ಬೆಂಗಳೂರು: ಕಳೆದ ಮೂರು ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ತೀವ್ರ ಜ್ವರದ ಹಿನ್ನೆಲೆಯಲ್ಲಿ ನಗರದ ಮಣಿಪಾಲ್ ಆಸ್ಪತ್ರೆಗೆ ಅವರು ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸದ್ಯ ಅವರ ಆರೋಗ್ಯದಲ್ಲಿ ಗಮನಾರ್ಹ ಸುಧಾರಣೆ ಆಗಿದ್ದು, ಸಂಪೂರ್ಣ ಆರೋಗ್ಯವಾಗಿದ್ದಾರೆ. ಇನ್ನು ಎರಡು ಅಥವಾ ಮೂರು ದಿನಗಳ ನಂತರ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗೆ ತೆರಳಲಿದ್ದಾರೆ. ವೈದ್ಯರು ಸಂಪೂರ್ಣ ವಿಶ್ರಾಂತಿಗೆ ಸಲಹೆ ನೀಡಿದ್ದಾರೆ. ಮಂಡ್ಯ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಮಂಗಳವಾರ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ಹಿತೈಷಿಗಳಿಗೆ ಕೃತಜ್ಞತೆ
ಕಳೆದ ಮೂರು ದಿನಗಳಿಂದ ತಮ್ಮ ಆರೋಗ್ಯದ ಬಗ್ಗೆ ಆತಂಕಗೊಂಡು ತಮ್ಮ ಆರೋಗ್ಯದ ಚೇತರಿಕೆಗೆ ಹಾರೈಸಿದ ಹಿತೈಷಿಗಳು, ಸ್ನೇಹಿತರು ಮತ್ತು ಅಭಿಮಾನಿಗಳಿಗೆ ಮಾಜಿ ಸಿಎಂ ಎಸ್.ಎಂ ಕೃಷ್ಣ ಕೃತಜ್ಞತೆ ಸಲ್ಲಿಸಿದ್ದು, ಯಾರು ತಮ್ಮ ಆರೋಗ್ಯದ ಬಗ್ಗೆ ಆತಂಕಕ್ಕೆ ಒಳಗಾಗುವುದು ಬೇಡ ಎಂದಿದ್ದಾರೆ. ಅಲ್ಲದೆ, ನಾಡಿನ ಜನತೆಗೆ ದಸರಾ ಹಬ್ಬದ ಶುಭಾಶಯ ತಿಳಿಸಿದ್ದಾರೆ.
ಇದನ್ನೂ ಓದಿ | ಸಚಿವ ಮುರುಗೇಶ್ ನಿರಾಣಿ ಮನೆಯಲ್ಲಿ ಕಾಫಿ ಸೇವಿಸಿದ ಸಿದ್ದರಾಮಯ್ಯ