ಬೆಂಗಳೂರು: 33 ಡಿವೈಎಸ್ಪಿಗಳು ಹಾಗೂ 132 ಇನ್‌ಸ್ಪೆಕ್ಟರ್‌ಗಳನ್ನು ವರ್ಗಾವಣೆ ಮಾಡಿದ ಬೆನ್ನಲ್ಲೇ ಇದೀಗ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.
ಅಮಿತ್ ಸಿಂಗ್, ಡಿಐಜಿಪಿ, ಮೈಸೂರು ದಕ್ಷಿಣ ವಲಯ, ಡಾ.ಎಂ.ಬಿ.ಬೋರಲಿಂಗಯ್ಯ, ಡಿಐಜಿಪಿ, ಮಂಗಳೂರು ಪಶ್ಚಿಮ ವಲಯ, ಶಿವಪ್ರಕಾಶ್ ದೇವರಾಜು, ಕಲಬುರಗಿ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಎ.ಶ್ರೀನಿವಾಸುಲು, ಬೆಂಗಳೂರು ದಕ್ಷಿಣ ಸಂಚಾರ ವಿಭಾಗ ಡಿಸಿಪಿಯಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ವರ್ಗಾವಣೆ ಮಾಡಲಾಗಿದೆ.
ಲೋಕಸಭಾ ಚುನಾವಣೆ ಎಫೆಕ್ಟ್; ಮತ್ತೆ 13 ಡಿವೈಎಸ್‌ಪಿ, 30 ಇನ್‌ಸ್ಪೆಕ್ಟರ್‌ಗಳ ವರ್ಗ
ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಪೊಲೀಸ್ ಇಲಾಖೆಯಲ್ಲಿ (Karnataka Police Department) ಮೇಜರ್ ಸರ್ಜರಿ ಮಾಡುತ್ತಿದೆ. ಮೊನ್ನೆಯಷ್ಟೇ 33 ಡಿವೈಎಸ್ಪಿಗಳು ಹಾಗೂ 132 ಇನ್‌ಸ್ಪೆಕ್ಟರ್‌ಗಳನ್ನು ವರ್ಗಾವಣೆ (Police Transfer) ಮಾಡಲಾಗಿತ್ತು. ಇದೀಗ ಮತ್ತೆ 13 ಡಿವೈಎಸ್‌ಪಿಗಳು ಹಾಗೂ 30 ಇನ್‌ಸ್ಪೆಕ್ಟರ್‌ಗಳನ್ನು ವರ್ಗಾವಣೆ ಮಾಡಿ ಆದೇಶವನ್ನು ಹೊರಡಿಸಲಾಗಿದೆ.
ಇದರಿಂದ ರಾಜ್ಯಾದ್ಯಂತ ಒಟ್ಟು 248 ಪೊಲೀಸ್ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ ಮಾಡಿದಂತಾಗಿದೆ. ಮೊನ್ನೆ ಮಾಡಿದ ವರ್ಗಾವಣೆಯಲ್ಲಿ ಕೆಲವು ಬದಲಾವಣೆಯನ್ನು ಮಾಡಲಾಗಿದೆ. ಐವರು ಇನ್ಸ್‌ಪೆಕ್ಟರ್‌ಗಳ ವರ್ಗಾವಣೆಯನ್ನು ರದ್ದು ಮಾಡಲಾಗಿದೆ. ಕೆಲವು ಇನ್ಸ್‌ಪೆಕ್ಟರ್‌ಗಳ ಸ್ಥಳ ಬದಲಾವಣೆ ಆಗಿದೆ.