ನೆಲಮಂಗಲ: ಮಾಜಿ ಸಚಿವ ಅಂಜನಮೂರ್ತಿ (72) ಅವರು ಇಂದು ಮುಂಜಾನೆ ಮೃತಪಟ್ಟಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ನಗರದ ಇಂದಿರಾನಗರ ನಿವಾಸಿ ಅಂಜನಮೂರ್ತಿ ಅವರು ಹೃದಯಾಘಾತದಿಂದ ಇಂದು ಮುಂಜಾನೆ ಸಾವಿಗೀಡಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮಲ್ಲೇಶ್ವರದ ಅಪೊಲೋ ಆಸ್ಪತ್ರೆಯಲ್ಲಿ ಅನಾರೋಗ್ಯಪೀಡಿತರಾಗಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಮೃತಪಟ್ಟರು.
ಇವರು ಕಾಂಗ್ರೆಸ್ ಪಕ್ಷದಲ್ಲಿದ್ದು , ಈ ಹಿಂದೆ ವಸತಿ ಸಚಿವ, ಉಪ ಸಭಾಪತಿಯಾಗಿ ಕರ್ತವ್ಯ ಸಲ್ಲಿಸಿದ್ದರು.
ಲೋ ಬಿಪಿಯಿಂದಾಗಿ ಎಎಸ್‌ಐ ಮೃತ್ಯು; ಬೈಕ್‌ನಲ್ಲಿ ಸಾಗುತ್ತಿದ್ದಾಗಲೇ ಉರುಳಿಬಿದ್ದರು
ಕಡಿಮೆ ರಕ್ತದೊತ್ತಡದ ಸಮಸ್ಯೆಯಿಂದ ಬಳಲುತ್ತಿದ್ದ ಎಎಸ್‌ಐ (ASI Death) ಒಬ್ಬರು ಮೃತಪಟ್ಟಿದ್ದಾರೆ. ಜಿಗಣಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಜೈ ಶ್ರೀನಿವಾಸ್ (59) ಮೃತ ದುರ್ದೈವಿ. ಶ್ರೀನಿವಾಸ್ ಲೋ ಬಿಪಿ ಸಮಸ್ಯೆಯಿಂದ ಬಳಲುತ್ತಿದ್ದು, ವಾರದ ಹಿಂದೆ ಬೈಕ್‌ನಲ್ಲಿ ಸಾಗುತ್ತಿದ್ದಾಗಲೇ ಕುಸಿದುಬಿದ್ದಿದ್ದರು. ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ಬೈಕ್‌ನಲ್ಲಿ ಹೋಗುತ್ತಿದ್ದಾಗ ಲೋ ಬಿಪಿ ಸಮಸ್ಯೆ ಉಂಟಾಗಿ ಅವರು ಬೈಕ್‌ನಿಂದ ಬಿದ್ದಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೋಮವಾರ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಇತ್ತೀಚೆಗೆ ನಾನಾ ರೀತಿಯ ಆರೋಗ್ಯ ಸಮಸ್ಯೆಯಿಂದ ಬಳಲುತ್ತಾ ಪ್ರಾಣ ಕಳೆದುಕೊಳ್ಳುತ್ತಿರುವುದು ಹೆಚ್ಚಾಗಿದೆ. ಹೆಚ್ಚಿನ ಮಂದಿ ಹೃದಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ಇತ್ತೀಚೆಗೆ ಅಧ್ಯಯನವೊಂದು ತಿಳಿಸಿತ್ತು.
ಇದನ್ನೂ ಓದಿ: R Dhruvanarayana : ಹೃದಯಾಘಾತವೊಂದೇ ಅಲ್ಲ, ಅಜಾತಶತ್ರುವಿಗೆ ಮಾರಣಾಂತಿಕವಾಗಿದ್ದು ಅಲ್ಸರ್!