Site icon Vistara News

Food Poisoning : ಮದುವೆ ಮನೆ ಊಟ ತಿಂದ ನೂರಾರು ಮಂದಿ ಅಸ್ವಸ್ಥ; ಆಸ್ಪತ್ರೆಯಲ್ಲಿ ಹಾಹಾಕಾರ

food

ಪಿರಿಯಾಪಟ್ಟಣ: ಮದುವೆ ಮನೆಯಲ್ಲಿ ಸಿದ್ಧಪಡಿಸಲಾಗಿದ್ದ ಊಟ ಮಾಡಿದ (Food Poisoning) ನೂರಾರು ಮಂದಿ ಏಕಾಏಕಿ ಅಸ್ವಸ್ಥಗೊಂಡ ಘಟನೆ ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಗ್ರಾಮದಲ್ಲಿ ನಡೆದಿದೆ. ಸಂಜೆ ವೇಳೆ ಎಲ್ಲರೂ ವಾಂತಿ ಹಾಗೂ ಇನ್ನಿತರ ಸಮಸ್ಯೆಗಳಿಂದ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದಾರೆ. ಹೀಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಪರದಾಡಿದ ಘಟನೆ ನಡೆದಿದೆ. ಎಲ್ಲ ಆಸ್ಪತ್ರೆಗಳು ಏಕಾಏಕಿ ತುಂಬಿದ್ದ ಕಾರಣ ಹಾಹಾಕಾರ ಉಂಟಾಯಿತು.

ಅಸ್ವಸ್ಥಗೊಂಡವರು ಆರಂಭದಲ್ಲಿ ಕೊಡಗಿನ ಕುಶಾಲನಗರ ಆಸ್ಪತ್ರೆಗೆ ದೌಡಾಯಿಸಿದ್ದರು. ಕುಶಾಲನಗರ ಸರಕಾರಿ ಆಸ್ಪತ್ರೆಯಲ್ಲಿ ಸುಮಾರು 150 ಕ್ಕೂ ಹೆಚ್ಚು ಜನರಿಗೆ ಚಿಕಿತ್ಸೆ ನೀಡಲಾಗಿದೆ. ಆದರೆ ಅಲ್ಲಿ ಚಿಕಿತ್ಸೆ ಕಷ್ಟವಾದಾಗ ಕುಶಾಲನಗರ ಖಾಸಗಿ ಆಸ್ಪತ್ರೆಯಲ್ಲೂ ಕೆಲವರು ಚಿಕಿತ್ಸೆ ಪಡೆಯತ್ತಿದ್ದಾರೆ. ಪಿರಿಯಾಪಟ್ಟಣ ಆಸ್ಪತ್ರೆಯಲ್ಲೂ ಹಲವರಿಗೆ ಚಿಕಿತ್ಸೆ ನೀಡಲಾಗಿದೆ. ಹೀಗಾಗಿ ಸುತ್ತಮುತ್ತಲಿನ ಆಸ್ಪತ್ರೆಗಳಲ್ಲಿ ಮದುವೆ ಮನೆಯಲ್ಲಿ ಊಟ ತಿಂದವರೇ ತುಂಬಿಕೊಂಡಿದ್ದರು.

ಕೊಡಗು ಆರೋಗ್ಯಾಧಿಕಾರಿ ಕುಶಾಲನಗರ ಆಸ್ಪತ್ರೆಗೆ ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ. ಏಕಾಏಕಿ ಹಲವರು ಆಸ್ಪತ್ರೆಗೆ ಬಂದ ಕಾರಣ ಕುಶಾಲನಗರದ ಆಸ್ಪತ್ರೆ ಕ್ಲಿನಿಕ್​ಗಳು ತುಂಬಿಕೊಂಡಿದ್ದವು. ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೆ ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೂ ಸಾಕಷ್ಟು ಮಂದಿ ದಾಖಲಾಗಿದ್ದಾರೆ.

ಇದನ್ನೂ ಓದಿ: lok sabha election : ಒಂದು ವರ್ಷದ ಕೂಸಿನೊಂದಿಗೆ ಚುನಾವಣಾ ಕರ್ತವ್ಯಕ್ಕೆ ಬಂದ ಪೊಲೀಸ್​​!

ಅವರೆಲ್ಲರೂ ಗುರುವಾರ ಮಧ್ಯಾಹ್ನ ಕೊಪ್ಪ ಗ್ರಾಮದಲ್ಲಿ ನಡೆದ ಮದುವೆಯಲ್ಲಿ ಊಟ ಮಾಡಿದ್ದರು. ಸಂಜೆಯ ವೇಳೆಗೆ ಏಕಾಏಕಿ ವಾಂತಿ ಕಾಣಿಸಿಕೊಂಡಿದೆ. ಆಸ್ಪತ್ರೆಗೆ ಮಡಿಕೇರಿ ಕ್ಷೇತ್ರದ ಶಾಸಕ ಮಂತರ್ ಗೌಡ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

ಮುಸ್ಲಿಮ್ ಯುವಕರಿಂದ ಬಸ್​ ಚಾಲಕನ ಮೇಲೆ ಹಲ್ಲೆ

ಬೈಲಹೊಂಗಲ: ಬಸ್ ಚಾಲಕ ಮತ್ತು ನಿರ್ವಾಹಕನ ಮೇಲೆ ಮುಸ್ಲಿಂ ಯುವಕರು ಹಲ್ಲೆ ಮಾಡಿದ ಘಟನೆ (Bus driver Attacked) ನಡೆದಿದೆ. ಆಕ್ರೋಶಗೊಂಡ ಸಾರಿಗೆ ನೌಕರರು ಬೈಲಹೊಂಗಲ ಪೊಲೀಸ್ ಠಾಣೆಯ ಮುಂದೆ ಧರಣಿ ಕುಳಿತರು. ಚಾಲಕ ಬಸ್ ನಿಲ್ಲಿಸಲಿಲ್ಲ ಎಂದು ಹಲ್ಲೆ ಮಾಡಿದ ಆರೋಪ ಕೇಳಿ ಬಂದಿದೆ.

ಧಾರವಾಡದಿಂದ ಬೈಲಹೊಂಗಕ್ಕೆ ಮುಸ್ಲಿಂ ಯುವಕರು ಬಂದಿದ್ದರು. ಬಸ್​​ ಬೈಲಹೊಂಗಲದಿಂದ ಧಾರವಾಡಕ್ಕೆ ಹೊರಟಿತ್ತು. ಬಸ್ ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಗುಂಪುಕಟ್ಟಿ ಹಲ್ಲೆ ನಡೆಸಿದ್ದರು. ಬೇಸತ್ತ ಚಾಲಕರು ವೃತ್ತಿಯ ವೇಳೆ ಸುರಕ್ಷತೆ ನೀಡಿ ಧರಣಿ ಮಾಡಿದ್ದರು. ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿರುವ ಸಾರಿಗೆ ಮೇಲಧಿಕಾರಿಗಳು ಬಂದು ಮಾತು ನಡೆಸಿದ್ದಾರೆ. ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ.

Exit mobile version