ಬೆಂಗಳೂರು: ಬಸವ ವೇದಿಕೆವತಿಯಿಂದ ನೀಡಲಾಗುವುದ ಪ್ರಸಕ್ತ ಸಾಲಿನ ಬಸವಶ್ರೀ ಪ್ರಶಸ್ತಿ ಹಾಗೂ ವಚನ ಸಾಹಿತ್ಯ ಪ್ರಶಸ್ತಿಯನ್ನು ಕ್ರಮವಾಗಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ಶಿಕ್ಷಣ ತಜ್ಞ ಗುರುರಾಜ ಕರ್ಜಗಿ ಅವರನ್ನು ಆಯ್ಕೆ ಮಾಡಲಾಗಿದೆ.
ಸುದ್ದಿಗೋಷ್ಠಿಯಲ್ಲಿ ಗುರುವಾರ ಈ ವಿಷಯ ತಿಳಿಸಿದ ವೇದಿಕೆಯ ಅಧ್ಯಕ್ಷ ಸಿ.ಸೋಮಶೇಖರ್, ಬಸವ ಶ್ರೀ ಪ್ರಶಸ್ತಿ ಬಸವಣ್ಣನವರ ಪುತ್ಥಳಿ, ಸ್ಮರಣಿಕೆಯನ್ನೊಳಗೊಂಡಿದೆ. ವಚನ ಸಾಹಿತ್ಯ ಪ್ರಶಸ್ತಿ ಹತ್ತು ಸಾವಿರ ನಗದು ಹಾಗೂ ಸ್ಮರಣಿಕೆಯನ್ನೊಳಗೊಂಡಿದೆ ಎಂದು ತಿಳಿಸಿದರು.
ಬರುವ ಏ.27 ರ ಸಂಜೆ 5:30ಕ್ಕೆ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮಿಜಿ ಸಾನಿಧ್ಯ ವಹಿಸುವರು. ಕೇಂದ್ರ ಸಚಿವ ವಿ.ಸೋಮಣ್ಣ ಸಮಾರಂಭ ಉದ್ಘಾಟಿಸಲಿದ್ದೂ, ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಪ್ರಶಸ್ತಿ ಪ್ರದಾನ ಮಾಡುವರು. ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿಶೇಷ ಸಂಚಿಕೆ ಬಿಡುಗಡೆ ಮಾಡುವರು ಎಂದು ಮಾಹಿತಿ ನೀಡಿದರು.

