Udupi: ನದಿಯಲ್ಲಿ ಮೀನು ಹಿಡಿಯಲು ಹೋಗಿ ನಾಲ್ವರು ಯುವಕರು ನೀರುಪಾಲು - Vistara News

ಉಡುಪಿ

Udupi: ನದಿಯಲ್ಲಿ ಮೀನು ಹಿಡಿಯಲು ಹೋಗಿ ನಾಲ್ವರು ಯುವಕರು ನೀರುಪಾಲು

Udupi: ನದಿಯಲ್ಲಿ ನೀರು ಹಿಡಿಯಲು ಹೋಗಿ ನಾಲ್ವರು ಯುವಕರು ನೀರುಪಾಲಾದ ಘಟನೆ ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕಿನಲ್ಲಿ ನಡೆದಿದೆ.

VISTARANEWS.COM


on

Four People Drowned In A River In Udupi District
ನದಿಯಲ್ಲಿ ನಾಪತ್ತೆಯಾಗಿರುವ ಯುವಕನಿಗಾಗಿ ಶೋಧ ಕಾರ್ಯಾಚರಣೆ.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಉಡುಪಿ: ಬ್ರಹ್ಮಾವರ ತಾಲೂಕಿನಲ್ಲಿ (Udupi) ಮೀನು ಹಿಡಿಯಲು ಹೋದ ನಾಲ್ವರು ಯುವಕರು ನೀರುಪಾಲಾಗಿದ್ದಾರೆ. ಇಬಾಜ್, ಫಜಾನ್, ಸೂಫಾನ್ ಫರ್ಹಾನ್‌ ಮೃತಪಟ್ಟಿದ್ದಾರೆ. ಮತ್ತೊಬ್ಬ ನಾಪತ್ತೆಯಾಗಿದ್ದು, ಆತನ ಪತ್ತೆಗೆ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

ರಂಜಾನ್‌ ಹಬ್ಬಕ್ಕೆಂದು ಬ್ರಹ್ಮಾವರದಲ್ಲಿರುವ ಸಂಬಂಧಿಕರ ಮನೆಗೆ ಆಗಮಿಸಿದ್ದ ಏಳು ಯುವಕರು, ಕುಕ್ಕುಡೆ ಕಿಣಿಯರ ಕುದ್ರು ಸಮೀಪದ ನದಿಯಲ್ಲಿ ಚಿಪ್ಪು ಮೀನು ಹಿಡಿಯಲು ತೆರಳಿದ್ದರು. ದೋಣಿಯ ಮೂಲಕ ಮೀನು ಹಿಡಿಯಲು ಯತ್ನಿಸುತ್ತಿದ್ದರು. ಆದರೆ, ಸಂಜೆಯಾಗುತ್ತಲೇ ನೀರಿನ ಮಟ್ಟ ಏರಿಕೆಯಾಗಿ, ದೋಣಿ ಮಗುಚಿರಬಹುದು ಎಂದು ತಿಳಿದುಬಂದಿದೆ.

ಇದನ್ನೂ ಓದಿ: Davanagere News: ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಮೂವರು ಯುವಕರ ಸಾವು

ನೀರಿನ ರಭಸದ ಮಧ್ಯೆಯೂ ಮೂವರು ಅಪಾಯದಿಂದ ಪಾರಾಗಿದ್ದಾರೆ. ಮೂವರು ಮೃತಪಟ್ಟಿರುವುದು ದೃಢಪಟ್ಟಿದ್ದು, ಇನ್ನೊಬ್ಬನಿಗಾಗಿ ತೀವ್ರ ಶೋಧ ನಡೆಯುತ್ತಿದೆ. ಸ್ಥಳೀಯರ ಸಹಾಯದಿಂದ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಯು ರಾತ್ರಿಯಾದರೂ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ದಾವಣಗೆರೆ ಜಿಲ್ಲೆಯಲ್ಲೂ ಇಂತಹ ದುರಂತ ಸಂಭವಿಸಿದೆ. ಜಿಲ್ಲೆಯ ಹೊನ್ನಾಳಿ ತಾಲೂಕಿನ ಹಿರೇಗೋಣಗೆರೆ ಗ್ರಾಮದ ಬಳಿಯ ತುಂಗಭದ್ರಾ ನದಿಯಲ್ಲಿ ಭಾನುವಾರ ಈಜಾಡಲು ಹೋಗಿದ್ದ ಮೂವರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮೃತರನ್ನು ವರುಣ್ (18), ಕಿರಣ್ (20), ಪವನ್ (18) ಎಂದು ಗುರುತಿಸಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಸುಳಿಗಾಳಿ ಪ್ರಭಾವ; ರಭಸ ಗಾಳಿಯೊಂದಿಗೆ ಗುಡುಗು ಸಹಿತ ಮಳೆ ಎಚ್ಚರಿಕೆ

Karnataka Weather Forecast : ಸುಳಿಗಾಳಿ ಪ್ರಭಾವದಿಂದಾಗಿ ಹಲವೆಡೆ ವ್ಯಾಪಕ ಮಳೆಯಾಗುವ (Rain News) ಸಾಧ್ಯತೆ ಇದೆ. ಕೆಲವೆಡೆ ರಭಸವಾಗಿ ಗಾಳಿ ಬೀಸಲಿದೆ. ಗುಡುಗು, ಮಿಂಚಿನ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

Karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಮಧ್ಯ‌ ಮಹಾರಾಷ್ಟ್ರದಿಂದ ಕರ್ನಾಟಕ ಸೇರಿ ಕೇರಳದವರೆಗೆ ಸುಳಿಗಾಳಿಯ ಚಲನೆಯಿಂದ ಹವಾಮಾನದಲ್ಲಿ ವೈಪರಿತ್ಯ ಉಂಟಾಗಿದೆ. ಇದರ ಪ್ರಭಾವದಿಂದಾಗಿ ಇನ್ನೆರಡು ದಿನಗಳು ಕರ್ನಾಟಕದಲ್ಲಿ ಮಳೆಯಾಗಲಿದೆ ಎಂದು ಸೂಚನೆ ನೀಡಲಾಗಿದೆ. ಗುಡುಗು, ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ (Rain News) ಇದ್ದು, ಗಾಳಿ ವೇಗವು 30-40 ಕಿ.ಮೀ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲೂ ಗುಡುಗುನೊಂದಿಗೆ ಮಳೆ ಸಾಧ್ಯತೆ ಇದೆ. ಉಡುಪಿ ಜಿಲ್ಲೆಯ ಶುಷ್ಕ ಹವಾಮಾನ ಇರಲಿದೆ.

ದಕ್ಷಿಣ ಒಳನಾಡಿನ ದಾವಣಗೆರೆ, ಚಿತ್ರದುರ್ಗ ಮತ್ತು ಮೈಸೂರು ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣಹವೆ ಮೇಲುಗೈ ಸಾಧಿಸಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಶುಷ್ಕ ವಾತಾವರಣ ಮುಂದುವರಿಯಲಿದೆ. ಉತ್ತರ ಒಳನಾಡಿನ ಹಾವೇರಿ, ಬೆಳಗಾವಿ, ಧಾರವಾಡ, ವಿಜಯಪುರ, ಕಲಬುರಗಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗಲಿದೆ. ಉಳಿದೆಡೆ ಶುಷ್ಕ ವಾತಾವರಣ ಇರಲಿದೆ.

ಇದನ್ನೂ ಓದಿ: Murder Case : ಒಂಟಿ ಮಹಿಳೆ ಕೊಲೆ ಕೇಸ್‌; ಅತಿಯಾದ ಸೆಕ್ಸ್‌ಗೆ ಒತ್ತಾಯಿಸಿದವಳನ್ನು ಬೆಡ್‌ ರೂಂನಲ್ಲೇ ಕೊಂದ ಯುವಕ

ಆರೆಂಜ್ ಮತ್ತು ಯೆಲ್ಲೋ ಅಲರ್ಟ್

ಕೆಲವೆಡೆ ಮಳೆ ನಡುವೆಯು ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ನೀಡಿದೆ. ಈ ಜಿಲ್ಲೆಗಳಲ್ಲಿ ತಾಪಮಾನ ಏರಿಕೆ ಆಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳಿಗೆ ಐಎಂಡಿ ಆರೆಂಜ್ ಅಲರ್ಟ್ ನೀಡಿದೆ. ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಬುಧವಾರ ಬೆಳಗ್ಗೆವರೆಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ನಾಲ್ಕು ದಿನಗಳಿಗೆ ಹೀಟ್‌ ವೇವ್‌ ಅಲರ್ಟ್‌

ಮೊದಲ ದಿನ 24ರಂದು ರಾಯಚೂರು, ವಿಜಯಪುರ, ಯಾದಗಿರಿ, ಕೊಪ್ಪಳ, ಬಾಗಲಕೋಟೆ, ಕಲಬುರ್ಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಇದೆ.

25ರಂದು ರಾಯಚೂರು,ವಿಜಯಪುರ, ಯಾದಗಿರಿ, ಕೊಪ್ಪಳ, ಬಾಗಲಕೋಟೆ, ಕಲಬುರ್ಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಗದಗ, ದಾವಣಗೆರೆ ಜಿಲ್ಲೆಗಳಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಇದೆ.

26ರಂದು ರಾಯಚೂರು,ವಿಜಯಪುರ, ಯಾದಗಿರಿ, ಕೊಪ್ಪಳ, ಬಾಗಲಕೋಟೆ, ಕಲಬುರ್ಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಗದಗ, ದಾವಣಗೆರೆ ತುಮಕೂರು ಜಿಲ್ಲೆಗಳಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಇದೆ.

27ರಂದು ರಾಯಚೂರು,ವಿಜಯಪುರ, ಯಾದಗಿರಿ, ಕೊಪ್ಪಳ, ಬಾಗಲಕೋಟೆ, ಕಲಬುರ್ಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಗದಗ, ದಾವಣಗೆರೆ ತುಮಕೂರು ಜಿಲ್ಲೆಗಳಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಇದೆ.

ಬಿಸಿ ಮತ್ತು ಆರ್ದ್ರತೆ

ಏಪ್ರಿಲ್ 24 ರಿಂದ 27 ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್‌ ಏರಿಕೆಯಾಗುವ ಸಾಧ್ಯತೆ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಬಿರುಗಾಳಿ ಮಳೆಗೆ ಜನರು ತತ್ತರ; ಸಿಡಿಲಿಗೆ ಎತ್ತುಗಳು ಬಲಿ, ನೆಲಕಚ್ಚಿದ ಬೆಳೆಗಳು

Karnataka Weather Forecast : ಬಿರುಗಾಳಿ ಸಹಿತ ಸುರಿದ ಮಳೆಗೆ (Rain News) ಬೀದರ್‌, ವಿಜಯನಗರ, ದಾವಣಗೆರೆ ರೈತರು ತತ್ತರಿಸಿ ಹೋಗಿದ್ದಾರೆ. ಸಾಲಸೋಲ ಮಾಡಿ ಖರೀದಿಸಿದ್ದ ಎತ್ತುಗಳು ಸಿಡಿಲಿಗೆ ಬಲಿಯಾದರೆ, ನೀರಿಲ್ಲದಿದ್ದರೂ ಟ್ಯಾಂಕರ್‌ ಮೂಲಕ ಕಷ್ಟ ಪಟ್ಟು ಬೆಳೆದಿದ್ದ ಬೆಳೆಯು ನೆಲಕಚ್ಚಿದೆ. ಸದ್ಯ ಬುಧವಾರದಂದು ಎಲ್ಲೆಲ್ಲಿ ಮಳೆ ಮುನ್ಸೂಚನೆಯನ್ನು ನೀಡಲಾಗಿದೆ ಎಂಬ ಮಾಹಿತಿ ಇಲ್ಲಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ರಾಜ್ಯದ ಹಲವೆಡೆ ಮಳೆ ಅಬ್ಬರಕ್ಕೆ ಜನ-ಜೀವನ ಅಸ್ತವ್ಯಸ್ತವಾಗಿದೆ. ಮುಂದಿನ 24 ಗಂಟೆಯಲ್ಲಿ ಗುಡುಗು, ಸಿಡಿಲು ಸಹಿತ ಮಳೆಯಾಗಲಿದೆ (Rain News) ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ಮಧ್ಯ‌ ಮಹಾರಾಷ್ಟ್ರದಿಂದ ಕರ್ನಾಟಕ ಸೇರಿ ಕೇರಳದವರೆಗೆ ಸುಳಿಗಾಳಿಯ ಚಲನೆಯಿಂದ ಹವಾಮಾನದಲ್ಲಿ ವೈಪರಿತ್ಯ ಉಂಟಾಗಿದೆ. ಇದರ ಪ್ರಭಾವದಿಂದಾಗಿ ಇನ್ನೆರಡು ದಿನಗಳು ಕರ್ನಾಟಕದಲ್ಲಿ ಮಳೆಯಾಗಲಿದೆ ಎಂದು ಸೂಚನೆ ನೀಡಲಾಗಿದೆ.

ಪ್ರಮುಖವಾಗಿ ಉತ್ತರ ಒಳನಾಡಿನ ಬೆಳಗಾವಿ, ವಿಜಯಪುರ, ಬಾಗಲಕೋಟೆ ಹಾಗೂ ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಸೇರಿ ದಕ್ಷಿಣ ಒಳನಾಡಿನ ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಹಗುರ ಮಳೆಯಾಗಲಿದೆ. ಇನ್ನೂ 30-40 ಕಿಮೀ ವೇಗದಲ್ಲಿ ಬಿರುಸಿನ ಗಾಳಿ ಬೀಸಲಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.

ಇದನ್ನೂ ಓದಿ:Murder Case : ಕೊಲೆಯಾದ ಮಹಿಳೆಗೆ 20 ಹುಡುಗರ ಸಹವಾಸ! ಅವರಿಗೆ ಆಕೆ ಇಟ್ಟಿದ್ದ ಹೆಸರು ಆರೆಂಜ್, ಆ್ಯಪಲ್, ಬನಾನಾ ಇತ್ಯಾದಿ!

ಸಿಡಿಲಿಗೆ ಎತ್ತುಗಳು ಬಲಿ

ಬೀದರ್‌ನ ಔರಾದ್ ತಾಲೂಕಿನ ಕೊಳ್ಳೂರ ಗ್ರಾಮದಲ್ಲಿ ಸಿಡಿಲು ಬಡಿದು 2 ಎತ್ತುಗಳು ಮೃತಪಟ್ಟಿರುವ ಘಟನೆ ನಡೆದಿದೆ. ಸೋಮವಾರ ತಡರಾತ್ರಿಯಲ್ಲಿ ಭಾರಿ ಮಳೆಯೊಂದಿಗೆ ಸಿಡಿಲು ಬಡಿದಿದೆ. ಪರಿಣಾಮ ಸಾಗರ ಬಸವರಾಜ ಪಾಟೀಲ ಎಂಬುವವರಿಗೆ ಸೇರಿದ ಎತ್ತುಗಳು ಮೃತಪಟ್ಟಿವೆ.

ವಿಜಯನಗರದಲ್ಲಿ ಗಾಳಿ-ಮಳೆಗೆ ಹಾರಿದ ಶಾಮಿಯಾನ

ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಸೀತಾರಾಮ್ ತಾಂಡಾದ ಗ್ರಾಮದ ಬಳಿಯ ಆಂಜನೇಯ ದೇಗುಲದಲ್ಲಿ ಹನುಮ ಜಯಂತಿ ನಿಮಿತ್ತ ಶಾಮಿಯಾನ, ಲೈಟಿಂಗ್ ಹಾಕಲಾಗಿತ್ತು. ಆದರೆ ಜೋರಾಗಿ ಬೀಸಿದ ಗಾಳಿ, ಮಳೆಗೆ ಶಾಮಿಯಾನ, ಲೈಟಿಂಗ್ಸ್‌ ಹಾರಿ ಹೋಗಿತ್ತು. ಇದರಿಂದಾಗಿ ಲಕ್ಷಾಂತರ ರೂ. ನಷ್ಟ ಉಂಟಾಗಿತ್ತು.

ತಡರಾತ್ರಿ ಬಿರುಗಾಳಿ ಸಹಿತ ಮಳೆಗೆ ಹತ್ತಾರು ಎಕರೆ ಪಪ್ಪಾಯಿ ಬೆಳೆ ನೆಲಕ್ಕೆ ಉರುಳಿದೆ. ಹಗರಿಬೊಮ್ಮನಹಳ್ಳಿ ತಾಲೂಕಿನ ವಟ್ಟಮ್ಮನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ವಟ್ಟಮ್ಮನಹಳ್ಳಿ ಗ್ರಾಮದ ಮೂಗಪ್ಪ ಎಂಬುವರಿಗೆ ಸೇರಿದ 5 ಎಕರೆ ಪಪ್ಪಾಯಿ ಬೆಳೆ ಹಾಳಾಗಿದೆ. ಇದರಿಂದ ಅಂದಾಜು 5 ರಿಂದ 7 ಲಕ್ಷ ರೂಪಾಯಿ ಬೆಲೆ ಬಾಳುವ ಪಪ್ಪಾಯಿ ಬೆಳೆಗೆ ಹಾನಿಯಾಗಿದೆ. ಇದೇ ಗ್ರಾಮದ ಪತ್ರಿಗೌಡ ಹೊನ್ನೆಹಳ್ಳಿ ಎನ್ನುವವರ 3 ಎಕರೆ, ಕುಸುಮ ಅವರ 4 ಎಕರೆ ಪಪ್ಪಾಯಿ ಬೆಳೆ ನಷ್ಟವಾಗಿದೆ. ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸೂಕ್ತ ಪರಿಹಾರಕ್ಕೆ ರೈತರು ಆಗ್ರಹಿಸಿದ್ದಾರೆ.

ದಾವಣಗೆರೆಯಲ್ಲಿ ಬಾಳೆ ಬೆಳೆ ನಾಶ

ಸೋಮವಾರ ಸಂಜೆ ಸುರಿದ ಗಾಳಿ ಮಳೆಗೆ ಅಪಾರ ಪ್ರಮಾಣದ ಬಾಳೆ ಬೆಳೆ ನಾಶವಾಗಿವೆ. ದಾವಣಗೆರೆಯ ಜಗಳೂರು ತಾಲೂಕಿನ ಕಟ್ಟಿಗೆಹಳ್ಳಿ, ಜಮ್ಮಪುರ, ಹರಿಶಿನಗುಂಡಿ ಸೇರಿದಂತೆ ಹಲವು ಕಡೆ ಬೆಳೆ ನಾಶವಾಗಿದೆ. ಕಟ್ಟಿಗೆಹಳ್ಳಿ ಗ್ರಾಮದ ಸಿದ್ದಮ್ಮ, ಬಸವರಾಜಪ್ಪ ಎಂಬುವರಿಗೆ ಸೇರಿದ 20 ಎಕರೆ ಬಾಳೆ ತೋಟ ನೆಲಕಚ್ಚಿದೆ. ಬರಗಾಲದಲ್ಲಿ ಟ್ಯಾಂಕರ್ ನೀರು ಖರೀದಿ ಮಾಡಿ ಬಾಳೆ ಬೆಳೆಸಿದ್ದರು. ಆದರೆ ಗಾಳಿ ಮಳೆಗೆ ಬಾಳೆಯು ನೆಲಸಮವಾಗಿದೆ. ಕೂಡಲೇ ಹಾನಿಗೊಂಡ ಬೆಳೆಗೆ ಸರ್ಕಾರ ಪರಿಹಾರ ‌ನೀಡುವಂತೆ ಒತ್ತಾಯಿಸಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉಡುಪಿ

Road Accident : ಮಿಡ್‌ನೈಟ್‌ನಲ್ಲಿ ರಸ್ತೆ ಕಾಣದೆ ಡಿವೈಡರ್‌ಗೆ ಬೈಕ್‌ ಡಿಕ್ಕಿ; ಹಾರಿ ಬಿದ್ದ ಸವಾರ ಸ್ಥಳದಲ್ಲೇ ಸಾವು

road Accident : ಮಧ್ಯರಾತ್ರಿ ಬೈಕ್‌ನಲ್ಲಿ ಬರುತ್ತಿದ್ದ ಯುವಕನೊರ್ವ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾನೆ. ಡಿವೈಡರ್‌ಗೆ ಬೈಕ್‌ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಬೈಕ್‌ನಿಂದ ಹಾರಿ ಬಿದ್ದ ಯುವಕ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾನೆ.

VISTARANEWS.COM


on

By

Road Accident
Koo

ಉಡುಪಿ: ಬೈಕ್ ಪಲ್ಟಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಉಡುಪಿಯ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಮಸೀದಿ ಸಮೀಪ (Road Accident) ನಡೆದಿದೆ. ವಿಕಾಸ್ ಆಚಾರ್ಯ (22) ಅಪಘಾತದಲ್ಲಿ ಮೃತಪಟ್ಟ ಯುವಕ.

ಕೋಟ ಮಣೂರು ಸುರೇಶ್ ಆಚಾರ್ಯ ಅವರ ಪುತ್ರ ವಿಕಾಸ್ ಸೋಮವಾರ ಮಧ್ಯರಾತ್ರಿ 1:30 ರ ಸುಮಾರಿಗೆ ಸಾಸ್ತಾನದಿಂದ ಕೋಟ ಕಡೆ ಬರುತ್ತಿದ್ದ. ಕೋಟ ಗುಜರಿ ಅಂಗಡಿ ಸಮೀಪ ಬರುವಾಗ ವಿಕಾಸ್‌ಗೆ ಬೈಕ್‌ನ ನಿಯಂತ್ರಣ ತಪ್ಪಿ ಹೆದ್ದಾರಿಯ ಡಿವೈಡರ್‌ಗೆ ಡಿಕ್ಕಿಯಾಗಿದೆ.

ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ ಪಲ್ಟಿಯಾಗಿ ಗಂಭೀರ ಗಾಯಗೊಂಡ ವಿಕಾಸ್‌ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗ ರವಾನಿಸಿದ್ದಾರೆ. ಕೋಟ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Kidnap Case : ಅಖಂಡೇಶ್ವರ ಜಾತ್ರೆಗೆ ಹೋದ ಅತಿಥಿ ಶಿಕ್ಷಕಿಯನ್ನು ಅಪಹರಿಸಿದ ಮುಸ್ಲಿಂ ಯುವಕ

ನೀರು ತರುತ್ತಿದ್ದ ಹನುಮ ಮಾಲಾಧಾರಿಗಳಿಗೆ ಬೊಲೆರೋ ಡಿಕ್ಕಿ, 3 ಸಾವು

ರಾಯಚೂರು: ಹನುಮ ಮಾಲಾಧಾರಿಗಳಿಗೆ (Hanuman Devotees) ಬೊಲೇರೋ ವಾಹನ (Bolero Hit) ಡಿಕ್ಕಿಯಾಗಿ ಸ್ಥಳದಲ್ಲಿಯೇ (Road Accident) ಮೂರು ಜನ ಸಾವಿಗೀಡಾಗಿದ್ದಾರೆ. ಇಬ್ಬರಿಗೆ ಗಂಭೀರ ಗಾಯಗಳಾಗಿವೆ.

ರಾಯಚೂರಿನ ಶಕ್ತಿನಗರದ ಯಾದವ ನಗರ ಕ್ರಾಸ್ ಬಳಿ ಘಟನೆ ನಡೆದಿದೆ. ಹನುಮಮಾಲಾಧಾರಿಗಳು ಹನುಮಜಯಂತಿ ಪ್ರಯುಕ್ತ ಕೃಷ್ಣಾ ನದಿಗೆ ನೀರು ತರಲು ಬಂದಾಗ ಘಟನೆ ನಡೆದಿದೆ. ಬೆಳಗಿನ ಜಾವ 5 ಗಂಟೆ ಸುಮಾರಿಗೆ ಯಮಸ್ವರೂಪಿ ಬೊಲೆರೋ ಮಾಲಾಧಾರಿಗಳಿಗೆ ಡಿಕ್ಕಿ ಹೊಡೆದಿದೆ.

ಅಯ್ಯನಗೌಡ (28) ಮಹೇಶ (22), ಉದಯಕುಮಾರ (28) ಮೃತ ದುರ್ದೈವಿಗಳು. ರಮೇಶ ಭೂಷಣ ಎಂಬ ಇಬ್ಬರಿಗೆ ಗಂಭೀರ ಗಾಯವಾಗಿದೆ. ಎಲ್ಲರೂ ರಾಯಚೂರಿನ ಹೆಗಸನಹಳ್ಳಿ ನಿವಾಸಿಗಳು. ಕೋಳಿ ತುಂಬಿಕೊಂಡು ಬರುತ್ತಿದ್ದ ಬುಲೇರೋ ವಾಹನ ಚಾಲಕ ನಿರ್ಲಕ್ಷ್ಯದಿಂದ ಹಾಗೂ ವೇಗವಾಗಿ ಚಲಾಯಿಸಿ ಅಪಘಾತಕ್ಕೆ ಕಾರಣನಾಗಿದ್ದಾನೆ. ಘಟನಾ ಸ್ಥಳಕ್ಕೆ ಶಕ್ತಿ ನಗರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ವಿಮಾನದಲ್ಲಿ ಬಂತು 10 ಅನಕೊಂಡ! ಬ್ಯಾಂಕಾಕ್‌ನಿಂದ ಅಕ್ರಮ ಆಮದು, ಬಂಧನ

ಬೆಂಗಳೂರು: ಬೆಂಗಳೂರು ಏರ್ ಕಸ್ಟಮ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ, ಬ್ಯಾಂಕಾಕ್‌ನಿಂದ ಅಕ್ರಮವಾಗಿ ಕದ್ದು ತರಲಾಗುತ್ತಿದ್ದ 10 ಅನಕೊಂಡಗಳು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪತ್ತೆಯಾಗಿವೆ.

ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ತರಲಾಗಿದ್ದ 10 ಹಳದಿ ಆನಕೊಂಡಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬ್ಯಾಂಕಾಕ್‌ನಿಂದ ಪ್ರಯಾಣಿಕರೊಬ್ಬರು ಅಕ್ರಮವಾಗಿ ಲಗೇಜ್ ಬ್ಯಾಗ್‌ನಲ್ಲಿ ಈ ಆನಕೊಂಡಗಳನ್ನು ತಂದಿದ್ದರು. ಏರ್ ಕಸ್ಟಮ್ ಅಧಿಕಾರಿಗಳ ಪರಿಶೀಲನೆ ವೇಳೆ ಇವು ಪತ್ತೆಯಾಗಿವೆ. ಸದ್ಯ ಅನಕೊಂಡಗಳನ್ನು ರಕ್ಷಿಸಿ ಆರೋಪಿಯನ್ನು ಏರ್ ಕಸ್ಟಮ್ ಅಧಿಕಾರಿಗಳು ಬಂಧಿಸಿದ್ದಾರೆ. ಹಳದಿ ಬಣ್ಣ ಉಳ್ಳ ಆನಕೊಂಡ ಹಾವುಗಳನ್ನು ರಕ್ಷಿಸಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಲಾಗಿದೆ. ಅರಣ್ಯ ಸಂರಕ್ಷಣಾ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಲಾಗಿದೆ.

ಹಳದಿ ಅನಕೊಂಡವನ್ನು ಪರಾಗ್ವೆಯನ್ ಅನಕೊಂಡ ಎಂದೂ ಕರೆಯುತ್ತಾರೆ. ಇದು ದಕ್ಷಿಣ ಅಮೆರಿಕಾಕ್ಕೆ ಸೇರಿದ ಬೋವಾ ಜಾತಿಯ ಹಾವು. ಇದು ವಿಶ್ವದ ಅತಿದೊಡ್ಡ ಹಾವುಗಳಲ್ಲಿ ಒಂದು. ಆದರೆ ಅದರ ಹತ್ತಿರದ ಸಂಬಂಧಿ ಹಸಿರು ಅನಕೊಂಡಕ್ಕಿಂತ ಚಿಕ್ಕದು. ಇವುಗಳ ಮರಿಗಳನ್ನು ಕದ್ದು ಸಾಗಿಸುವ ವ್ಯಾಪಕ ಜಾಲ ಅಂತಾರಾಷ್ಟ್ರೀಯವಾಗಿ ಸಕ್ರಿಯವಾಗಿದೆ. ಈ ನಿಟ್ಟಿನಲ್ಲಿ ಕಸ್ಟಮ್‌ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಭಾರತದಲ್ಲಿ ವಿದೇಶದ ವಿಶಿಷ್ಟ ಪ್ರಾಣಿಗಳನ್ನು (Exotic Animals) ಆಮದು ಮಾಡುವುದು ಹಾಗೂ ಸಾಕುವುದನ್ನು ನಿಷೇಧಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಸಿಡಿಲಿಗೆ 7 ಕುರಿಗಳು ಸಾವು, ಕೊಡಗಿನಲ್ಲಿ ಭಾರಿ ಮಳೆಗೆ ಮಗುಚಿದ ಲಾರಿ; ನಾಳೆ ಎಲ್ಲೆಲ್ಲಿ ಆರ್ಭಟ

Rain News : ರಾಜ್ಯದ ಹಲವಡೆ ವ್ಯಾಪಕ ಮಳೆಯಾಗುತ್ತಿದ್ದು, ಏ.24ರ ವರೆಗೆ ಅಬ್ಬರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ (Karnataka weather Forecast) ಮುನ್ಸೂಚನೆಯನ್ನು ನೀಡಿದೆ. ಕೊಡಗಿನಲ್ಲಿ ವರುಣಾರ್ಭಟಕ್ಕೆ ಚಾಲಕನ ನಿಯಂತ್ರಣ ತಪ್ಪಿದ್ದು, ಲಾರಿಯೊಂದು ತಿರುವಿನಲ್ಲಿ ಮಗುಚಿ ಬಿತ್ತು.

VISTARANEWS.COM


on

By

Karnataka Weather Forecast
Koo

ಕೊಡಗು/ಬೆಂಗಳೂರು: ಸೋಮವಾರ (ಏ.22) ಕೊಡಗಿನ ಹಲವೆಡೆ ಗುಡುಗು ಸಹಿತ ಮಳೆಯು (Rain News) ಅಬ್ಬರಿಸುತ್ತಿದೆ. ಮಡಿಕೇರಿ, ನಾಪೋಕ್ಲು, ಮೂರ್ನಾಡು ಭಾಗದಲ್ಲಿ ಭರ್ಜರಿ (Karnataka Weather Forecast) ಮಳೆಯಾಗಿದೆ. ಒಂದು ಕಡೆಗೆ ಮಳೆಯಿಂದ ಕೊಡಗಿನ ಕೃಷಿಕರಲ್ಲಿ ಮಂದಹಾಸ ಮೂಡಿದರೆ ಮತ್ತೊಂದು ಕಡೆ ಮಳೆ ಅನಾಹುತವು ಆತಂಕ ಹೆಚ್ಚಿಸಿದೆ.

ಮಡಿಕೇರಿ‌‌ ಸಮೀಪದ ಜೋಡುಪಾಲ ಬಳಿ ಭಾರಿ ಮಳೆಗೆ ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು‌ ಮಗುಚಿ ಬಿತ್ತು. ಬೆಂಗಳೂರಿನಿಂದ‌‌ ಮಂಗಳೂರಿಗೆ ಲಾರಿಯಲ್ಲಿ ಜ್ಯೂಸ್ ಸಾಗಿಸಲಾಗುತ್ತಿತ್ತು. ಮಳೆಯಿಂದ ಜೋಡುಪಾಲದ ತಿರುವಿನಲ್ಲಿ ಲಾರಿಯ ವೀಲ್ ಜಾರಿ, ಪಲ್ಟಿ ಹೊಡೆದಿದೆ. ಅದೃಷ್ಟವಶಾತ್ ಲಾರಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸಿಡಿಲು ಬಡಿದು 7 ಕುರಿಗಳು ಸಾವು

ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಹೇಮಗುಡ್ಡ ಬಳಿ ಸಿಡಿಲು ಬಡಿದು 7 ಕುರಿಗಳು ಮೃತಪಟ್ಟಿವೆ. ಹೇಮಗುಡ್ಡ ಗ್ರಾಮದ ರಾಮಣ್ಣ ಬಂಡಿ ಎಂಬುವವರಿಗೆ ಸೇರಿದ 7 ಕುರಿಗಳು ಸಿಡಿಲಿಗೆ ಬಲಿಯಾಗಿವೆ. 8ಕ್ಕೂ ಹೆಚ್ಚು ಕುರಿಗಳು ಗಾಯಗೊಂಡಿವೆ. ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಧಾರವಾಡ ನಗರದಲ್ಲಿ ಗುಡುಗು ಸಹಿತ ಮಳೆಯಾಗಿದೆ. ಕಳೆದ ಎರಡು ದಿನಗಳಿಂದ ಹೆಚ್ಚಾಗಿದ್ದ ಬಿಸಿಲಿನ ತಾಪಮಾನವು ಮಳೆಯಿಂದಾಗಿ ತಣ್ಣಗಾಗಿತ್ತು. ಕೊಪ್ಪಳ‌ದಲ್ಲಿ ಗಾಳಿ, ಗುಡುಗು, ಸಿಡಿಲಿನ ಆರ್ಭಟದೊಂದಿಗೆ ಮಳೆಯಾಗಿದೆ. ಮುಂಜಾನೆ ಮೋಡ ಕವಿದ ವಾತಾವರಣ ಇತ್ತು, ಮಧ್ಯಾಹ್ನದ ಹೊತ್ತಿಗೆ ಶುರುವಾದ ಸಣ್ಣ ಮಳೆಯು ನಂತರ ರಭಸವಾದ ಗಾಳಿಯೊಂದಿಗೆ ಗುಡುಗು ಸಿಡಿಲಿನ ಶಬ್ಧವು ಜನರನ್ನು ಬೆಚ್ಚಿ ಬೀಳಿಸಿತ್ತು.

ಇದನ್ನೂ ಓದಿ: Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

ಮುಂದಿನ 48 ಗಂಟೆಯಲ್ಲಿ ಗಾಳಿ ಜತೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಏ.23ರಂದು ಉತ್ತರ ಒಳನಾಡಿನ ಬೀದರ್‌, ಕಲಬುರಗಿ, ಬೆಳಗಾವಿ, ಬಾಗಲಕೋಟೆಯ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಹಗುರ ಮಳೆಯಾಗಲಿದೆ. ಕೆಲವೊಮ್ಮೆ 30-40 ಕಿ.ಮೀ ವ್ಯಾಪ್ತಿಯಲ್ಲಿ ರಭಸವಾದ ಗಾಳಿಯು ಬೀಸಲಿದೆ. ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ ಸೇರಿ ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯದ ಕೆಲವೆಡೆ ಮಳೆಯಾಗಲಿದ್ದು, ಉಳಿದೆಡೆ ಒಣಹವೆ ಇರುವ ಸಾಧ್ಯತೆ ಇದೆ.

ಏ.24ರಂದು ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯದ ಒಂದೆರಡು ಕಡೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ.

ಬಿಸಿ ಗಾಳಿ ಮುನ್ನೆಚ್ಚರಿಕೆ

ಬೀದರ್‌, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ಗದಗ, ಧಾರವಾಡ, ದಾವಣಗೆರೆ, ಕೋಲಾರ, ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಇದೆ.

ಬಿಸಿ ಮತ್ತು ಆರ್ದ್ರತೆ

ಮುಂದಿನ 5 ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಜತೆಗೆ ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್‌ ಏರಿಕೆಯಾಗುವ ಸಾಧ್ಯತೆ ಇದೆ.

ಬೆಂಗಳೂರು ನಗರ ಮತ್ತು ಸುತ್ತಮುತ್ತ ಮುಂಜಾನೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಮಧ್ಯಾಹ್ನ ಅಥವಾ ಸಂಜೆಗೆ ಆಕಾಶವು ನಿರ್ಮಲವಾಗಿರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 37 ಮತ್ತು 24 ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Patanjali Case
ದೇಶ19 mins ago

Patanjali Case: ಪತಂಜಲಿ ಕೇಸ್‌; ಜಾಹೀರಾತು ಮೂಲಕ ಕ್ಷಮೆ ಕೋರಿದ ಬಾಬಾ ರಾಮ್‌ದೇವ್‌

Road accident in Ankola The biker was burnt to death
ಕ್ರೈಂ19 mins ago

Road Accident: ಅಂಕೋಲಾದಲ್ಲಿ ಭೀಕರ ಅಪಘಾತ; ಬೈಕ್‌ ಸವಾರ ಸುಟ್ಟು ಕರಕಲು!

Sachin Tendulkar Net Worth Assets Owned
ಕ್ರಿಕೆಟ್40 mins ago

Sachin Birthday: ಸಚಿನ್ ತೆಂಡೂಲ್ಕರ್ ಬಳಿ ಇರುವ ಅತ್ಯಂತ ದುಬಾರಿ ಆಸ್ತಿಗಳಿವು!

gold model
ಚಿನ್ನದ ದರ41 mins ago

Gold Rate Today: ಚಿನ್ನದ ಬೆಲೆ ಇಂದು ತುಸು ಏರಿಕೆ; 22K, 24K ಬಂಗಾರದ ಬೆಲೆಗಳನ್ನು ಇಲ್ಲಿ ಖಚಿತಪಡಿಸಿಕೊಳ್ಳಿ

Lok Sabha Election 2024 ID raid in Bengaluru South Lok Sabha constituency 21.15 crore Gold ornaments seized in 2 days
ಕರ್ನಾಟಕ55 mins ago

Lok Sabha Election 2024: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಐಡಿ ರೇಡ್;‌ 2 ದಿನದಲ್ಲಿ 21.15 ಕೋಟಿ ರೂ. ಚಿನ್ನಾಭರಣ ವಶ!

Train Ticket Cancellation
ದೇಶ1 hour ago

Train Ticket Cancellation: ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್‌; ಆರ್‌ಎಸಿ ಟಿಕೆಟ್‌ ರದ್ದು ಪಡಿಸಿದರೆ ಇನ್ನು ಮುಂದೆ ಕೇವಲ 60 ರೂ. ಕಡಿತ

sam pitroda narendra modi
ಪ್ರಮುಖ ಸುದ್ದಿ1 hour ago

Wealth Redistribution: ಸಂಪತ್ತು ಮರು ಹಂಚಿಕೆ ವಿವಾದದ ಬೆಂಕಿಗೆ ತುಪ್ಪ ಸುರಿದ ಸ್ಯಾಮ್ ಪಿತ್ರೊಡಾ; ಕಾಂಗ್ರೆಸ್‌ಗೆ ಫಜೀತಿ!

Rajkumar Birth Anniversary Dodmane family visited Rajkumar Samadhi
ಸಿನಿಮಾ2 hours ago

Rajkumar Birth Anniversary: ರಾಜ್ ಕುಮಾರ್ ಸಮಾಧಿಗೆ ಆಗಮಿಸಿ ಪೂಜೆ ಸಲ್ಲಿಸಿದ ದೊಡ್ಮನೆ ಕುಟುಂಬ

Zero Shadow Day
ವಿಜ್ಞಾನ2 hours ago

Zero Shadow Day: ಇಂದು ಬೆಂಗಳೂರಿನಲ್ಲಿ ನೆರಳೇ ಮೂಡುವುದಿಲ್ಲ; ಅದ್ಯಾಕೆ? ಏನಿದು ʼಶೂನ್ಯ ನೆರಳಿನ ದಿನʼ ?

Karan Johar receives Director of the Year award from Vice President of India
ಬಾಲಿವುಡ್2 hours ago

Karan Johar: ಉಪ ರಾಷ್ಟ್ರಪತಿಯಿಂದ ಪ್ರಶಸ್ತಿ ಸ್ವೀಕರಿಸಿದ ಕರಣ್ ಜೋಹರ್

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ8 hours ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು2 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ2 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು2 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು2 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ2 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ3 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ4 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20244 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

ಟ್ರೆಂಡಿಂಗ್‌