Site icon Vistara News

Cow slaughter: ಗೋಹತ್ಯೆ ಹೇಳಿಕೆ ನೀಡಿದ್ದು ಖಾತೆ ಬದಲಾವಣೆಗಾಗಿ: ಸಚಿವ ಕೆ. ವೆಂಕಟೇಶ್‌ ಕುರಿತು ಮಾಜಿ ಸಿಎಂ ಹೇಳಿದ್ದೇನು?

#image_title

ಬೆಂಗಳೂರು: ಗೋವುಗಳನ್ನು ಏಕೆ ಕಡಿಯಬಾರದು ಎಂಬ ಪಶು ಸಂಗೋಪನಾ ಸಚಿವ ಕೆ. ವೆಂಕಟೇಶ್ ಹೇಳಿಕೆಯನ್ನು ಖಂಡಿಸಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ತಮ್ಮ ಖಾತೆಯನ್ನು ಬದಲಾಯಿಸಲಿ ಎಂಬ ಕಾರಣಕ್ಕೆ ಸಚಿವರು ಈ ಹೇಳಿಕೆ ನೀಡಿರುವ ಸಾಧ್ಯತೆಯಿದೆ ಎಂದಿದ್ದಾರೆ.

ಗೋವುಗಳನ್ನು ಏಕೆ ಕಡಿಯಬಾರದು ಎಂದು ಪ್ರಶ್ನಿಸಿರುವ ಪಶು ಸಂಗೋಪನಾ ಸಚಿವ ಕೆ. ವೆಂಕಟೇಶ್ ಅವರ ಹೇಳಿಕೆ ಆಶ್ಚರ್ಯ ತಂದಿದೆ. ಗೋವಿನೊಂದಿಗೆ ಭಾರತೀಯರಾದ ನಾವು ಭಾವನಾತ್ಮಕ ಸಂಬಂಧ ಹೊಂದಿದ್ದು, ತಾಯಿ ಸ್ಥಾನದಲ್ಲಿ ಗೋವನ್ನು ಪೂಜಿಸುತ್ತೇವೆ.

ಸಚಿವ ಕೆ. ವೆಂಕಟೇಶ್ ಅವರು ಯಾರ ಓಲೈಕೆಗಾಗಿ ಈ ರೀತಿಯ ಹೇಳಿಕೆ ನೀಡಿದ್ದಾರೆ ಗೊತ್ತಿಲ್ಲ. ತಮಗೆ ನೀಡಿರುವ ಖಾತೆಯನ್ನು ಬದಲಾಯಿಸಲಿ ಎಂದೋ ಅಥವಾ ಹೈ ಕಮಾಂಡ್ ಮೆಚ್ಚಿಸಲೆಂದೊ ಈ ಹೇಳಿಕೆ ನೀಡಿರಬಹುದು.

ಗೋಹತ್ಯೆ ನಿಷೇಧವನ್ನು ಪ್ರಥಮವಾಗಿ ಪ್ರತಿಪಾದಿಸಿದ್ದು ರಾಷ್ಟ್ರಪಿತ ಮಹಾತ್ಮಾ ಗಾಂಧಿಜಿಯವರು. ಪೂಜ್ಯ ಮಹಾತ್ಮಾ ಗಾಂಧಿ ಪ್ರತಿಪಾದಿಸಿದ ಗೋಹತ್ಯೆ ನಿಷೇಧವನ್ನು 1960ರ ದಶಕದಲ್ಲಿ ಹಲವಾರು ರಾಜ್ಯಗಳಲ್ಲಿ ಕಾನೂನು ತರಲಾಗಿದೆ.
ಸಚಿವರ ಹೇಳಿಕೆಯಿಂದ ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಗೋವುಗಳ ಕಳ್ಳ ಸಾಗಾಣಿಕೆ, ಸಾಮೂಹಿಕ ಗೋ ಹತ್ಯೆ ಮಾಡುವ ಕಾನೂನು ಬಾಹಿರ ಕಾರ್ಖಾನೆಗಳು ತಲೆ ಎತ್ತಲಿವೆ.

ನಮ್ಮ ಸರ್ಕಾರದ ಅವಧಿಯಲ್ಲಿ ಕಾನೂನು ಬಾಹಿರ ಕಸಾಯಿ ಖಾನೆಗಳನ್ನು ತಡೆಗಟ್ಟಲು ಕಾನೂನು ತರಲಾಗಿದೆ. ಕರ್ನಾಟಕದಲ್ಲಿ ಹೊಸ ಕಾಯಿದೆ ತಂದಿಲ್ಲ. ಇರುವ ಕಾನೂನಿಗೆ ಬಲ ತುಂಬಿದ್ದೇವೆ‌. ಈ ರೀತಿಯ ಹೇಳಿಕೆ ನೀಡುವ ಮೊದಲು ಸಚಿವರು ಆಲೋಚನೆ ಮಾಡಬೇಕು. ಈ ಬಗ್ಗೆ ಸಚಿವರಿಗೆ ಸಿಎಂ ಸೂಕ್ತ ಸಲಹೆ ನೀಡುವುದು ಅವಶ್ಯಕತೆ ಇದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಇದನ್ನೂ ಓದಿ: Cow slaughter: ಎಮ್ಮೆ, ಕೋಣವನ್ನು ಕಡಿಯುವುದಾದರೆ ಹಸುಗಳನ್ನು ಏಕೆ ಕಡಿಯಬಾರದು?: ಸಚಿವ ಕೆ. ವೆಂಕಟೇಶ್

Exit mobile version