ಬೆಂಗಳೂರು: ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದಾಗ ಭೂ ವ್ಯಾಜ್ಯಕ್ಕೆ ಸಂಬಂಧಿಸಿ ಲಂಚ ಪಡೆದ ಆರೋಪ ಎದುರಿಸುತ್ತಿರುವ ಐಎಎಸ್ ಅಧಿಕಾರಿ ಜೆ. ಮಂಜುನಾಥ್ ಅವರನ್ನು ಎಸಿಬಿ ಅಧಿಕಾರಿಗಳು ಸೋಮವಾರ ಬಂಧಿಸಿದ್ದಾರೆ.
ಮೇ 21ರಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸ ಮಾಡುವ ಉಪ ತಹಸಿಲ್ದಾರ್ ಮಹೇಶ್ ಎಂಬಾತ ಗುತ್ತಿಗೆ ನೌಕರ ಚೇತನ್ ಎಂಬವರಿಂದ 5 ಲಕ್ಷ ರೂ. ಲಂಚ ಪಡೆಯುತ್ತಿರುವಾಗ ಎಸಿಬಿ ಕೈಗೆ ಸಿಕ್ಕಿಬಿದ್ದಿದ್ದ. ಈ ಪ್ರಕರಣದಲ್ಲಿ ಜಿಲ್ಲಾಧಿಕಾರಿ ಜೆ. ಮಂಜುನಾಥ್ ಪಾತ್ರದ ಬಗ್ಗೆ ಆರೋಪ ಕೇಳಿಬಂದಿತ್ತು. ಕೆಳ ಹಂತದ ಅಧಿಕಾರಿಗಳ ಮೂಲಕ ಮಂಜುನಾಥ್ ಲಂಚ ಪಡೆಯುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.
ಪ್ರರಕಣದಲ್ಲಿ ಮಂಜುನಾಥ್ ಹೆಸರು ಕೇಳಿಬಂದಿದ್ದರೂ ವಿಚಾರಣೆ ನಡೆದಿರಲಿಲ್ಲ. ಈ ಕುರಿತು ಇತ್ತೀಚೆಗಷ್ಟೆ ಹೈಕೋರ್ಟ್ ಆಕ್ರೋಶ ವ್ಯಕ್ತಪಡಿಸಿತ್ತು. ನಂತರ ಮೂರು ವಿಚಾರಣೆ ನಡೆಸಿದ್ದ ಎಸಿಬಿ ಅಧಿಕಾರಿಗಳು ಹೇಳಿಕೆ ದಾಖಲಿಸಿಕೊಂಡಿದ್ದರು. ಎಸಿಬಿ ವಿಚಾರಣೆ ನಡೆಸುತ್ತಿದ್ದಂತೆಯೇ ಮಂಜುನಾಥ್ ಅವರನ್ನು ಇಂಟ್ರಿಗೇಟೆಡ್ ಚೈಲ್ಡ್ ಪ್ರೊಟೆಕ್ಷನ್ ಸ್ಕೀಂ ಡೈರೆಕ್ಟರ್ ಆಗಿ ವರ್ಗಾವಣೆ ಮಾಡಿತ್ತು.
ಸೋಮವಾರ ವಿಚಾರಣೆಗೆ ಮಂಜುನಾಥ್ ಅವರನ್ನು ಕರೆದ ಎಸಿಬಿ ಅಧಿಕಾರಿಗಳು ಅನೇಕ ಹೊತ್ತು ಮಾಹಿತಿ ಪಡೆದರು. ಕೊನೆಗೆ ಬಂಧನ ಮಡುವುದೆಂದು ನಿರ್ಧರಿಸಿ ವಶಕ್ಕೆ ಪಡೆದಿದ್ದಾರೆ.
ನ್ಯಾಯಾಲಯದಿಂದಾಗಿ ಬಂಧನ
ಮಂಜುನಾಥ್ ಪಾತ್ರ ಇದೆ ಎಂಬುದು ತಿಳಿದಿದ್ದರೂ ಹಿರಿಯ ಐಪಿಎಸ್ ಅಧಿಕಾರಿಗಳ ಕೃಪಾಕಟಾಕ್ಷದಿಂದಾಗಿ ಮಂಜುನಾಥ್ ಬಚಾವಾಗಿದ್ದಾರೆ ಎನ್ನಲಾಗುತ್ತಿತ್ತು. ಕೊನೆಗೆ ನ್ಯಾಯಾಲಯ ಚಾಟಿ ಬೀಸಿದ್ದರಿಂದಾಗಿ ಬೇರೆ ವಿಧಿಯಿಲ್ಲದೆ ಎಸಿಬಿ ಅಧಿಕಾರಿಗಳು ವಿಚಾರಣೆ ನಡೆಸಿ ಇದೀಗ ಬಂಧಿಸಿದ್ದಾರೆ.
ಇದನ್ನೂ ಓದಿ | ACB raid | 80 ಸ್ಥಳಗಳಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಎಸಿಬಿ ದಾಳಿ, ಪರಿಶೀಲನೆಯಲ್ಲಿ ಸಿಗ್ತಿರೋದೇನು?