ರಾಮನಗರ: ವಿಧಾನಸಭಾ ಚುನಾವಣೆಯ (Channapatna Election Results) ಫಲಿತಾಂಶ ಹೊರಬಿದ್ದಿದ್ದು, ಚನ್ನಪಟ್ಟಣ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ(H D Kumaraswamy) ಅವರು ವಿಜಯ ಪತಾಕೆ ಹಾರಿಸಿದ್ದಾರೆ. ಇವರು 15,915 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ವಿರುದ್ಧ ಜಯಭೇರಿ ಮೊಳಗಿಸಿದ್ದಾರೆ.
ಈ ಬಾರಿ ಜೆಡಿಎಸ್ ಅಭ್ಯರ್ಥಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು 96,592 ಮತ, ಬಿಜೆಪಿ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ 80,677 ಮತ, ಕಾಂಗ್ರೆಸ್ ಅಭ್ಯರ್ಥಿ ಗಂಗಾಧರ್. ಎಸ್ 15,374 ಮತಗಳನ್ನು ಪಡೆದಿದ್ದಾರೆ.
ಕಳೆದ ಚುನಾವಣೆಯಲ್ಲಿ ರಾಮನಗರ ಹಾಗೂ ಚನ್ನಪಟ್ಟಣ ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಮಾಜಿ ಸಿಎಂ ಎಚ್.ಡಿ.ಕುಮಾಸ್ವಾಮಿ ಅವರು ಎರಡೂ ಕಡೆ ಗೆಲುವು ಕಂಡಿದ್ದರು. ನಂತರ ಪಕ್ಷ ಸಂಘಟನೆ ಹಿತದೃಷ್ಟಿಯಿಂದ ಚನ್ನಪಟ್ಟಣವನ್ನು ಉಳಿಸಿಕೊಂಡರು. ಆಗ ಉಪ ಚುನಾವಣೆಯಲ್ಲಿ ಪತ್ನಿ ಅನಿತಾ ಕುಮಾರಸ್ವಾಮಿ ಅವರು ರಾಮನಗರದಲ್ಲಿ ಸ್ಪರ್ಧಿಸಿ ಗೆಲುವು ಪಡೆದಿದ್ದರು. ಚನ್ನಪಟ್ಟಣದಲ್ಲಿ 87,995 ಮತಗಳನ್ನು ಪಡೆದಿದ್ದ ಎಚ್‌ಡಿಕೆ, 21,530 ಅಂತರದಿಂದ ಸಮೀಪದ ಸ್ಪರ್ಧಿ ಬಿಜೆಪಿ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ (66,465 ಮತ) ವಿರುದ್ಧ ಗೆಲುವು ಪಡೆದಿದ್ದರು.
ಇದನ್ನೂ ಓದಿ | Ramanagara Election Results : ಜೆಡಿಎಸ್ ಭದ್ರಕೋಟೆ ರಾಮನಗರದಲ್ಲೇ ನಿಖಿಲ್ ಕುಮಾರಸ್ವಾಮಿಗೆ ಸೋಲು!
ಸಿ.ಪಿ. ಯೋಗೇಶ್ವರ್ ಅವರು 1999 ಪಕ್ಷೇತರ, 2004, 2008 ಕಾಂಗ್ರೆಸ್, 2011ರಲ್ಲಿ ಬಿಜೆಪಿ, 2013ರಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ಒಟ್ಟು ಐದು ಬಾರಿ ಗೆಲುವು ಸಾಧಿಸಿದ್ದರು. ಆದರೆ ಕಳೆದ ಬಾರಿ ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ಸೋತಿದ್ದ ಯೋಗೇಶ್ವರ್ ಈ ಬಾರಿಯೂ ಸೋಲು ಕಂಡಿದ್ದಾರೆ.