ಕೊಪ್ಪಳ: ಇಲ್ಲಿನ ಅಳವಂಡಿ ಗ್ರಾಮದಲ್ಲಿ ಬಿಸಿಯೂಟ ಸೇವಿಸಿದ (Food Poisoning) ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ. ಸುಮಾರು 20ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದು, ಮಂಗಳವಾರ ಬೆಳಗ್ಗೆ ವಾಂತಿ-ಭೇದಿಯಾಗಿದೆ.
ಆರ್‌ಎಂಎಸ್ ಹಾಸ್ಟೆಲ್ ಹಾಗೂ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ವಿದ್ಯಾರ್ಥಿನಿಯರು ಸೋಮವಾರ ಮಧ್ಯಾಹ್ನ ಬಿಸಿಯೂಟ ಸೇವಿಸಿದ್ದಾರೆ. ಸಂಜೆ ಆಗುತ್ತಿದ್ದಂತೆ ಒಬ್ಬರ ಹಿಂದೆ ಒಬ್ಬರಂತೆ ಅಸ್ವಸ್ಥರಾಗಿದ್ದಾರೆ. ಕಳಪೆ ಬಿಸಿಯೂಟ ಸೇವಿಸಿದ್ದೇ ಈ ಅನಾಹುತಕ್ಕೆ ಕಾರಣ ಎನ್ನಲಾಗಿದೆ.
ಅಳವಂಡಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವಿದ್ಯಾರ್ಥಿನಿಯರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಗಂಭೀರ ಪರಿಸ್ಥಿತಿ ಇದ್ದವರನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಅಳವಂಡಿ ಪೊಲೀಸರು, ಗ್ರಾಮದ ಮುಖಂಡರು, ಶಿಕ್ಷಕರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಇದನ್ನೂ ಓದಿ | Double Murder | ಜೋಡಿ ಕೊಲೆ ಮಾಡಿದ್ದು ಹಳೇ ಚಾಲಕ; ಸೆಕ್ಯುರಿಟಿ ಗಾರ್ಡ್ ಹತ್ಯೆ ಮಾಡಿ ರಾತ್ರಿಯಿಡಿ ಕಾದು ಕೆಲಸದವನ ಕೊಂದಿದ್ದ!