ತುಮಕೂರು: ಕರ್ನಾಟಕ ವಿಧಾನಸಭಾ ಚುನಾವಣೆ (Karnataka Election 2023) ಸಮೀಪಿಸುತ್ತಿದ್ದಂತೆ ಪಕ್ಷಾಂತರ ಪರ್ವ ಪ್ರಾರಂಭವಾಗಿದೆ. ಬಿಜೆಪಿ ಮಾಜಿ ಶಾಸಕ, ಆರ್‌ಎಸ್‌ಎಸ್ ಕಟ್ಟಾಳು, ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಕಿರಣ್ ಕುಮಾರ್ ಅವರು ಬಿಜೆಪಿಗೆ ತೊರೆಯಲು ಮುಂದಾಗಿದ್ದು, ಕಾಂಗ್ರೆಸ್ ಸೇರ್ಪಡೆ ಬಹುತೇಕ ಖಚಿತವಾಗಿದೆ.
ಕಿರಣ್ ಕುಮಾರ್ ತಮ್ಮ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಸಿಎಂ ಬಸವರಾಜ ಬೊಮ್ಮಾಯಿಗೆ ತಮ್ಮ ರಾಜೀನಾಮೆ ಪತ್ರವನ್ನು ರವಾನೆ ಮಾಡಿದ್ದಾರೆ. ಚಿಕ್ಕನಾಯಕನಹಳ್ಳಿ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಇವರು, ಬಿಜೆಪಿಯಿಂದ ಟಿಕೆಟ್ ಸಿಗದಿದ್ದಕ್ಕೆ ಈಗ ಪಕ್ಷ ತೊರೆದಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: Sindhuri Vs Roopa : IAS ಅಧಿಕಾರಿಗಳಿಗೆ ಅಸಭ್ಯ ಫೋಟೊ ಕಳುಹಿಸುತ್ತಿದ್ದ ರೋಹಿಣಿ ಸಿಂಧೂರಿ; ಫೋಟೊ ಬಿಡುಗಡೆ ಮಾಡಿದ ರೂಪಾ IPS
ಇನ್ನು ಬಿಜೆಪಿಯಲ್ಲಿದ್ದರೂ ಸಚಿವ ಮಾಧುಸ್ವಾಮಿ ವಿರುದ್ಧ ಕಿರಣ್ ಕುಮಾರ್ ತೊಡೆತಟ್ಟಿದ್ದರು. ಆಗಾಗ ಇಬ್ಬರ ನಡುವೆ ಮುಸುಕಿನ ಗುದ್ದಾಟಗಳು ನಡೆಯುತ್ತಲೇ ಇದ್ದವು. ಈಗ ವೈಯಕ್ತಿಕ ಕಾರಣ ನೀಡಿರುವ ಕಿರಣ್, ಸ್ವ-ಇಚ್ಛೆಯಿಂದ ರಾಜೀನಾಮೆ ನೀಡುತ್ತಿರುವುದಾಗಿ ಸ್ಪಷ್ಟನೆ ನೀಡಿದ್ದಾರೆ.