ವಿಧಾನಸಭೆ: ನಿರೀಕ್ಷೆಯಂತೆ ವಿಧಾನಸಭೆಯಲ್ಲಿ ಮಂಗಳವಾರ ಐದು ಮಸೂದೆಗಳನ್ನು ಮಂಡಿಸಲಾಯಿತು. ಇದರಲ್ಲಿ ಒಂದು ವಿಧೇಯಕಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ.
ಈಗಾಗಲೆ ಸುಗ್ರೀವಾಜ್ಞೆ ಮೂಲಕ ಜಾರಿಯಲ್ಲಿರುವ, 2022ನೇ ಸಾಲಿನ ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳು(ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಮತ್ತು ರಾಜ್ಯಾಧೀನ ಸೇವೆಗಳಲ್ಲಿನ ನೇಮಕಾತಿ ಅಥವಾ ಹುದ್ದೆಗಳಲ್ಲಿ ಮೀಸಲಾತಿ) ವಿಧೇಯಕ, 2022ನೇ ಸಾಲಿನ ಕರ್ನಾಟಕ ಭೂಕಂದಾಯ(ಎರಡನೇ ತಿದ್ದುಪಡಿ) ವಿಧೇಯಕ, 2022ನೇ ಸಾಲಿನ ಕರ್ನಾಟಕ ವಿಶೇಷ ಹೂಡಿಕೆ ಪ್ರದೇಶ ವಿಧೇಯಕ, 2022ನೇ ಸಾಲಿನ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ(ತಿದ್ದುಪಡಿ) ವಿಧೇಯಕಗಳನ್ನು ಮಂಡಿಸಲಾಯಿತು.
ವಿಧೇಯಕರಗಳನ್ನು ಕ್ರಮವಾಗಿ ಸಿಎಂ ಬಸವರಾಜ ಬೊಮ್ಮಾಯಿ, ಸಚಿವರಾದ ಆರ್.ಅಶೋಕ, ಮುರುಗೇಶ ನಿರಾಣಿ, ವಿ. ಸುನಿಲ್‌ಕುಮಾರ್ ಮಂಡಿಸಿದರು.
ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮಂಡಿಸಿದ 2021ನೇ ಸಾಲಿನ ಬಂಧಿಗಳ ಗುರುತಿಸುವಿಕೆ(ಕರ್ನಾಟಕ ತಿದ್ದುಪಡಿ) ವಿಧೇಯಕ ಹಿಂಪಡೆಯುವುದನ್ನು ಮಂಡಿಸಿರುವುದಕ್ಕೆ ವಿಧಾನಸಭೆ ತಾತ್ಕಾಲಿಕ ತಡೆ ನೀಡಿತು. ಈ ವಿಧೇಯಕ ಹಿಂಪಡೆಯುವುದಕ್ಕೆ ಸಂಬಂಧಿಸಿದಂತೆ ತಾಂತ್ರಿಕ ಮತ್ತು ಸ್ಪಷ್ಟತೆ ಬರಬೇಕಾದ ಕಾರಣ ತಡೆಹಿಡಿಯಲಾಗುತ್ತಿದೆ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.
ಇದನ್ನೂ ಓದಿ | ಬೆಳಗಾವಿ ಅಧಿವೇಶನ | ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಸುರ್ಜೇವಾಲ ನೀಡಿದ 12 ಸೂತ್ರಗಳು