ನ
ಶಿರಸಿ: ನಗರದಲ್ಲಿ ನಾಲ್ಕು ವರ್ಷದ ಬಾಲಕಿಯ ಅತ್ಯಾಚಾರಕ್ಕೆ ಪ್ರಯತ್ನ ಮಾಡಿದ ಯುವಕನ್ನು ಪೊಲೀಸರು ಬಂಧಿಸಿ, ಪೋಕ್ಸೊ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪದೇಪದೆ ಬಾಲಕಿಯನ್ನು ಪುಸಲಾಯಿಸಿ ಆರೋಪಿ ದೈಹಿಕ ಹಿಂಸೆ ನೀಡುತ್ತಿದ್ದ. ಬಾಲಕಿಯ ಪೋಷಕರು ನೀಡಿದ ದೂರಿನ ಮೇರೆಗೆ ಶಿವು ರಾಮಯ್ಯ (26) ಎಂಬ ಆರೋಪಿಯನ್ನು ಶಿರಸಿ ಮಾರುಕಟ್ಟೆ ಪೊಲೀಸರು ಬಂಧಿಸಿದ್ದಾರೆ.