Site icon Vistara News

Youths Drowned: ನಂದಿಬೆಟ್ಟಕ್ಕೆ ಹೋಗಿದ್ದ ನಾಲ್ವರು ಯುವಕರು ಕೆರೆಯಲ್ಲಿ ಮುಳುಗಿ ಸಾವು

Bangalores Four youths drowned

#image_title

ಬೆಂಗಳೂರು: ನಂದಿ ಬೆಟ್ಟಕ್ಕೆ ಪ್ರವಾಸಕ್ಕೆ ಹೋಗಿದ್ದ ನಾಲ್ವರು ಯುವಕರು ನೀರು ಪಾಲಾಗಿರುವ (Youths Drowned) ಘಟನೆ ದೇವನಹಳ್ಳಿ ತಾಲೂಕಿನ ಕೊಯಿರಾ ಸಮೀಪದ ರಾಮನಾಥಪುರ ಕೆರೆಯಲ್ಲಿ ನಡೆದಿದೆ. ಬೈಕ್​ಗಳಲ್ಲಿ ನಂದಿ ಬೆಟ್ಟಕ್ಕೆ ತೆರಳಿದ್ದ ಯುವಕರು ಬೆಂಗಳೂರಿಗೆ ವಾಪಸ್ ಮರಳುತ್ತಿರುವಾಗ ದಾರಿ ಮಧ್ಯೆ ಸಿಕ್ಕ ಕೆರೆಯಲ್ಲಿ ಈಜಲು ಹೋದಾಗ ದುರಂತ ಜರುಗಿದೆ.

ಆರ್​.ಟಿ. ನಗರ ಮತ್ತು ಹೆಬ್ಬಾಳ ಮೂಲದ ಶೇಕ್ ತಾಹೀರ್ (18), ತೋಹಿದ್ (19), ಶಾಹಿದ್ (19), ಫೈಜಲ್ ಖಾನ್ (18) ಮೃತರು. ಯುವಕರು ಭಾನುವಾರ ಬೆಳಗ್ಗೆ ನಂದಿಬೆಟ್ಟಕ್ಕೆ ಬೈಕ್‌ಗಳಲ್ಲಿ ಹೋಗಿದ್ದರು. ನಂತರ ಮಧ್ಯಾಹ್ನ ವಾಪಸ್‌ ಬೆಂಗಳೂರಿಗೆ ವಾಪಸ್ ತೆರಳುತ್ತಿದ್ದರು. ಈ ವೇಳೆ ರಾಮನಾಥಪುರ ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಇದನ್ನು ಓದಿ | Drowned: ಸ್ನೇಹಿತರೊಂದಿಗೆ ಮೀನು ಹಿಡಿಯಲು ಹೋಗಿ ಯುವಕ ನೀರುಪಾಲು; ಕಾಡಾನೆ ದಾಳಿಗೆ ಮಹಿಳೆ ಬಲಿ

ಕೆರೆಯ ದಡದಲ್ಲಿ ನಿಂತ್ತಿದ್ದ ಬೈಕ್​ಗಳು ಮತ್ತು ಯುವಕರ ಬಟ್ಟೆಗಳನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ವಿಶ್ವನಾಥಪುರ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ನೀರಿನಲ್ಲಿ ಮುಳುಗಿರುವ ಮೃತದೇಹಗಳ ಪತ್ತೆಗಾಗಿ ಹುಡುಕಾಟ ನಡೆಸಿದರು. ಈ ವೇಳೆ ಇಬ್ಬರ ಮೃತದೇಹಗಳು ಪತ್ತೆಯಾಗಿದ್ದು, ಮತ್ತಿಬ್ಬರ ಯುವಕರ ಮೃತದೇಹಗಳಿಗಾಗಿ ಹುಡುಕಾಟ ನಡೆಯುತ್ತಿದೆ. ಸ್ಥಳದಲ್ಲಿ ಮೃತ ಯವಕರ ಪೊಷಕರ ಆಕ್ರಂದನ ಮುಗಿಲು ಮುಟ್ಟಿದೆ.

ರಾಣಿಝರಿ ಪಾಲ್ಸ್‌ಗೆ ಟ್ರೆಕ್ಕಿಂಗ್ ಹೋಗಿದ್ದ ಪ್ರವಾಸಿಗ ನಾಪತ್ತೆ

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ರಾಣಿಝರಿ ಪಾಲ್ಸ್‌ಗೆ ಟ್ರೆಕ್ಕಿಂಗ್‌ ಹೋಗಿದ್ದ ಪ್ರವಾಸಿಗರೊಬ್ಬರು ನಾಪತ್ತೆಯಾಗಿದ್ದಾರೆ. ಬೆಂಗಳೂರಿನ ಜೆ.ಪಿ.ನಗರದ ಪರೋಸ್ ಅಗರವಾಲ್ ನಾಪತ್ತೆಯಾಗಿದ್ದಾರೆ. ಇವರು ಸ್ನೇಹಿತರೊಂದಿಗೆ ತೆರಳಿದ್ದಾಗ ಕಾಡಿನಲ್ಲಿ ದಾರಿ ತಪ್ಪಿರುವ ಬಗ್ಗೆ ಮಾಹಿತಿ ಇದ್ದು, ಬಾಳೂರು ಮೀಸಲು ಅರಣ್ಯ, ಬೆಳ್ತಂಗಡಿ ಅರಣ್ಯ, ಬೆಳ್ತಂಗಡಿ ಗಡಿ ಭಾಗದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಹುಡುಕಾಟ ನಡೆಸುತ್ತಿದ್ದಾರೆ.

Exit mobile version