fraud case: ಅಪರಿಚಿತರ ನಂಬಿ ಕೆಲಸಕ್ಕಾಗಿ ಹೊರಗೆ ಹೋಗುವ ಹೆಣ್ಣು ಮಕ್ಕಳೇ ಎಚ್ಚರ! - Vistara News

ಕರ್ನಾಟಕ

fraud case: ಅಪರಿಚಿತರ ನಂಬಿ ಕೆಲಸಕ್ಕಾಗಿ ಹೊರಗೆ ಹೋಗುವ ಹೆಣ್ಣು ಮಕ್ಕಳೇ ಎಚ್ಚರ!

fraud case: ಉದ್ಯೋಗ ಕೊಡಿಸುವ ನೆಪದಲ್ಲಿ ಮಹಿಳೆಯರನ್ನು ಪುಸಲಾಯಿಸಿ ಬಳಿಕ ಅತ್ಯಾಚಾರವೆಸಗಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಆರೋಪಿಯನ್ನು ಆಗ್ನೇಯ ವಿಭಾಗದ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

VISTARANEWS.COM


on

Online Fraud
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕೆಲಸ ಹುಡುಕುವ ಧಾವಂತದಲ್ಲಿ ಅಪರಿಚಿತರ ನಂಬಿ ಮನೆಯಿಂದ ಕಾಲಿಡುವ ಮುನ್ನ ಹೆಣ್ಣು ಮಕ್ಕಳೇ ಸ್ವಲ್ಪ ಎಚ್ಚರವಹಿಸಿ. ಯಾಕೆಂದರೆ ಕೆಲಸ ಕೊಡಿಸುವುದಾಗಿ ನಿಮ್ಮನ್ನು ನಂಬಿಸಿ, ಬಳಿಕ ಅತ್ಯಾಚಾರವೆಸಗಿ ಅದನ್ನೂ ವಿಡಿಯೊ ಮಾಡಿಕೊಂಡು ಬ್ಲ್ಯಾಕ್‌ಮೇಲ್‌ (fraud case) ಮಾಡುವ ಜಾಲ ಬೆಂಗಳೂರಿನಲ್ಲಿ ಆ್ಯಕ್ಟಿವ್‌ ಆಗಿದೆ.

ಆಗ್ನೇಯ ವಿಭಾಗ ಪೊಲೀಸರು ಕಾರ್ಯಾಚರಣೆ ನಡೆಸಿ ಕಾಮುಕ ದಿಲ್ಲಿ ಪ್ರಸಾದ್ ಎಂಬಾತನನ್ನು ಬಂಧಿಸಿದ್ದಾರೆ. ಬೆಂಗಳೂರಿನ ಪ್ರತಿಷ್ಠಿತ ಕಂಪನಿಯಲ್ಲಿ ಇಂಜಿನಿಯರ್ ಆಗಿದ್ದ ಆರೋಪಿ ದಿಲ್ಲಿ ಪ್ರಸಾದ್‌ ಮೂಲತಃ ಆಂಧ್ರ ಪ್ರದೇಶ ಮೂಲದವನು. ಸಾಮಾಜಿಕ ಜಾಲತಾಣದಲ್ಲಿ ಗಾಳ ಹಾಕುತಿದ್ದ ಈತ ಮೋನಿಯ ಮತ್ತು ಮ್ಯಾನೇಜರ್ ಎಂಬ ಎರಡು ನಕಲಿ ಇನ್ಸ್ಟಾಗ್ರಾಮ್‌ ಖಾತೆಯನ್ನು ತೆರೆದುಕೊಂಡಿದ್ದ.

fraud case
ಆರೋಪಿ ದಿಲ್ಲಿ ಪ್ರಸಾದ್‌

ಆ ಖಾತೆ ಮೂಲಕ ಯುವತಿಯರನ್ನು ಪರಿಚಯ ಮಾಡಿಕೊಂಡು ಕೆಲಸ ಕೊಡಿಸುವುದಾಗಿ ಪುಸಲಾಯಿಸುತ್ತಿದ್ದ. ನಂತರ ಅವರನ್ನು ಬೇರೆ ಸ್ಥಳಕ್ಕೆ ಕರೆಸಿಕೊಂಡು ಅತ್ಯಾಚಾರವೆಸಗಿ ವಿಡಿಯೊ ಮಾಡಿಕೊಳ್ಳತ್ತಿದ್ದ. ನಂತರ ಇದೇ ವಿಡಿಯೊ ಬಳಸಿಕೊಂಡು ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ.

ಅಷ್ಟೇ ಅಲ್ಲದೆ ವಿವಿಧ ಕಾರಣ ಹೇಳಿ ಯುವತಿಯರ ನಗ್ನ ಫೋಟೊಗಳನ್ನು ಪಡೆದುಕೊಳ್ಳುತ್ತಿದ್ದ. ಅದನ್ನೇ ಇಟ್ಟಿಕೊಂಡು ಬೇರೊಬ್ಬರ ಜತೆ ಲೈಂಗಿಕ ಕ್ರಿಯೆಯಲ್ಲಿ ತೊಡಗುವಂತೆ ಬೆದರಿಸುತ್ತಿದ್ದ. ಹೀಗೆ ಬಂದವರನ್ನು ಮಡಿವಾಳದ ಓಯೋ ರೂಂನಲ್ಲಿ ಬಿಟ್ಟು, ಖಾಸಗಿ ವಿಡಿಯೊ ಸೆರೆ ಹಿಡಿದುಕೊಳ್ಳುತ್ತಿದ್ದ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಬಿಜೆಪಿ ಕಾರ್ಯಕ್ರಮಕ್ಕೆ ಹಾಕಿದ್ದ ಬಂಟಿಂಗ್ಸ್‌; ಆಟವಾಡುತ್ತಾ ಆಡುತ್ತಾ ಕುತ್ತಿಗೆ ಬಿಗಿದು ಪ್ರಾಣ ಕಳೆದುಕೊಂಡ ಕೋತಿ

ತನಿಖೆ ವೇಳೆ ಮೂರು ಯುವತಿಯ ಜತೆ ಈ ರೀತಿ ಕೃತ್ಯ ಮಾಡಿರುವುದು ತಿಳಿದು ಬಂದಿದೆ. ಹಲವು ನಕಲಿ ಖಾತೆಗಳು ಜತೆಗೆ 10ಕ್ಕೂ ಅಧಿಕ ಮಹಿಳೆಯರ ಅಶ್ಲೀಲ ಫೋಟೊ ಹೊಂದಿರುವುದು ಪತ್ತೆ ಆಗಿದೆ. ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಬೆಂಗಳೂರಿನ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿಜಯಪುರ

Road Accident : ಮಿನಿ ಟ್ರಕ್‌ ಪಲ್ಟಿಯಾಗಿ 30ಕ್ಕೂ ಅಧಿಕ ಮಂದಿಗೆ ಗಾಯ; ಬಸ್‌ನಿಂದ ಬಿದ್ದು ಚಕ್ರಕ್ಕೆ ಸಿಲುಕಿದ ವಿದ್ಯಾರ್ಥಿ

Road Accident : ವಿಜಯಪುರದಲ್ಲಿ ಪ್ರತ್ಯೇಕ ಕಡೆಗಳಲ್ಲಿ ರಸ್ತೆ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಮಿನಿ ಟ್ರಕ್‌ವೊಂದು ಪಲ್ಟಿಯಾಗಿದೆ. ಮತ್ತೊಂದು ಕಡೆ ಚಲಿಸುತ್ತಿದ್ದ ಬಸ್‌ನಿಂದ ಬಿದ್ದ ವಿದ್ಯಾರ್ಥಿ ಗಂಭೀರ ಗಾಯಗೊಂಡಿದ್ದಾನೆ.

VISTARANEWS.COM


on

By

Road Accident
Koo

ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ (Road Accident) ಮಿನಿ ಟ್ರಕ್ ವಾಹನ ಪಲ್ಟಿಯಾಗಿದ್ದು, 30ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಮನ್ನಾಪುರ ಗ್ರಾಮದಲ್ಲಿ ಅಪಘಾತ ನಡೆದಿದೆ.

ಗೋಲಗೇರಿ ಗ್ರಾಮದ ಗೊಲ್ಲಾಳೇಶ್ವರನ ದೇವರ ಬಳಿ ಮಗುವಿನ ಜವಳ ತೆಗೆಯುವ ಕಾರ್ಯಕ್ರಮಕ್ಕೆ ಹಿಕ್ಕಣಗುತ್ತಿಯಿಂದ ಗೋಲಗೇರಿಗೆ ಹೊರಟಿದ್ದರು. ಈ ವೇಳೆ ಮನ್ನಾಪುರ ಬಳಿ ಅಪಘಾತ ಸಂಭವಿಸಿದೆ. ಗಾಯಾಳುಗಳಿಗೆ ಸಿಂದಗಿ ತಾಲೂಕಾಸ್ಪತ್ರೆಗೆ ದಾಖಲು ಮಾಡಲಾಗಿದೆ. 10ಕ್ಕೂ ಅಧಿಕ ಜನರಿಗೆ ಗಂಭೀರವಾಗಿದೆ. ಸಿಂದಗಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಚಲಿಸುತ್ತಿದ್ದ ಬಸ್‌ನಿಂದು ಬಿದ್ದ ವಿದ್ಯಾರ್ಥಿ

ಚಲಿಸುತ್ತಿದ್ದ ಬಸ್‌ನಿಂದ ಬಿದ್ದ ವಿದ್ಯಾರ್ಥಿ ಹಿಂಬದಿ ಚಕ್ರಕ್ಕೆ ಸಿಲುಕಿ ತೀವ್ರವಾಗಿ ಗಾಯಗೊಂಡಿದ್ದಾನೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬನ್ನಿಹಟ್ಟಿ ಪಿ ಎ ಗ್ರಾಮದಲ್ಲಿ ಘಟನೆ ನಡೆದಿದೆ. ಸರ್ಕಾರಿ ಬಸ್ ಮೂಲಕ ಶಾಲೆಗೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ.

ಸಿಂದಗಿ ಪಟ್ಟಣದ ಎಚ್‌ಜಿ ಹೈಸ್ಕೂಲ್‌ನಲ್ಲಿ ಎಸ್‌ಎಸ್‌ಎಲ್‌ಸಿ ಓದುತ್ತಿದ್ದ ಸಂದೀಪ ಶಿವಪ್ಪ ಗಿಡ್ಡನಗೋಳ ಎಂಬಾತ ಗಂಭೀರ ಗಾಯಗೊಂಡವರು. ಸಂದೀಪ್‌ನನ್ನು ಸಿಂದಗಿ ತಾಲೂಕಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇತ್ತ ಈ ಘಟನೆ ಖಂಡಿಸಿ ಬನ್ನಿಹಟ್ಟಿ ಪಿ ಎ ಹಾಗೂ ಸಿಂದಗಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಬಸ್ ಚಾಲಕ ಹಾಗೂ ನಿರ್ವಾಹಕನ ಮೇಲೆ ಕ್ರಮಕ್ಕೆ ಆಗ್ರಹಿಸಿದ್ದಾರೆ. ಸ್ಥಳಕ್ಕೆ ಸಿಂದಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿದೆ.

ಇದನ್ನೂ ಓದಿ: Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

ಬೆಂಗಳೂರಿನಲ್ಲಿ ಕಸದ ಲಾರಿಯ ಆರ್ಭಟಕ್ಕೆ ಇಬ್ಬರು ಟೆಕ್ಕಿಗಳು ಬಲಿ

ಬೆಂಗಳೂರು: ರಾಜಧಾನಿಯಲ್ಲಿ ಬಿಬಿಎಂಪಿ ಕಸದ ಲಾರಿ (BBMP Lorry) ಮತ್ತೆರಡು ಬಲಿ (Road Accident) ಪಡೆದುಕೊಂಡಿದೆ. ನಗರದ ಹೃದಯ ಭಾಗದ ಕೆಆರ್ ಸರ್ಕಲ್ (KR Circle) ಬಳಿ ಈ ದುರ್ಘಟನೆ ನಡೆದಿದೆ. ಮೃತರಿಬ್ಬರೂ ಟೆಕ್ಕಿಗಳಾಗಿದ್ದು, ಟಿಸಿಎಸ್‌ನಲ್ಲಿ (TCS) ಕೆಲಸ ಮಾಡುತ್ತಿದ್ದರು.

ರಾತ್ರಿ 8.45ರ ಸುಮಾರಿಗೆ ಈ ಭೀಕರ ಅಪಘಾತ ನಡೆದಿದೆ. ಪ್ರಶಾಂತ್ (25), ಬಯನ್ನಗಾರಿ ಶಿಲ್ಪ (27) ಮೃತ ದುರ್ದೈವಿಗಳು. ಪ್ರಶಾಂತ್ ಮೂಲತಃ ಬೆಂಗಳೂರಿನ ಬಾಣಸವಾಡಿಯ ಯುವಕ. ಶಿಲ್ಪ ಆಂಧ್ರ ಮೂಲದವಳು. ಪ್ರಶಾಂತ್ ಮತ್ತು ಯುವತಿ ಇಬ್ಬರು ಸಹೋದ್ಯೋಗಿಗಳಾಗಿದ್ದು, ಐಟಿಪಿಎಲ್ ಟಿಸಿಎಸ್‌ನಲ್ಲಿ ಕೆಲಸ ಮಾಡುತ್ತಿದ್ದರು. ಪಿಜಿಯಲ್ಲಿ ವಾಸ ಮಾಡುತ್ತಿದ್ದ ಯುವತಿ ಶಿಲ್ಪ, ಊಟಕ್ಕೆ ಎಂದು ಹೊರಗೆ ಬಂದಾಗ ಅಪಘಾತವಾಗಿದೆ.

ಮೆಜೆಸ್ಟಿಕ್‌ದ ಕೆಆರ್ ಸರ್ಕಲ್ ಮಾರ್ಗವಾಗಿ ಇವರಿಬ್ಬರೂ ಬೈಕ್‌ನಲ್ಲಿ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ. ಸಿಐಡಿ ಸಿಗ್ನಲ್ ಮಾರ್ಗದಿಂದ ಕೆಆರ್ ಸರ್ಕಲ್ ಕಡೆ ಕಸದ ಲಾರಿ ತೀವ್ರ ವೇಗದಿಂದ ಬಂದಿದೆ. ತಿರುವು ಇದ್ದ ಮಾರ್ಗದಲ್ಲಿ ಲಾರಿ ವೇಗವಾಗಿ ಬಂದ ಕಾರಣ ಕಸದ ಲಾರಿಯ ವೇಗದಿಂದ ತಪ್ಪಿಸಿಕೊಳ್ಳಲಾಗದೇ ಬೈಕ್‌ ಲಾರಿ ಕೆಳಗೆ ಸಿಲುಕಿಕೊಂಡಿದೆ.

ಮೃತರ ಮೇಲೆ ಹರಿದ ಕಸದ ಲಾರಿ ಸುಮಾರು 10 ಮೀಟರ್‌ನಷ್ಟು ದೂರ ದೇಹಗಳನ್ನು ಎಳೆದೊಯ್ದಿದೆ. ರಸ್ತೆ ಮೇಲೆ ರಕ್ತ ಚೆಲ್ಲಾಡಿದೆ ಎಂದು ಪ್ರತ್ಯಕ್ಷದರ್ಶಿಗಳು ವಿವರಿಸಿದ್ದಾರೆ. ಅಪಘಾತದ ಬಳಿಕ ಕಸದ ಲಾರಿ ಚಾಲಕ ಪರಾರಿಯಾಗಿದ್ದಾನೆ. ಕೂಡಲೇ ಅಪಘಾತಕ್ಕೊಳಗಾದವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಮಾರ್ಗದಲ್ಲಿಯೇ ಇಬ್ಬರೂ ಮೃತ ಪಟ್ಟರು. ಮೃತದೇಹಗಳನ್ನು ಬೌರಿಂಗ್ ಆಸ್ಪತ್ರೆಗೆ ಒಯ್ಯಲಾಗಿದೆ.

ಸ್ಥಳಕ್ಕೆ ಹಲಸೂರು ಗೇಟ್ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಹಲಸೂರು ಗೇಟ್ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಗನನ್ನು ಕಳೆದುಕೊಂಡು ತಂದೆ ತಾಯಿ ಕಣ್ಣೀರು ಹಾಕಿದ್ದು, ಆಸ್ಪತ್ರೆಯಲ್ಲಿ ಪ್ರಶಾಂತ್ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. “ಬಿಬಿಎಂಪಿ ವಾಹನ ಅಪಘಾತ ಆಗಿದೆ. ನನ್ನ ಮಗ ಹಾಗೂ ಯುವತಿ ಸಾವನ್ನಪ್ಪಿದ್ದಾರೆ. ಮೊದಲು ಪೊಲೀಸರು ಸರಿಯಾಗಿ ರೆಸ್ಪಾನ್ಸ್ ಕೂಡ ಮಾಡಿಲ್ಲ. ನಮಗೆ ನ್ಯಾಯ ಬೇಕಾಗಿದೆ. ಅಪಘಾತ ಮಾಡಿದ ಚಾಲಕನ ಬಂಧನ ಆಗಬೇಕು. ನ್ಯಾಯ ಸಿಗದಿದ್ದರೆ ನಾನು ನನ್ನ ಪತ್ನಿ ಮತ್ತು ಮಗಳು ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಳ್ತೇವೆ. ನನ್ನ ಮಗ ಮಾರ್ಥಾಸ್ ಆಸ್ಪತ್ರೆಯಲ್ಲಿಯೇ ಜನಿಸಿದ್ದ. ಇದೇ ಆಸ್ಪತ್ರೆಯಲ್ಲಿಯೇ ಸಾವನ್ನಪ್ಪಿದ್ದಾನೆ” ಎಂದು ಮೃತ ಪ್ರಶಾಂತ್ ತಂದೆ ಲೋಕೇಶ್ ಹೇಳಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Karnataka Flood: ನೆರೆ ಪೀಡಿತ ಸ್ಥಳಗಳಿಗೆ ಭೇಟಿ ನೀಡಲು 6 ತಂಡ ರಚಿಸಿದ ಬಿಜೆಪಿ; ನಾಳೆಯಿಂದ ಪ್ರವಾಸ

Karnataka Flood: ನೆರೆ ಪೀಡಿತ ಪ್ರದೇಶಗಳಿಗೆ (Karnataka Flood) ಭೇಟಿ ನೀಡುವ ಉದ್ದೇಶದಿಂದ ರಾಜ್ಯ ಬಿಜೆಪಿಯು 6 ತಂಡಗಳನ್ನು ರಚನೆ ಮಾಡಿದೆ. ಜುಲೈ 30 ಮತ್ತು 31ರಂದು ಈ ತಂಡಗಳು ಪ್ರವಾಸ ಕೈಗೊಳ್ಳಲಿವೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

VISTARANEWS.COM


on

Karnataka Flood
Koo

ಬೆಂಗಳೂರು: ರಾಜ್ಯದಲ್ಲಿ ಭಾರಿ ಮಳೆಯಿಂದ ಪ್ರವಾಹ ಸೃಷ್ಟಿಯಾಗಿ ಜನ ಸಂಕಷ್ಟಕ್ಕೀಡಾಗಿದ್ದಾರೆ. ಹೀಗಾಗಿ ನೆರೆ ಪೀಡಿತ ಪ್ರದೇಶಗಳಿಗೆ (Karnataka Flood) ಭೇಟಿ ನೀಡುವ ಉದ್ದೇಶದಿಂದ ರಾಜ್ಯ ಬಿಜೆಪಿಯು 6 ತಂಡಗಳನ್ನು ರಚನೆ ಮಾಡಿದ್ದು,, ಜುಲೈ 30 ಮತ್ತು 31ರಂದು ಈ ತಂಡಗಳು ಪ್ರವಾಹ ಪೀಡಿಯ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್, ಶಾಸಕರಾದ ಅರಗ ಜ್ಞಾನೇಂದ್ರ, ಡಾ. ಸಿ.ಎನ್. ಅಶ್ವತ್ಥನಾರಾಯಣ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ್ ಹಾಗೂ ಮಾಜಿ ಸಚಿವ ಬಿ. ಶ್ರೀರಾಮುಲು ಅವರ ನೇತೃತ್ವದಲ್ಲಿನ ತಂಡಗಳು ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿವೆ.

ಆರ್. ಅಶೋಕ್ ಅವರ ತಂಡವು ಮಂಗಳೂರು, ಬೆಳಗಾವಿ ಜಿಲ್ಲೆಗಳಲ್ಲಿ, ಆರಗ ಜ್ಞಾನೇಂದ್ರ ಅವರ ತಂಡವು ಶಿವಮೊಗ್ಗ ಜಿಲ್ಲೆಯಲ್ಲಿ, ಡಾ. ಸಿ.ಎನ್. ಅಶ್ವತ್ಥನಾರಾಯಣ್ ಅವರ ತಂಡವು ಕೊಡಗು ಮತ್ತು ಉಡುಪಿ ಜಿಲ್ಲೆಗಳಲ್ಲಿ, ಛಲವಾದಿ ನಾರಾಯಣಸ್ವಾಮಿ ತಂಡವು ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ, ಅರವಿಂದ ಬೆಲ್ಲದ್ ಅವರ ತಂಡವು ಬಾಗಲಕೋಟೆ, ವಿಜಯಪುರ ಜಿಲ್ಲೆಗಳಲ್ಲಿ, ಬಿ. ಶ್ರೀರಾಮುಲು ಅವರ ತಂಡವು ಕೊಪ್ಪಳ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿದೆ.

ಇದನ್ನೂ ಓದಿ | BJP-JDS Padayatra: ಬಿಜೆಪಿ-ಜೆಡಿಎಸ್‌ ಪಾದಯಾತ್ರೆಗೆ ಅನುಮತಿ ಕೊಡಲ್ಲ: ಗೃಹ ಸಚಿವ ಪರಮೇಶ್ವರ್‌

ಪಾದಯಾತ್ರೆಗೂ ಮುನ್ನ ಪ್ರವಾಹ ಸ್ಥಳಗಳಿಗೆ ಭೇಟಿ: ವಿಜಯೇಂದ್ರ

ಬೆಂಗಳೂರು: ರಾಜ್ಯದಲ್ಲಿ ಮಳೆಯಿಂದಾಗಿ ಪ್ರವಾಹ ಹೆಚ್ಚಾಗಿದೆ. ಹೀಗಾಗಿ ಪ್ರವಾಹ ಸ್ಥಳಗಳಿಗೆ ಭೇಟಿ ನೀಡಲು ಬಿಜೆಪಿಯಿಂದ 6 ತಂಡ ರಚನೆ ಮಾಡಿದ್ದೇವೆ. ವಿಪಕ್ಷ ನಾಯಕ ಆರ್ ಅಶೋಕ್, ಛಲವಾದಿ ನಾರಾಯಣಸ್ವಾಮಿ, ಅರವಿಂದ ಬೆಲ್ಲದ್ ಸೇರಿ 6 ನಾಯಕರ ನೇತೃತ್ವದಲ್ಲಿ 6 ತಂಡ ರಚನೆಯಾಗಿದೆ. ಮಂಗಳವಾರ, ಬುಧವಾರ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.

ಮೈಸೂರು ಚಲೋ ಪಾದಯಾತ್ರೆ ಪೂರ್ವಭಾವಿ ಸಭೆ ಬಳಿಕ ಅವರು ಮಾತನಾಡಿದರು. ಇನ್ನು ಬಿಜೆಪಿ ಪಾದಯಾತ್ರೆ ಆರಂಭಿಸಲು ಸಕಾರಣಗಳು ಇವೆ, ಬಿಜೆಪಿ ಅವಧಿಯಲ್ಲಿ ನಮ್ಮ ಮೇಲೆ ಸಾಕಷ್ಟು ಅಪಪ್ರಚಾರ ಮಾಡಲು ಕಾಂಗ್ರೆಸ್ ಯಶಸ್ವಿಯಾಯಿತು. ಶೇ.40 ವಿಚಾರದಲ್ಲಿ ಯಶಸ್ವಿಯಾಗಿ ಅಪಪ್ರಚಾರ ಮಾಡಿ, ಅಧಿಕಾರಕ್ಕೆ ಬಂದಿದೆ ಎಂಬುದನ್ನು ನಾವು ಒಪ್ಪಿಕೊಳ್ಳಲೇಬೇಕು. ಆದರೆ, ಅಭಿವೃದ್ಧಿ ಕೆಲಸಗಳ ಬಗ್ಗೆ ಯಾರೂ ಚಕಾರ ಎತ್ತುತ್ತಿಲ್ಲ. ಅಭಿವೃದ್ಧಿ ಕೆಲಸ ಮಾಡಿಕೊಡಿ ಅಂತ ಸಿಎಂ ಪತ್ರ ತೆಗೆದುಕೊಂಡು ಹೋದರೆ ಏ ಏನ್ರೀ ಅಭಿವೃದ್ಧಿ ಕೆಲಸ, ಗ್ಯಾರಂಟಿ ಕೊಡುತ್ತಿಲ್ಲವೇನ್ರೀ, ಅದೇ ಅಭಿವೃದ್ಧಿ ಕೆಲಸ ಎಂದು ಸಿಎಂ ಹೇಳುತ್ತಿದ್ದಾರೆ ಎಂದು ಟೀಕಿಸಿದರು.

ಲೋಕಸಭಾ ಚುನಾವಣೆಗೆ ಮೂರು ದಿನಗಳ ಮುಂಚೆ ಗೃಹ ಲಕ್ಷ್ಮೀ ಯೋಜನೆ ಹಣ ಖಾತೆಗೆ ಹೋಗಿದೆ, ಬಳಿಕ ಸ್ಥಗಿತ ಆಗಿದೆ. ಚುನಾವಣೆ ಹತ್ತಿರ ಬಂದಾಗ ಖಾತೆಗೆ ಜಮಾ‌ ಆಗುತ್ತದೆ, ಚುನಾವಣೆ ಮುಗಿದ ಬಳಿಕ ಬಂದ್ ಆಗುತ್ತದೆ, ಇದು ಕಾಂಗ್ರೆಸ್ ಗ್ಯಾರಂಟಿ. ಇನ್ನೆರಡು ತಿಂಗಳು ಹೋದರೆ ಕೆಎಸ್ಆರ್‌ಟಿಸಿಗೆ ಬೀಗ ಹಾಕುತ್ತಾರೆ ಅಷ್ಟೇ. ವಾಲ್ಮೀಕಿ ನಿಗಮ ಅಧೀಕ್ಷಕ ಚಂದ್ರಶೇಖರ ಡೆತ್ ‌ನೋಟ್ ನೋಡಿದ ಮೇಲೆ ಕೂಡ ವಾಲ್ಮೀಕಿ ನಿಗಮದಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ಸಿಎಂ ಹೇಳುತ್ತಾರೆ. ಇನ್ನು ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಬಡವರಿಗೆ ತಲುಪಬೇಕಿದ್ದ ಮೂರರಿಂದ ನಾಲ್ಕು ಸಾವಿರ ಕೋಟಿ ಬೆಲೆ ಬಾಳುವ ಸೈಟುಗಳು ಉಳ್ಳವರ ಪಾಲಾಗಿವೆ ಎಂದು ಆರೋಪಿಸಿದರು.

ನಿವೇಶನ ಹಗರಣ ನಡೆದಿದೆ, ಯಾವುದೇ ಕಾರಣಕ್ಕೂ ನಿವೇಶನ ಹಂಚಿಕೆ ಆಗಬಾರದು ಅಂತ ಮುಡಾ ಅಧ್ಯಕ್ಷ ಮರಿಗೌಡ ಅವರೇ ಕಮಿಷನರ್‌ಗೆ ಪತ್ರ ಬರೆದಿದ್ದರು. ಜಿಲ್ಲಾಧಿಕಾರಿ ತನಿಖೆ ಸರಿ ಇದೆ ಎಂದು ಒಪ್ಪಿಕೊಳ್ಳುತ್ತಾರೆ. ಬಳಿಕ ಮುಡಾ ಸೈಟ್ ಹಂಚಿಕೆ ನಿಲ್ಲಿಸಬೇಕು ಅಂತ ರಾಜ್ಯ ಸರ್ಕಾರ ಆದೇಶ ಮಾಡಿದೆ. ಆದೇಶದ ಬಳಿಕವೂ ಯತೇಚ್ಛವಾಗಿ ಸೈಟ್ ಹಂಚಿಕೆ ಮಾಡುತ್ತಾರೆ. ತನಿಖಾ ವರದಿ ಕೂಡ ಇದೆ. ಇದಾದ ಮೇಲೂ ಮುಡಾ ಕಮಿಷನರ್ ಸೈಟ್ ಹಂಚಿಕೆ ಮಾಡುತ್ತಾರೆ. ಅವರ ಹಿಂದಿರೋ ಶಕ್ತಿ ಯಾವುದು ಎಂದು ಪ್ರಶ್ನಿಸಿದರು.

ವಾಲ್ಮೀಕಿ ನಿಗಮ ಹಗರಣ ಹಾಗೂ ಮುಡಾ ಹಗರಣದಿಂದ ಪರಿಶಿಷ್ಟರಿಗೆ, ಬಡವರಿಗೆ ಅನ್ಯಾಯ ಆಗಿದೆ. ಹೀಗಾಗಿ ಕಾಂಗ್ರೆಸ್ ಪಕ್ಷಕ್ಕೆ ಪಾಠ ಕಲಿಸಬೇಕಿದೆ. ಬಿಜೆಪಿ ಹೋರಾಟದಿಂದ ಸಚಿವ ನಾಗೇಂದ್ರ ರಾಜೀನಾಮೆ ಕೊಟ್ಟಿದ್ದಾರೆ. ಸದನದಲ್ಲಿ ವಾಲ್ಮೀಕಿ ಹಗರಣ ಚರ್ಚೆ ಮಾಡಿದ್ದರು. ಆದರೆ ಮುಡಾ ಹಗರಣದ ಬಗ್ಗೆ ಚರ್ಚೆಗೆ ಅವಕಾಶ ಕೊಡಲಿಲ್ಲ. ಇವರ ಹಣೆಬರಹ ಬಯಲಿಗೆ ಬರಲಿದೆ ಅಂತ ಅವಕಾಶ ಕೊಡಲಿಲ್ಲ. ಕಾಂಗ್ರೆಸ್ ಬಂಡವಾಳ‌ ಹೊರ ಬರಲಿದೆ ಅಂತ ಸದನದಲ್ಲಿ ಚರ್ಚೆಗೆ ಅವಕಾಶವೇ ನೀಡಲಿಲ್ಲ ಎಂದು ಕಿಡಿಕಾರಿದರು.

ಇದನ್ನೂ ಓದಿ | KRS Dam: ಕೆಆರ್‌ಎಸ್‌ಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ; ಕಾವೇರಿ ಮಾತೆ ಪ್ರತಿಮೆಗೆ ವಿಶೇಷ ಪೂಜೆ

ಆಗಸ್ಟ್ 3ರಿಂದ ಮೈಸೂರು ಚಲೋ ಪಾದಯಾತ್ರೆ

ಕಾಂಗ್ರೆಸ್ ಅವರ ಗೊಡ್ಡು ಬೆದರಿಕೆಗೆ ನಮ್ಮ‌ ಕಾರ್ಯಕರ್ತರು ಹೆದರಲ್ಲ. ನಿಮ್ಮ ವಿರುದ್ಧ ಹೋರಾಟ ಮಾಡದಿದ್ದರೆ ಭಗವಂತ ಕೂಡ ಮೆಚ್ಚಲ್ಲ. ನಿಮ್ಮ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಹೋರಾಟ ಮಾಡುತ್ತಿದೆ. ನಮ್ಮ ಪಕ್ಷದ ಹಾಗೂ ಜೆಡಿಎಸ್‌ ಪಕ್ಷದ ಎಲ್ಲಾ ಹಿರಿಯರು ಚರ್ಚೆ ಮಾಡಿ ನಿರ್ಣಯ ತೆಗೆದುಕೊಂಡಿದ್ದೇವೆ. ಆಗಸ್ಟ್ 3ರಿಂದ ಪಾದಯಾತ್ರೆ ಆರಂಭವಾಗಿ, ಆಗಸ್ಟ್ 10ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ. ಬಡವರ ಪರವಾಗಿ ಈ ಹೋರಾಟ ನಡೆಯಲಿದೆ.

Continue Reading

ಕರ್ನಾಟಕ

KRS Dam: ಕೆಆರ್‌ಎಸ್‌ಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ; ಕಾವೇರಿ ಮಾತೆ ಪ್ರತಿಮೆಗೆ ವಿಶೇಷ ಪೂಜೆ

KRS Dam: ಕೃಷ್ಣರಾಜಸಾಗರ ಜಲಾಶಯ (ಕೆಆರ್‌ಎಸ್‌) ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಸೋಮವಾರ ಬಾಗಿನ ಅರ್ಪಿಸಿದರು. ಬೆಳಗ್ಗೆ 11 ಗಂಟೆಗೆ ಮುಹೂರ್ತದಲ್ಲಿ ಜಲಾಶಯಕ್ಕೆ ಬಾಗಿನ ಅರ್ಪಿಸಲಾಯಿತು.

VISTARANEWS.COM


on

ಕೆಆರ್‌ಎಸ್‌ಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ
Koo

ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೃಷ್ಣರಾಜಸಾಗರ ಜಲಾಶಯ (ಕೆಆರ್‌ಎಸ್‌) ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಸೋಮವಾರ ಬಾಗಿನ ಅರ್ಪಿಸಿದರು. ಬೆಳಗ್ಗೆ 11 ಗಂಟೆಗೆ ಅಭಿಜಿನ್ ಮುಹೂರ್ತದಲ್ಲಿ ಜಲಾಶಯಕ್ಕೆ (KRS Dam) ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ ಅವರು, ನಂತರ ಕಾವೇರಿ ಮಾತೆ ಪ್ರತಿಮೆಗೆ ವಿಶೇಷ ಪೂಜೆ ಸಲ್ಲಿಸಿ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾದರು.

ಬಾಗಿನ ಅರ್ಪಿಸುವ ವೇಳೆ ಸಚಿವರಾದ ಡಾ. ಎಚ್.ಸಿ. ಮಹದೇವಪ್ಪ, ಎನ್. ಚೆಲುವರಾಯಸ್ವಾಮಿ, ವೆಂಕಟೇಶ್, ಮೈಸೂರು ಹಾಗೂ ಮಂಡ್ಯ ಜಿಲ್ಲೆಯ ಶಾಸಕರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಏನು ಕೊಟ್ಟಿದೆ?: ಸಿಎಂ ಪ್ರಶ್ನೆ

ಮೈಸೂರು: ಬಜೆಟ್ ಮೀಟಿಂಗ್ ಕರೆದಾಗ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂಪಾಯಿಗಳನ್ನೂ ನೀಡುವುದಾಗಿ ಕೇಂದ್ರ ಘೋಷಣೆ ಮಾಡಿದ್ದು, ಅದನ್ನು ಕೊಡಿ ಎಂದು ಕೋರಿದ್ದೆವು. ಈ ಬಾರಿಯ ಬಜೆಟ್ ನಲ್ಲಿ ಈ ಬಗ್ಗೆ ಪ್ರಸ್ತಾಪವಿಲ್ಲ. 15ನೇ ಹಣಕಾಸು ಆಯೋಗವು ಶಿಫಾರಸು ಮಾಡಿದ್ದ 5495 ಕೋಟಿಗಳ ವಿಶೇಷ ಅನುದಾನವನ್ನೂ ಕೊಟ್ಟಿಲ್ಲ. ಫೆರಿಫೆರಲ್ ರಿಂಗ್ ರೋಡ್‌ಗೆ 3000 ಕೋಟಿ ಕೊಡುವುದಾಗಿ ಹೇಳಿದ್ದರು. ಅದೂ ಇಲ್ಲ. 3000 ಕೋಟಿ ಕೆರೆಗಳ ಅಭಿವೃದ್ಧಿಗೆ ಕೊಡುವುದಾಗಿ ಹೇಳಿದ್ದರು. ಅದೂ ಕೂಡ ಬಜೆಟ್ ನಲ್ಲಿ ಇಲ್ಲ. ಇದು ಅನ್ಯಾಯವಲ್ಲವೇ..? ಆಂಧ್ರ, ಬಿಹಾರ ರಾಜ್ಯಗಳಿಗೆ ಕೊಟ್ಟಿದ್ದಾರೆ. ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಏನು ಕೊಟ್ಟಿದೆ? ರಾಜ್ಯಕ್ಕೆ ಏನೂ ಕೊಡದೆ ಅನ್ಯಾಯವಾಗಿಲ್ಲ ಎಂದರೆ ಹೇಗೆಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.

ಇದನ್ನೂ ಓದಿ | OBC Reservation: ಒಬಿಸಿ ಮೀಸಲಾತಿ ಹೆಚ್ಚಳಕ್ಕೆ ಸುಪ್ರೀಂ ಕೋರ್ಟ್‌ ತಡೆ; ನಿತೀಶ್‌ ಕುಮಾರ್‌ಗೆ ಮುಖಭಂಗ!

ನಿರ್ಮಲಾ ಸೀತಾರಾಮನ್ ಅವರು ಪತ್ರಿಕಾಗೋಷ್ಠಿ ಕರೆದು ರಾಜ್ಯಕ್ಕೆ ಅನ್ಯಾಯವಾಗಿಲ್ಲ ಎಂದಿರುವ ಬಗ್ಗೆ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ನಿರ್ಮಲಾ ಸೀತಾರಾಮನ್ ಹಿಂದೆಯೂ ಸುಳ್ಳು ಹೇಳಿದ್ದರು. ಈಗಲೂ ಸುಳ್ಳು ಹೇಳಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ಮತ್ತು ನಿರ್ಮಲಾ ಸೀತಾರಾಮನ್ ಅವರು ಘೋಷಣೆ ಮಾಡಿದ ಅನುದಾನವನ್ನು ನಾವು ಕೂಡಿಸುತ್ತೇವೆ ಎಂದು ಪ್ರಸ್ತಾಪ ಮಾಡಬಹುದಿತ್ತು. ಕೇಂದ್ರ ಸಚಿವರ ಕ್ಷೇತ್ರ ರಾಮನಗರಕ್ಕೂ ಏನಾದರೂ ಹೊಸದು ಯೋಜನೆ ಬಂದಿದೆಯೇ? ಕೈಗಾರಿಕಾ ಕಾರಿಡಾರ್ ಬಂದಿದೆಯೇ? ಮೇಕೆದಾಟು, ಕೈಗಾರಿಕೆ ಹಾಗೂ ಕೇಳಿದ ಅನುದಾನ ಕೊಟ್ಟಿಲ್ಲ. ರಾಯಚೂರಿಗೆ ಏಮ್ಸ್ ಸ್ಥಾಪಿಸುವಂತೆ ಕೋರಿದ್ದೆವು. ಆದರೆ ಯಾವುದೇ ಪ್ರಸ್ತಾಪವಾಗಿಲ್ಲ. ಮೈಸೂರು ಅಥವಾ ಹಾಸನಕ್ಕೆ ಐಐಟಿ ಮಂಜೂರು ಮಾಡಲು ಮನವಿ ಮಾಡಿದ್ದೆವು ಅದೂ ಕೂಡ ಆಗಿಲ್ಲ ಹಾಗಾದರೆ ಅನ್ಯಾಯವಾಗಿಲ್ಲ ಎಂದರೆ ಹೇಗೆ ಎಂದು ಪ್ರಶ್ನಿಸಿದರು. ನಿರ್ಮಲಾ ಸೀತಾರಾಮನ್ ಹಿಂದೆಯೂ ಸುಳ್ಳು ಹೇಳಿದ್ದರು ಈಗಲೂ ಸುಳ್ಳು ಹೇಳಿದ್ದಾರೆ ಎಂದರು.

ಕೇಂದ್ರದ ನೀತಿಗಳಿಂದ ದೇಶಕ್ಕೆ ಬರುತ್ತಿರುವ ಎಫ್.ಡಿ.ಐ ಶೇ.31 ಕಡಿಮೆಯಾಗಿದೆ

15ನೇ ಹಣಕಾಸು ಯೋಜನೆಯಲ್ಲಿ ಅತಿ ಹೆಚ್ಚು ಅನ್ಯಾಯವಾಗಿರುವ ರಾಜ್ಯ ಕರ್ನಾಟಕ. ರಾಜ್ಯದಿಂದ ರಾಜ್ಯ ಸಭಾ ಸದಸ್ಯರಾಗಿರುವ ಅವರು ಕೈಗಾರಿಕೆಗಳೆಲ್ಲಾ ಬೇರೆ ರಾಜ್ಯಕ್ಕೆ ಹೋಗುತ್ತಿವೆ ಎಂದೂ ಹೇಳಿದ್ದಾರೆ. ಆದರೆ ನಮ್ಮ ಕೇಂದ್ರ ಸರ್ಕಾರದ ಹಣಕಾಸು ಸಚಿವರ ನೀತಿ , ಕಾರ್ಯಕ್ರಮಗಳಿಂದ ಶೇ. 31 ನಮ್ಮ ದೇಶಕ್ಕೆ ಬರುತ್ತಿರುವ ಎಫ್.ಡಿ.ಐ ಕಡಿಮೆಯಾಗಿದೆ. ಕೇಂದ್ರಕ್ಕೆ ತೆರಿಗೆ ನೀಡುವಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದ್ದು, ಕರ್ನಾಟಕ 2 ನೇ ಸ್ಥಾನದಲ್ಲಿದೆ ಇನ್ನೇನು ಕೊಡುಗೆ ಕೊಡಬೇಕು? ಎಂದು ಪ್ರಶ್ನಿಸಿದರು.

ಅವರೇ 2023-24 ನೇ ಬಜೆಟ್‌ನಲ್ಲಿ ಹೇಳಿದಂತೆ ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಣೆ ಮಾಡಿದ್ದ 5300 ಕೋಟಿಗಳನ್ನು ಕೊಟ್ಟಿಲ್ಲ . ಅವರ ಘೋಷಣೆ ನೋಡಿ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಬಜೆಟ್ ನಲ್ಲಿ ಪುನರುಚ್ಚರಿಸಿದ್ದರು ಎಂದರು.

ಕೇಂದ್ರ ಸರ್ಕಾರ 15 ಲಕ್ಷ ಕೋಟಿ ಸಾಲ ಮಾಡಿದೆ

ಕೇಂದ್ರದ ಧೋರಣೆಗೆ ನೀತಿ ಆಯೋಗದ ಸಭೆಯನ್ನು ನಾವು ಬಹಿಷ್ಕರಿಸಿದೆವು. ತಮಿಳುನಾಡು, ತೆಲಂಗಾಣ ಹಾಗೂ ಬಿಜೆಪಿ ವಿರುದ್ಧವಾಗಿರುವ ಅನೇಕ ರಾಜ್ಯಗಳು ಹೋಗಿಲ್ಲ. ಮಮತಾ ಬ್ಯಾನರ್ಜಿ ಅವರು ಸಭೆಗೆ ಹಾಜರಾಗಿ ಮಾತನಾಡಲು ಸಮಯ ನೀಡಿಲ್ಲ ಎಂದು ಸಭೆಯಿಂದ ಹೊರನಡೆದರು ಎಂದರು. ಇವರು ನಮಗೆ ಪಾಠ ಹೇಳಿಕೊಡುತ್ತಾರೆ. ಇವರ ತಪ್ಪುಗಳಿಗೆ ಇಂದು ದೇಶದಲ್ಲಿ ಹೂಡಿಕೆಯಾಗುತ್ತಿಲ್ಲ. ನಾವು ಸಾಲ ಹೆಚ್ಚು ಮಾಡಿದ್ದೇವೆ ಎನ್ನುತ್ತಾರೆ. ನಾವು ವಿತ್ತೀಯ ಹೊಣೆಗಾರಿಕೆ ಕಾಯ್ದೆಯಡಿ ಜಿಡಿಪಿಯ ಶೇ 25% ರೊಳಗೇ ಇದ್ದೇವೆ. ಅವರು ಸುಮಾರು 15 ಲಕ್ಷ ಕೋಟಿ ಸಾಲ ಮಾಡಿದ್ದಾರೆ ಎಂದರು.

ಕರ್ನಾಟಕ ಭ್ರಷ್ಟ ರಾಜ್ಯವಲ್ಲ

ಕರ್ನಾಟಕದ ಸಂಸದರು ರಾಜ್ಯಕ್ಕೆ ಆಗಿರುವ ಅನ್ಯಾಯದ ವಿರುದ್ಧ ಪ್ರತಿಭಟನೆ ಮಾಡಬೇಕು. ಕರ್ನಾಟಕ ಭ್ರಷ್ಟ ರಾಜ್ಯ ಎಂದು ಅವರು ಮಸಿ ಬಳಿಯುತ್ತಿದ್ದಾರೆ. ಕರ್ನಾಟಕ ಭ್ರಷ್ಟ ರಾಜ್ಯವಲ್ಲ. ನಾವು ಅಧಿಕಾರಕ್ಕೆ ಬಂದರೆ ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಿದ್ದೇವೆ. ನಮ್ಮ ಸರ್ಕಾರದಲ್ಲಿ ಭ್ರಷ್ಟಾಚಾರ ಕಡಿಮೆಯಾಗುತ್ತಿದೆ ಎಂದರು.

ಹೂಡಿಕೆ ಕುರಿತು ಸ್ಪಷ್ಟನೆ

ಕರ್ನಾಟಕದಲ್ಲಿ ಕೈಗಾರಿಕೆಗಳು ಹೂಡಿಕೆ ಮಾಡಲು ಮುಂದಾಗುತ್ತಿಲ್ಲ ಎಂಬ ಕೇಂದ್ರ ಹಣಕಾಸು ಸಚಿವರ ಹೇಳಿಕೆಗೆ ಸಂಬಂಧಪಟ್ಟಂತೆ ಎಂ. ಬಿ.ಪಾಟೀಲ್ ಹಾಗೂ ಪ್ರಿಯಾಂಕ ಖರ್ಗೆಯವರಿಗೆ ಈ ಬಗ್ಗೆ ಮಾತನಾಡಲು ಸೂಚಿಸುವುದಾಗಿ ಹೇಳಿದರು.

ಬಿಜೆಪಿ ಪಾದಯಾತ್ರೆ: ರಾಜಕೀಯವಾಗಿ ವಿರೋಧಿಸುತ್ತೇವೆ

ವಾಲ್ಮೀಕಿ ಮತ್ತು ಮುಡಾ ಹಗರಣ ವಿರೋಧಿಸಿ ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ ಪಾದಯಾತ್ರೆ ಹಮ್ಮಿಕೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಅವರು ಮಾಡಲಿ, ನಾವೂ ಕೂಡ ರಾಜಕೀಯವಾಗಿ ವಿರೋಧಿಸುತ್ತೇವೆ. ವಾಲ್ಮೀಕಿ ಹಗರಣದಲ್ಲಿ ನಾವು 84.63 ಕೋಟಿ ಹಗರಣವಾಗಿದೆ ಎನ್ನುವುದು ನಿಜ. ಎಸ್.ಐ.ಟಿ ರಚನೆಯಾಗಿದ್ದು ತನಿಖೆಯಾಗುತ್ತಿದೆ. ಅವರೂ ಕೂಡ ಸಿಬಿಐ, ಇಡಿಯವರೂ ತನಿಖೆ ಮಾಡುತ್ತಿದ್ದಾರೆ ಎಂದರು.

ಬಿಜೆಪಿ ಕಾಲದಲ್ಲಿ ಭ್ರಷ್ಟಾಚಾರ ನಡೆದಿಲ್ಲವೇ?

ಉಪಮುಖ್ಯಮಂತ್ರಿಗಳು ಅಯೋಗ್ಯ ಅಧಿಕಾರಿಗಳು ಹೀಗೆ ಮಾಡಿದ್ದಾರೆ ಎಂದು ಹೇಳಿರುವ ಬಗ್ಗೆ ಪ್ರತಿಕ್ರಿಯಿಸಿ, ಅವರ ಕಾಲದಲ್ಲಿ ಭ್ರಷ್ಟಾಚಾರ ನಡೆದಿಲ್ಲವೇ? ಅದಕ್ಕಾಗಿಯೇ 21 ಹಗರಣಗಳನ್ನು ಪಟ್ಟಿ ಮಾಡಿ ಹೇಳಿದ್ದೇನೆ ಎಂದರು. ಕೆಲವು ತನಿಖೆಗಳು ನಡೆಯುತ್ತಿವೆ. ರಾಘವೇಂದ್ರ ಸಹಕಾರಿ ಬ್ಯಾಂಕ್ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿದೆ. ಇಂದಿನವರೆಗೂ ಸಿಬಿಐ ತನಿಖೆ ಪೂರ್ಣಗೊಳಿಸಿಲ್ಲ. ಅವರ ಅವಧಿಯಲ್ಲಿ ಒಂದೇ ಒಂದು ಪ್ರಕರಣವನ್ನು ಸಿಬಿಐಗೆ ಕೊಟ್ಟಿಲ್ಲ. 7-8 ಹಗರಣಗಳನ್ನು ಸಿಬಿಐಗೆ ವಹಿಸಲಾಗಿದೆ. ಇದೆ ಬಿಜೆಪಿ ನಾವು ಅಧಿಕಾರದಲ್ಲಿದ್ದಾಗ ಸಿಬಿಐ ಅನ್ನು ಚೋರ್ ಬಚಾವ್ ಸಂಸ್ಥೆ ಎನ್ನುತ್ತಿದ್ದರು. ಈಗ ಸಿಬಿಐ ಗೆ ಮೇಲೆ ಇವರಿಗೇನು ಪ್ರೀತಿ ಎಂದರು. ಈ ಕುರಿತ ದಾಖಲೆಗಳನ್ನು ನಾನು ಕೊಡುತ್ತೇನೆ ಎಂದರು.

ನನ್ನ ಮೇಲೆ ಯಾವ ಕಪ್ಪು ಮಸಿಯೂ ಇಲ್ಲ

ಮುಡಾ ಪ್ರಕರಣದಲ್ಲಿ ನಿವೇಶನಗಳನ್ನು ಸಿಎಂ ಹಿಂದಿರುಗಿಸಿ ತನಿಖೆಗೆ ಅವಕಾಶ ಕೊಡಬೇಕೆಂದು ಬಿಜೆಪಿ ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಮೂಡಾ ಪ್ರಕರಣದಲ್ಲಿ ನನ್ನ ಮೇಲೆ ಯಾವ ಕಪ್ಪು ಮಸಿಯೂ ಇಲ್ಲ. ಈ ಬಗ್ಗೆ ನ್ಯಾಯಾಂಗ ಆಯೋಗ ರಚನೆಯಾಗಿದೆ. ಬಿಜೆಪಿ ಯಾವುದೇ ನ್ಯಾಯಾಂಗ ತನಿಖೆ ರಚಿಸಿತ್ತೆ ಎಂದು ಪ್ರಶ್ನಿಸಿದರು. ಕೋವಿಡ್ 19 ಸಂದರ್ಭದಲ್ಲಿ 3 ರಿಂದ 4 ಸಾವಿರ ಕೋಟಿ ರೂಪಾಯಿ ನುಂಗಿ ಹಾಕಿದ್ದಾರೆ. ನ್ಯಾಯಾಂಗ ತನಿಖೆ ಅಥವಾ ಸಿಬಿಐಗೆ ವಹಿಸಲು ಕೊಡಿ ಎಂಡು ಒತ್ತಾಯಿಸಿದೆ. ಆದರೆ ಅವರು ಕೊಡಲಿಲ್ಲ ಎಂದರು. ಯಾವುದೇ ತಪ್ಪಿಲ್ಲದಿದ್ದರೂ ಕೂಡ ಜನರ ಮನಸ್ಸಿನಲ್ಲಿ ಅನುಮಾನವಿರಬಾರದು ಎಂಬ ಕಾರಣಕ್ಕೆ ನ್ಯಾಯಾಂಗ ಆಯೋಗ ರಚಿಸಲಾಗಿದೆ ಎಂದರು. ಒಬ್ಬ ಸಚಿವರು, ಮುಖ್ಯಮಂತ್ರಿಯಾಗಿದ್ದವರು ಹೇಗೆ ಮಾತನಾಡಿದರೆ ಹೇಗೆ? ನಮಗೆ ನಮ್ಮ ಪೊಲೀಸರ ಮೇಲೆ ನಂಬಿಕೆ ಇದೆ ಎಂದರು.

ಬಿಜೆಪಿಯವರು ಸುಳ್ಳು ಹೇಳುವುದು ಹಾಗೂ ಬ್ಲಾಕ್ ಮೇಲ್ ಮಾಡುವುದರಲ್ಲಿ ನಿಸ್ಸೀಮರು

ತಮ್ಮ 40 ವರ್ಷಗಳ ರಾಜಕೀಯ ಜೀವನದಲ್ಲಿ ಇಲ್ಲದ ಆರೋಪ ಈಗ ಬಂದಿರುವುದಕ್ಕೆ ಬೇಸರವಾಗಿದೆಯೇ ಎಂಬಾ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ನಾನು ತಪ್ಪು ಮಾಡಿದ್ದರೆ ನನಗೆ ಬೇಸರವಾಗುತ್ತದೆ. ನಾನು ತಪ್ಪು ಮಾಡಿಲ್ಲ. ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ, ಬ್ಲ್ಯಾಕ್ ಮೇಲ್ ಮಾಡುವುದರಲ್ಲಿ ನಿಸ್ಸೀಮರು. ಅವರಿಗೆ ಯಾವ ಸಿದ್ಧಾಂತವಿದೆ. ಸಾಮಾಜಿಕ ನ್ಯಾಯ, ಜಾತ್ಯತೀತತೆ, ಪ್ರಜಾಪ್ರಭುತ್ವ, ಸಂವಿಧಾನದ ವಿರುದ್ಧವಾಗಿದ್ದಾರೆ ಎಂದರು.

ಮುಡಾದಿಂದ ಎಷ್ಟು ನಿವೇಶನಗಳು ದೇವೇಗೌಡರ ಕುಟುಂಬಕ್ಕೆ ಹೋಗಿದೆ?

ಬಹಳ ಮಾತನಾಡುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಯವರು 1984ರಲ್ಲಿ ಕೈಗಾರಿಕಾ ನಿವೇಶನವನ್ನು ಪಡೆದರು. ಸ್ವಾಧೀನಕ್ಕೆ ಕೂಡ ಪಡೆದಿದ್ದಾರೆ. ನಂತರ ಬದಲಿ ನಿವೇಶನಕ್ಕೆ ಅರ್ಜಿ ಹಾಕಿಕೊಂಡಿದ್ದಾರೆ. ಕೈಗಾರಿಕೆ ಮಾಡಿದ್ದಾರೆಯೇ? ಎಂಡಿ ಕೇಳಿದರು. ಸಿಐಡಿಬಿ, ಪುಟ್ಟಯ್ಯ ಇರುವಾಗ ಎಷ್ಟು ನಿವೇಶನಗಳು ದೇವೇಗೌಡರ ಕುಟುಂಬಕ್ಕೆ ಹೋಗಿದೆ? ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು.

ದೆಹಲಿ ಪ್ರವಾಸ

ಸರ್ಕಾರ ಹಾಗೂ ಪಕ್ಷದ ಬಗ್ಗೆ ಚರ್ಚೆ ಮಾಡಲು ವರಿಷ್ಠರು ಕರೆದಿದ್ದಾರೆ .ಹಾಗಾಗಿ ನಾನೂ ಮತ್ತು ಉಪಮುಖ್ಯಮಂತ್ರಿಗಳು ದೆಹಲಿಗೆ ಭೇಟಿ ನೀಡುತ್ತಿದ್ದೇವೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಇದನ್ನೂ ಓದಿ | CM Siddaramaiah: ನಾಳೆ ದಿಲ್ಲಿಗೆ ಸಿಎಂ- ಡಿಸಿಎಂ ದೌಡು; ಸಚಿವ ಸಂಪುಟದಲ್ಲಿ ಬದಲಾವಣೆ ಫಿಕ್ಸ್?

ಮೇಕೆದಾಟು ಯೋಜನೆ ಬಗ್ಗೆ ಚರ್ಚೆಗೆ ಸಿದ್ಧ

ಮೆಟ್ಟೂರು ಅಣೆಕಟ್ಟು ತುಂಬಿ ನೀರು ವ್ಯರ್ಥವಾಗುತ್ತಿದ್ದು, ಈ ಬಗ್ಗೆ ತಮಿಳುನಾಡು ಸರ್ಕಾರದೊಂದಿಗೆ ನಾವು ಮಾತನಾಡಲು ತಯಾರಿದ್ದೇವೆ. ಮೇಕೆದಾಟು ಯೋಜನೆಯಿಂದ ಅವರಿಗೆ ತೊಂದರೆಯಾಗದಿದ್ದರೂ ಮಾತನಾಡಲು ಅವರು ಸಿದ್ಧರಿಲ್ಲ. ಕೇಂದ್ರ ಸರ್ಕಾರ ಅನುಮೋದನೆ ಕೊಟ್ಟರೇ ನಾವು ನಿರ್ಮಾಣ ಮಾಡಲು ಸಿದ್ಧ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಬಾಂಗ್ಲಾದೇಶದಿಂದ 20 ಸಾವಿರ ಜನ ಬೆಂಗಳೂರಿಗೆ ವಲಸೆ ಬಂದಿರುವ ಬಗ್ಗೆ ಮಾತನಾಡಿ, ಈ ಬಗ್ಗೆ ತಿಳಿದಿಲ್ಲ. ವಿಚಾರ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದರು.

Continue Reading

ಪ್ರಮುಖ ಸುದ್ದಿ

Signal-Free Corridor: ಬೆಂಗಳೂರಿನಲ್ಲಿ 17 ಸಿಗ್ನಲ್ ಮುಕ್ತ ಕಾರಿಡಾರ್‌; ಯಾವ ಮಾರ್ಗಗಳಲ್ಲಿ ನೋಡಿ

ನಾವು ಸುಮಾರು 17 ಸ್ಥಳಗಳನ್ನು ಗುರುತಿಸಿದ್ದೇವೆ. ಇವುಗಳನ್ನು ಯಶಸ್ವಿ ರಾಜಾಜಿನಗರ- ಕೆಆರ್ ಸರ್ಕಲ್ ಸಿಗ್ನಲ್-ಮುಕ್ತ ಕಾರಿಡಾರ್ (Signal-Free Corridor) ಮಾದರಿಯಲ್ಲಿ ರೂಪಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹೇಳಿದರು.

VISTARANEWS.COM


on

signal free corridor
Koo

ಬೆಂಗಳೂರು: ನಗರದ ಟ್ರಾಫಿಕ್ ದಟ್ಟಣೆಯನ್ನು (Bangalore Traffic congestion) ನಿವಾರಿಸುವ ಪ್ರಯತ್ನದಲ್ಲಿ, ಬೆಂಗಳೂರಿನ 17 ಸ್ಥಳಗಳಲ್ಲಿ ಸುಮಾರು 100 ಕಿಲೋಮೀಟರ್‌ನಷ್ಟು ಉದ್ದದ ಸಿಗ್ನಲ್-ಮುಕ್ತ ಕಾರಿಡಾರ್‌ (Signal-Free Corridor) ಅಭಿವೃದ್ಧಿಪಡಿಸುವ ಯೋಜನೆಯನ್ನು ಕರ್ನಾಟಕ ಸರ್ಕಾರ (Karnataka Govt) ಪ್ರಕಟಿಸಿದೆ.

ಸುದ್ದಿಗಾರರೊಂದಿಗೆ ಈ ಕುರಿತು ಮಾತನಾಡಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ (DCM DK Shivakumar), ನಗರದ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳ ಕುರಿತು ಎಲ್ಲಾ ರಾಜಕೀಯ ಪಕ್ಷಗಳ ಶಾಸಕರೊಂದಿಗೆ ಚರ್ಚಿಸಲಾಗಿದೆ ಎಂದು ತಿಳಿಸಿದರು. ನಾವು ಸುಮಾರು 17 ಸ್ಥಳಗಳನ್ನು ಗುರುತಿಸಿದ್ದೇವೆ. ಇವುಗಳನ್ನು ಯಶಸ್ವಿ ರಾಜಾಜಿನಗರ- ಕೆಆರ್ ಸರ್ಕಲ್ ಸಿಗ್ನಲ್-ಮುಕ್ತ ಕಾರಿಡಾರ್ (Signal-Free Corridor) ಮಾದರಿಯಲ್ಲಿ ರೂಪಿಸಲಾಗುವುದು ಎಂದು ಅವರು ಹೇಳಿದರು.

ನಗರದ ಸಂಪೂರ್ಣ ಸಂಚಾರ ವಿಶ್ಲೇಷಣೆ, ಮುಂದಿನ ಕೆಲವು ವರ್ಷಗಳ ಯೋಜಿತ ಬೆಳವಣಿಗೆಯ ಮಾದರಿಗಳನ್ನು ಆಧರಿಸಿ ಈ ಸ್ಥಳಗಳನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಆಯ್ಕೆ ಮಾಡಿದೆ. ಈ ಮಹತ್ವಾಕಾಂಕ್ಷೆಯ ಯೋಜನೆಗೆ 12,000 ಕೋಟಿ ರೂ. ವೆಚ್ಚವಾಗಲಿದೆ.

“ಇವುಗಳ ಅಗತ್ಯವನ್ನು ನಿರ್ಧರಿಸಲು ಟ್ರಾಫಿಕ್ ಪರಿಸ್ಥಿತಿಯನ್ನು ಎಚ್ಚರಿಕೆಯಿಂದ ಅಧ್ಯಯನ ಮಾಡಲಾಗಿದೆ. ವಿಶ್ಲೇಷಕರು 2044ರವರೆಗೆ ನಿರೀಕ್ಷಿತ ಲೇನ್ ಅವಶ್ಯಕತೆಗಳನ್ನು ಸೂಚಿಸಿದ್ದಾರೆ. ನಿರ್ಣಾಯಕ ಜಂಕ್ಷನ್‌ಗಳಲ್ಲಿ ಸಿಗ್ನಲ್-ಮುಕ್ತ ಕಾರಿಡಾರ್‌ಗಳನ್ನು ಸೂಚಿಸಿದ್ದಾರೆ. ಅದನ್ನು ಈಗ ಜಾರಿಗೆ ಪ್ರಸ್ತಾಪಿಸಲಾಗಿದೆ” ಎಂದು ಬಿಬಿಎಂಪಿ ಹಿರಿಯ ಅಧಿಕಾರಿಯೊಬ್ಬರು ವಿವರಿಸಿದ್ದಾರೆ.

ಟ್ರಾಫಿಕ್ ಅಧ್ಯಯನದ ಮೂಲಕ ಕಂಡುಬಂದ ವಿಚಾರ ಎಂದರೆ, ಆಯ್ದ ಕಾರಿಡಾರ್‌ಗಳಲ್ಲಿ ಹೆಚ್ಚಿನ ಟ್ರಾಫಿಕ್ ಹರಿವು ಕಂಡುಬರುತ್ತದೆ. ಈ ಮಾರ್ಗಗಳಲ್ಲಿ ವೇಗ ಗಂಟೆಗೆ 15-20 ಕಿಲೋಮೀಟರ್‌ಗಳಷ್ಟು ಕಡಿಮೆಯಾಗಿದೆ. ಇದರಿಂದ ಇಂಧನ ವ್ಯರ್ಥವಾಗುತ್ತಿದೆ ಹಾಗೂ ಉತ್ಪಾದಕತೆ ನಷ್ಟವಾಗುತ್ತಿದೆ.

“ಪ್ರಸ್ತುತ ಈ ಕಾರಿಡಾರ್‌ಗಳಲ್ಲಿ ಹಲವು ನಾಲ್ಕು ಅಥವಾ ಆರು ಲೇನ್‌ಗಳಿವೆ. ಪ್ರಸ್ತುತ ಟ್ರಾಫಿಕ್ ಸಾಂದ್ರತೆಯ ಪ್ರಕಾರ ಇಲ್ಲಿ ಕನಿಷ್ಠ ಎಂಟು ಲೇನ್‌ಗಳ ಅವಶ್ಯಕತೆಯಿದೆ. 2044ರ ವೇಳೆಗೆ 12 ಲೇನ್‌ಗಳಿಗೆ ಹೆಚ್ಚಿಸುವ ಅವಶ್ಯಕತೆಯಿದೆ. ರಸ್ತೆ ಅಗಲೀಕರಣ, ಎಲಿವೇಟೆಡ್ ಕಾರಿಡಾರ್‌ಗಳು ಅಥವಾ ಅಂಡರ್‌ಪಾಸ್‌ಗಳ ನಿರ್ಮಾಣದ ಅವಶ್ಯಕತೆಯಿದೆ” ಎಂದು ವರದಿ ಬಹಿರಂಗಪಡಿಸಿದೆ.

ಯೋಜಿಸಲಾದ ಕೆಲವು ಪ್ರಮುಖ ಸಿಗ್ನಲ್-ಮುಕ್ತ ಕಾರಿಡಾರ್‌ಗಳು ಹೀಗಿವೆ:

1) ಕೆ.ಆರ್‌ ಪುರದಿಂದ ಯಶವಂತಪುರ- ಗೊರಗುಂಟೆಪಾಳ್ಯವರೆಗಿನ 23 ಕಿಲೋಮೀಟರ್ ವ್ಯಾಪ್ತಿಯ ಕಾರಿಡಾರ್.‌
2) ಆನೆಪಾಳ್ಯದಿಂದ ಸಿಲ್ಕ್ ಬೋರ್ಡ್‌ವರೆಗಿನ 5.5 ಕಿಲೋಮೀಟರ್ ಹೊಸೂರು ರಸ್ತೆ ಕಾರಿಡಾರ್
3) ಮಾರೇನಹಳ್ಳಿಯಿಂದ ಕನಕಪುರ ರಸ್ತೆ-ತಲಘಟ್ಟಪುರ ನೈಸ್ ರಸ್ತೆವರೆಗೆ 10 ಕಿಲೋಮೀಟರ್ ಎಲಿವೇಟೆಡ್ ಕಾರಿಡಾರ್
4) ಮಿನರ್ವದಿಂದ ಕಬ್ಬನ್ ಪಾರ್ಕ್‌ವರೆಗೆ 2.7 ಕಿಲೋಮೀಟರ್ ಎತ್ತರದ ರಸ್ತೆಯನ್ನು ಪ್ರಸ್ತಾಪಿಸಲಾಗಿದೆ.

ಟ್ರಾಫಿಕ್‌ ಪೊಲೀಸರಿಂದ ಬೆಂಗಳೂರಿನ ರಸ್ತೆಗಳಲ್ಲಿ ಮೊಳೆಗಳ ಸಂಗ್ರಹ

ಬೆಂಗಳೂರು: ಬೆಂಗಳೂರಿನ ಬೀದಿ ಬೀದಿಗಳಲ್ಲಿ ರಾಶಿಗಟ್ಟಲೆ ಮೊಳೆ (Nails) ಬಿಸಾಡಿ ವಾಹನಗಳ ಟಯರ್‌ ಪಂಕ್ಚರ್‌ (Puncture) ಆಗುವಂತೆ ಮಾಡಿ ದುಡ್ಡ ಮಾಡುವ ಮಾಫಿಯಾ (Mafia) ಕಾರ್ಯಪ್ರವೃತ್ತವಾಗಿದೆಯಾ ಎಂಬ ಅನುಮಾನ ಹೆಡೆಯೆತ್ತಿದೆ. ಜಾಲಹಳ್ಳಿಯ ಕುವೆಂಪು ವೃತ್ತದ (Kuvempu Circle) ಕೆಳಸೇತುವೆಯಲ್ಲಿ ಮುಷ್ಟಿಗಟ್ಟಲೆ ಮೊಳೆಗಳು ಒಂದೆಡೆಯೇ ಪತ್ತೆಯಾಗಿದ್ದು, ಸ್ವತಃ ಟ್ರಾಫಿಕ್‌ ಪೊಲೀಸರೇ (Traffic Police) ಇವುಗಳನ್ನು ಸ್ಥಳದಿಂದ ತೆಗೆದು ಕ್ಲೀನ್‌ ಮಾಡುವ ಅಭಿಯಾನ ನಡೆಸಿದ್ದಾರೆ. ಅದೀಗ ವೈರಲ್‌ (Viral Video) ಆಗಿದೆ.

ರಸ್ತೆ ಮಧ್ಯದಲ್ಲಿ ಮೊಳೆಗಳನ್ನು ಎಸೆದು ವಾಹನಗಳ ಪಂಕ್ಚರ್ ಮಾಡಿಸಲಾಗುತ್ತಿದೆ ಎಂಬ ವದಂತಿ ಮೊದಲಿನಿಂದಲೂ ಇದೆ. ಇದೀಗ ಸ್ವತಃ ಟ್ರಾಫಿಕ್ ಪೊಲೀಸರಿಂದಲೇ ರಾಶಿಗಟ್ಟಲೆ ಮೊಳೆಗಳ ಸಂಗ್ರಹ ನಡೆದಿದ್ದು, ಅನುಮಾನ ರುಜುವಾತು ಆದಂತಾಗಿದೆ. ನಗರದಲ್ಲಿ ಎಲ್ಲೆಂದರಲ್ಲಿ ವಾಹನಗಳು ಪಂಕ್ಚರ್ ಆಗುತ್ತಿದ್ದು, ಸಮೀಪದಲ್ಲಿರುವ ಪಂಕ್ಚರ್ ಅಂಗಡಿಗಳಿಗೆ ಸಾಕಷ್ಟು ವ್ಯಾಪಾರವಂತೂ ಆಗುತ್ತಿದೆ.

ನಿನ್ನೆ ಕುವೆಂಪು ವೃತ್ತದ ಅಂಡರ್‌ಪಾಸ್‌ನಲ್ಲಿ ರಾಶಿಗಟ್ಟಲೆ ಲೋಹದ ಮೊಳೆಗಳನ್ನು ಪತ್ತೆಹಚ್ಚಿದ ಬೆಂಗಳೂರು ಟ್ರಾಫಿಕ್‌ ಪೊಲೀಸರು ಅವುಗಳನ್ನು ಸ್ವಚ್ಛಗೊಳಿಸಿದರು. ಬೆಂಗಳೂರು ಟ್ರಾಫಿಕ್ ಪೊಲೀಸ್ ಅಧಿಕಾರಿಗಳು ಕುವೆಂಪು ಸರ್ಕಲ್ ಅಂಡರ್‌ಪಾಸ್‌ನಲ್ಲಿ ರಸ್ತೆಯನ್ನು ಗುಡಿಸುವ ವೀಡಿಯೊವನ್ನು ಎಕ್ಸ್‌ನಲ್ಲಿ ಅಪ್‌ಲೋಡ್‌ ಮಾಡಲಾಗಿದ್ದು, ಅದೀಗ ವೈರಲ್‌ ಆಗಿದೆ.

ಇದನ್ನೂ ಓದಿ: DK Shivakumar: ಬೆಂಗಳೂರಿನ ನೈಸ್‌ ರಸ್ತೆ ಬಳಿ ದೇಶದ ಅತಿ ಎತ್ತರದ ಸ್ಕೈಡೆಕ್!

Continue Reading
Advertisement
Money Guide
ಮನಿ-ಗೈಡ್15 mins ago

Money Guide: ಷೇರು V/S ಚಿನ್ನ: ಹೂಡಿಕೆಗೆ ಯಾವುದು ಬೆಸ್ಟ್‌? ಇಲ್ಲಿದೆ ತಜ್ಞರ ಸಲಹೆ

Actor Darshan Jail And Gave vijayalakshmi Prasada To Husband
ಸ್ಯಾಂಡಲ್ ವುಡ್22 mins ago

Actor Darshan: ದರ್ಶನ್ ಗಾಗಿ ದೇವರ ಪ್ರಸಾದ ತಂದ ವಿಜಯಲಕ್ಷ್ಮಿ

Road Accident
ವಿಜಯಪುರ28 mins ago

Road Accident : ಮಿನಿ ಟ್ರಕ್‌ ಪಲ್ಟಿಯಾಗಿ 30ಕ್ಕೂ ಅಧಿಕ ಮಂದಿಗೆ ಗಾಯ; ಬಸ್‌ನಿಂದ ಬಿದ್ದು ಚಕ್ರಕ್ಕೆ ಸಿಲುಕಿದ ವಿದ್ಯಾರ್ಥಿ

Karnataka Flood
ಪ್ರಮುಖ ಸುದ್ದಿ37 mins ago

Karnataka Flood: ನೆರೆ ಪೀಡಿತ ಸ್ಥಳಗಳಿಗೆ ಭೇಟಿ ನೀಡಲು 6 ತಂಡ ರಚಿಸಿದ ಬಿಜೆಪಿ; ನಾಳೆಯಿಂದ ಪ್ರವಾಸ

Viral News
Latest49 mins ago

Viral News: ʼಎಣ್ಣೆ ಹೊಡೆಯಿರಿ, ಇಂಗ್ಲಿಷ್‌ ಕಲಿಯಿರಿʼ ಎಂದು ಬೋರ್ಡ್‌ ಹಾಕಿದ್ದ ಮದ್ಯದಂಗಡಿ ಮಾಲೀಕನಿಗೆ ದಂಡ!

Paris Olympics 2024
ಪ್ರಮುಖ ಸುದ್ದಿ2 hours ago

Paris Olympics 2024: ಮತ್ತೊಂದು ಕಂಚಿನ ಪದಕದ ಸನಿಹ ಮನು ಭಾಕರ್, ನಾಳೆ ಇತಿಹಾಸ ಸೃಷ್ಟಿ?

Business Ideas
Latest2 hours ago

Business Ideas: 20 ದೇಶಗಳಿಗೆ ಮಣ್ಣಿನ ಪಾತ್ರೆಗಳ ರಫ್ತು; ವರ್ಷಕ್ಕೆ 5 ಕೋಟಿ ರೂ. ಗಳಿಸುತ್ತಿದೆ ಈ ಕುಟುಂಬ!

ಕೆಆರ್‌ಎಸ್‌ಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ
ಕರ್ನಾಟಕ2 hours ago

KRS Dam: ಕೆಆರ್‌ಎಸ್‌ಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ; ಕಾವೇರಿ ಮಾತೆ ಪ್ರತಿಮೆಗೆ ವಿಶೇಷ ಪೂಜೆ

signal free corridor
ಪ್ರಮುಖ ಸುದ್ದಿ2 hours ago

Signal-Free Corridor: ಬೆಂಗಳೂರಿನಲ್ಲಿ 17 ಸಿಗ್ನಲ್ ಮುಕ್ತ ಕಾರಿಡಾರ್‌; ಯಾವ ಮಾರ್ಗಗಳಲ್ಲಿ ನೋಡಿ

karnataka rain
ಮಳೆ2 hours ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka rain
ಮಳೆ2 hours ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ22 hours ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ1 day ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ1 day ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ1 day ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

Karnataka weather Forecast
ಮಳೆ2 days ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ2 days ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ2 days ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ3 days ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ3 days ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

ಟ್ರೆಂಡಿಂಗ್‌