Site icon Vistara News

Border Dispute | ಹೇಗೂ ಏಕರೂಪ ನಾಗರಿಕ ಸಂಹಿತೆ ಎನ್ನುತ್ತಿದ್ದೀರಿ; ಬೆಳಗಾವಿ ಇಲ್ಲಿದ್ದರೇನು? ಮಹಾರಾಷ್ಟ್ರದಲ್ಲಿ ಇದ್ದರೇನು?: ಎಚ್‌ಡಿಕೆ

HD kumaraswamy Uniform Civil Code ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದ

ಚಿಕ್ಕಬಳ್ಳಾಪುರ: ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರಲು ಹೊರಟಿರುವ ಬಿಜೆಪಿಗರೇ, ನಾವೆಲ್ಲರೂ ಭಾರತೀಯರು ಎಂದು ಹೇಳುತ್ತೀರಲ್ಲವೇ? ಬೆಳಗಾವಿ ಅಲ್ಲಿದ್ದರೇನು? ಇಲ್ಲಿದ್ದರೇನು? ಎಂದೂ ಹೇಳಿಬಿಡಿ ಎಂಬುದಾಗಿ ಮಹಾರಾಷ್ಟ್ರ ಗಡಿ ವಿವಾದದ (Border Dispute) ಕುರಿತು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಕುರಿತು ಅಲ್ಲಿನ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳುವ ಪ್ರಸ್ತಾಪವನ್ನು ಇಟ್ಟಿದ್ದರಿಂದ ಪುನಃ ಸರ್ವಪಕ್ಷ ಸಭೆ ಕರೆದು ತೀರ್ಮಾನವನ್ನು ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆಯನ್ನು ನೀಡಿದ್ದರು. ಈ ಹೇಳಿಕೆ ಬಗ್ಗೆ ಮಾಜಿ ಸಿಎಂ ಎಚ್‌ಡಿಕೆ ಗರಂ ಆಗಿದ್ದು, ಬಿಜೆಪಿ ನೀತಿ ವಿರುದ್ಧ ಕಿಡಿಕಾರಿದ್ದಾರೆ.

ಮಹಾರಾಷ್ಟ್ರದವರಿಗೆ ಮುಂದಿನ ಪಾರ್ಲಿಮೆಂಟ್ ಚುನಾವಣೆಗೆ ಈ ವಿಚಾರ ಬೇಕು. ಕರ್ನಾಟಕದಲ್ಲಿ‌ ಮೂರೂವರೆ ವರ್ಷ ಅಧಿಕಾರ ನಡೆಸಿದ ಬಿಜೆಪಿಗೆ ಜನರ‌ ಬಳಿ ಹೋಗಲು ವಿಷಯಾಧಾರಿತ ಸರಕು ಇಲ್ಲ. ಹೀಗಾಗಿ ಗಡಿ ತಗಾದೆ ತೆಗೆಯುತ್ತಿದ್ದಾರೆ. ಯಾರೋ ಮಾಡಿದ ಕೆಲಸಗಳ ಬಗ್ಗೆ ಭಾಷಣ ಮಾಡಬಹುದು. ಧರ್ಮದ ವಿಚಾರ ಇಟ್ಟುಕೊಂಡು ಜನರ ನೆಮ್ಮದಿ ಕೆಡಿಸುವುದು ಸರಿಯಲ್ಲ ಎಂದು ಎಚ್‌ಡಿಕೆ ಅಸಮಾಧಾನವನ್ನು ವ್ಯಕ್ತಪಡಿಸಿದರು.

ಗೋಡಂಬಿ, ಬಾದಾಮಿಗೋಸ್ಕರ ಸಭೆ ಏಕೆ?
ಗೋಡಂಬಿ, ಬಾದಾಮಿ‌ ಕೊಟ್ಟು ಕಳುಹಿಸುವುದಕ್ಕೆ ಸರ್ವಪಕ್ಷ ಸಭೆಯನ್ನೇಕೆ ಕರೆಯುತ್ತೀರಿ? ಎರಡೂ ಕಡೆ ನಿಮ್ಮದೇ ಸರ್ಕಾರ ಇದೆ. ಹೀಗಾಗಿ ನೀವು ಅಲ್ಲಿಯೇ ಮಾತನಾಡಿಕೊಳ್ಳಿ, ವಿರೋಧ ಪಕ್ಷಗಳನ್ನು ಕರೆದು ಏನು ಮಾಡುತ್ತೀರಿ? ಇದು ನಿಮ್ಮ ಜವಾಬ್ದಾರಿ, ಅಲ್ಲೂ ನಿಮ್ಮದೆ ಜವಾಬ್ದಾರಿಯಾಗಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದರು.

ಇದನ್ನೂ ಓದಿ | Border dispute | ಗಡಿನಾಡಿನಲ್ಲಿ ಬೀದಿಗಿಳಿದ ಕನ್ನಡಪರ ಸಂಘಟನೆಗಳು; ಪ್ರತಿಕೃತಿ ದಹಿಸಿ ಆಕ್ರೋಶ

Exit mobile version