ದಾವಣಗೆರೆ: ವಿರಕ್ತ ಮಠದಿಂದ ನೀಡುವ ಜಯದೇವ ಶ್ರೀ ಪ್ರಶಸ್ತಿಗೆ ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ವಿರಕ್ತಮಠದ ಬಸವಪ್ರಭು ಸ್ವಾಮಿಜಿ ಹೇಳಿದ್ದಾರೆ.
ನಗರದ ಶಿವಯೋಗಾಶ್ರಮದಲ್ಲಿ ಜುಲೈ 12 ರಿಂದ 14ವರೆಗೆ ನಡೆಯುವ ಶರಣ ಸಂಸ್ಕೃತಿ ಉತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಲಿದ್ದಾರೆ. ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶ್ರೀಗಳು ಅಧ್ಯಕ್ಷತೆ ವಹಿಸಲಿದ್ದಾರೆ.
ಹಾಗೆಯೇ ಮುರುಘಾ ಮಠದಿಂದ ಕೊಡಮಾಡುವ ಶೂನ್ಯ ಪೀಠ ಅಲ್ಲಮ ಪ್ರಶಸ್ತಿಯನ್ನು ಡಾ. ಡಿ.ಎಚ್. ಶಂಕರಮೂರ್ತಿ ಅವರಿಗೆ, ಶೂನ್ಯಪೀಠ ಚನ್ನಬಸವ ಪ್ರಶಸ್ತಿಯನ್ನು ಪ್ರೊ. ಎಚ್.ಎ ಭಿಕ್ಷಾವರ್ತಿ ಮಠಕ್ಕೆ, ಶೂನ್ಯ ಪೀಠ ಅಕ್ಕನಾಗಮ್ಮ ಪ್ರಶಸ್ತಿಯನ್ನು ಚೆನ್ನಮ್ಮ ಹಳ್ಳಿಕೇರಿ ಅವರಿಗೆ ಪ್ರದಾನ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ: ಎಸ್ ಎಂ ಕೃಷ್ಣ, ನಾರಾಯಣ ಮೂರ್ತಿ, ಪ್ರಕಾಶ್ ಪಡುಕೋಣೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿ