ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ನಾಲ್ಕು ಕೆಳಹಂತದ ಸೇತುವೆಗಳು ಮುಳುಗಡೆ ಆಗಿದ್ದು, ಹೀಗಾಗಿ ತಿಂಗಳ ಅವಧಿಯಲ್ಲಿ ಎರಡನೇ ಬಾರಿಗೆ ಮಾರ್ಗಗಳನ್ನು ಬಂದ್ ಮಾಡಲಾಗಿದೆ. ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಮಳೆ (Heavy Rain) ಅಬ್ಬರಿಸುತ್ತಿದ್ದು, ಇದರಿಂದ ನದಿಯ ನೀರಿನ ಮಟ್ಟ ಹೆಚ್ಚಳವಾಗಿದೆ.
ಕಾರದಗಾ- ಭೋಜ, ಭೋಜವಾಡಿ ಕುನ್ನೂರ, ಸಿದ್ನಾಳ- ಅಕ್ಕೋಳ, ಜತ್ರಾಟ- ಭೀವಶಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವೆ ಸೇತುವೆ ಮುಳುಗಡೆಯಾಗಿದ್ದರಿಂದ ನಾಲ್ಕು ಗ್ರಾಮಸ್ಥರು ಪರದಾಟುವ ಪರಿಸ್ಥಿತಿ ನಿರ್ಮಾಣವಾಗಿದೆ.
ಮಹಾರಾಷ್ಟ್ರದಲ್ಲಿ ಮಳೆ ಮುಂದುವರಿದರೆ ಮತ್ತಷ್ಟು ಸೇತುವೆಗಳು ಜಲಾವೃತ ಆಗುವ ಸಾಧ್ಯತೆ ಇದೆ. ಮುಂಜಾಗ್ರತಾ ಕ್ರಮವಾಗಿ ಸೇತುವೆ ಬಳಿ ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ವಹಿಸಿದೆ. ಕಂದಾಯ ಇಲಾಖೆಯ ಅಧಿಕಾರಿಗಳಿಂದ ಜನರಿಗೆ ಜಾಗೃತಿ ಮೂಡಿಸಲಾಗುತ್ತಿದ್ದು, ಸೇತುವೆ ದಾಟುವ ಸಾಹಸಕ್ಕೆ ಕೈ ಹಾಕದಂತೆ ಎಚ್ಚರಿಕೆ ನೀಡಲಾಗಿದೆ.
ಇದನ್ನೂ ಓದಿ | Rain News | ಕೊಡಗಿನಲ್ಲಿ ಮಳೆಯ ಅಬ್ಬರ : ಮನೆ ಕುಸಿತ, ತ್ರಿವೇಣಿ ಸಂಗಮ ಜಲಾವೃತ