ಕೊಪ್ಪಳ: ಕಳಪೆ ಗುಣಮಟ್ಟದ ಊಟ ಸೇವಿಸಿದ ವಿದ್ಯಾರ್ಥಿನಿಯರಿಗೆ ವಾಂತಿ ಭೇದಿ ಆಗಿದ್ದು (Food Poisoning) ಆಸ್ಪತ್ರೆಗೆ ದಾಖಲಿಸಲಾಗಿದೆ. ಜಿಲ್ಲೆಯ ಕನಕಗಿರಿ ಪಟ್ಟಣದಲ್ಲಿರುವ ಪರಿಶಿಷ್ಟ ಜಾತಿ ಮೆಟ್ರಿಕ್ ಪೂರ್ವ ವಸತಿ ನಿಲಯದ ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದಾರೆ.
ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯ ಇದಾಗಿದ್ದು, ಸೋಮವಾರ ಸಂಜೆಯಿಂದಲೇ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದಾರೆ. 15ಕ್ಕೂ ಹೆಚ್ಚು ವಿದ್ಯಾರ್ಥಿನಿಯರನ್ನು ಕನಕಗಿರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
ಸೋಮವಾರ ಮಧ್ಯಾಹ್ನದ ಊಟದಲ್ಲಿ ಹುಳುಗಳು ಕಾಣಿಸಿಕೊಂಡಿದ್ದವು. ಈ ಸಂದರ್ಭದಲ್ಲಿ ಕೆಲವು ವಿದ್ಯಾರ್ಥಿನಿಯರು ಊಟ ತಿರಸ್ಕರಿಸಿದ್ದರು ಎನ್ನಲಾಗಿದೆ. ಇತ್ತ ವಿದ್ಯಾರ್ಥಿನಿಯರು ದಾಖಲು ಆಗುತ್ತಿದ್ದಂತೆ ವಿಷಯ ಕೇಳಿ ಆಸ್ಪತ್ರೆಯ ಮುಂದೆ ಪಾಲಕರು ಜಮಾಯಿಸಿ, ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದರು.
ಇದನ್ನೂ ಓದಿ | ಮಂಗಳೂರು ಸ್ಫೋಟ | ಶಾರಿಕ್ ಮತ್ತೆ ಬಾಲ ಬಿಚ್ಚಲು ಪೊಲೀಸರ ನಿರ್ಲಕ್ಷ್ಯ ಕಾರಣ? UAPA ಕೂಡಾ ದುರ್ಬಲವೇ?