Site icon Vistara News

Food Poisoned : ಹಲ್ಲಿ ಬಿದ್ದ ಉಪ್ಪಿಟ್ಟು ಸೇವಿಸಿ 30ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ

Lizard Food Poisoned

ಯಾದಗಿರಿ: ಹಲ್ಲಿ ಬಿದ್ದ ಬಿಸಿಯೂಟ (Mid-day Meal) ಸೇವಿಸಿ 30ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿರುವ (Food Poisoned) ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಪಟ್ಟಣದಲ್ಲಿ ನಡೆದಿದೆ. ಕೆಂಭಾವಿ ಪಟ್ಟಣದ ಬಾಲಕಿಯರ ಪ್ರೌಢ ಶಾಲೆಯ ವಿದ್ಯಾರ್ಥಿನಿಯರು ತೀವ್ರ ಅಸ್ವಸ್ಥಗೊಂಡವರು.

ಮಧ್ಯಾಹ್ನ ಬಿಸಿಯೂಟಕ್ಕೆ ಇಲ್ಲಿನ ಸಿಬ್ಬಂದಿ ಉಪ್ಪಿಟ್ಟು ಮಾಡಿದ್ದರು. ಅದನ್ನು ಎಲ್ಲ ಮಕ್ಕಳಿಗೆ ಬಡಿಸಲಾಗಿತ್ತು. ಆದರೆ ಉಪ್ಪಿಟ್ಟಿನಲ್ಲಿ ಹಲ್ಲಿ ಬಿದ್ದಿತ್ತು. ಉಪ್ಪಿಟ್ಟು ತಿಂದ ಹಲವು ಮಕ್ಕಳಿಗೆ ಹೊಟ್ಟೆ ತೊಳೆಸಲು ಆರಂಭವಾಗಿದೆ. ವಿದ್ಯಾರ್ಥಿನಿಯರಲ್ಲಿ ಹೊಟ್ಟೆ ನೋವು ಶುರುವಾಗಿ ವಾಂತಿ ಭೇದಿಯಾಗಿದೆ. ಹೀಗಾಗಿ ಕೂಡಲೇ ಅಸ್ವಸ್ಥಗೊಂಡಿರುವ ವಿದ್ಯಾರ್ಥಿನಿಯರನ್ನು ಕೆಂಭಾವಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಲಾಗಿದೆ.

ಆರೋಗ್ಯ ತಪಾಸಣೆ ಮಾಡಿದ ವೈದ್ಯರು

ರಾಯಚೂರಿನಲ್ಲಿ ಬಿಸಿಯೂಟದಲ್ಲಿ ಸಿಕ್ಕಿತು ಬೆಂದುಹೋದ ಹಲ್ಲಿ!

ಇತ್ತೀಚೆಗೆ ಇದೆ ರೀತಿಯ ಘಟನೆ ರಾಯಚೂರಿನಲ್ಲಿ ನಡೆದಿತ್ತು. ಸರ್ಕಾರಿ ಶಾಲಾ ಮಕ್ಕಳ ಬಿಸಿಯೂಟದಲ್ಲಿ (Mid-day Meal) ಹಲ್ಲಿ ಪತ್ತೆಯಾದ ಘಟನೆ ರಾಯಚೂರು (Raichur news) ಗ್ರಾಮೀಣ ತಾಲೂಕಿನ ಅಪ್ಪನದೊಡ್ಡಿ ಗ್ರಾಮದ ಪ್ರಾಥಮಿಕ ಶಾಲೆಯಲ್ಲಿ (Primary school) ನಡೆದಿತ್ತು. ಈ ಆಹಾರ ಸೇವಿಸಿದ ಮೂವರು ಮಕ್ಕಳು ಅಸ್ವಸ್ಥರಾಗಿದ್ದರು.

ಇದನ್ನೂ ಓದಿ: Mobile Tower : ಬೆತ್ತಲೆಯಾಗಿ ಮೊಬೈಲ್‌ ಟವರ್‌ ಏರಿ ಯುವಕನ ಹುಚ್ಚಾಟ

ಮಧ್ಯಾಹ್ನ ಬಿಸಿಯೂಟಕ್ಕೆ ಉಪ್ಪಿಟ್ಟು ಮಾಡಲಾಗಿತ್ತು. ಅದನ್ನು ಎಲ್ಲ ಮಕ್ಕಳಿಗೆ ಬಡಿಸಲಾಗಿತ್ತು. ಪಾತ್ರೆಯ ಅಡಿಯಲ್ಲಿ ಸತ್ತ ಹಲ್ಲಿಯೊಂದು ಪತ್ತೆಯಾಗಿತ್ತು. ಈ ಸುದ್ದಿ ಗೊತ್ತಾಗುತ್ತಿದ್ದಂತೆಯೇ ಉಪ್ಪಿಟ್ಟು ತಿಂದ ಹಲವು ಮಕ್ಕಳಿಗೆ ಹೊಟ್ಟೆ ತೊಳೆಸಲು ಆರಂಭವಾಗಿತ್ತು. ಬಳಿಕ ಕೆಲವು ಮಕ್ಕಳು ವಾಂತಿ ಮಾಡಲು ಶುರು ಮಾಡಿದ್ದರು. ಅವರ ಪೈಕಿ ಮೂರು ಮಕ್ಕಳು ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಯಾಪಲದಿನ್ನಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ಶಾಲೆಯಲ್ಲಿ ಇಬ್ಬರು ಅಡುಗೆ ಸಿಬ್ಬಂದಿ ಇದ್ದು ಅವರ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದೆ ಎಂದು ಆಪಾದಿಸಲಾಗಿತ್ತು.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version