ಉಳ್ಳಾಲ (ಮಂಗಳೂರು): ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬರು 12 ಮಂದಿಯಿಂದ ಲಕ್ಷಾಂತರ ಹಣ ಪಡೆದು ವಂಚಿಸಿರುವ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಂಚನೆ ನಡೆಸಿದ ಲೀನಾ ಲೋಬೋ ಎಂಬವರ ವಿರುದ್ಧ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.
ಜಿತೇಶ ಕ್ಲಿಶನ್ ಡಿ ಸೋಜಾ, ರಿಕ್ಸನ್ ಸಂತಾನಿಸ್, ಎಡ್ಲಿನ್ ಕ್ಲಿಂಟನ್ ಡಿ ಸೋಜಾ, ಗ್ಲಾನ್ಸಿಲ ಫೆರ್ನಾಂಡೀಸ್, ಜೋಸೆಫ್ ಡಿ ಸೋಜಾ, ಗ್ಲಾನೆಟ್ ಫೆರ್ನಾಂಡೀಸ್, ಸಚಿನ್ ಪಸನ್ನ, ವಿನಯ್ ಜೋಯ್ ಅಲ್ವಾರಿಸ್, ಜೀವನ್ ಕ್ಲಿಫರ್ಡ್ ಡಿ ಸೋಜಾ, ನಾಗೇಂದ್ರ ಗಣಪತಿ, ಅವಿಶ್ ಡಿ ಸೋಜ, ಜೋಯ್ ಸನ್ ಲೂವಿಸ್ ಎಂಬವರಿಂದ ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ತಿಳಿಸಿದ ಲೀನಾ ಅವರಿಂದ ಫೆ.2 ರಿಂದ ಮಾ.12 ರವರೆಗೆ ಹಂತಹಂತವಾಗಿ ಗೂಗಲ್ ಪೇ ಮೂಲಕ ಒಟ್ಟು ರೂ.2.82.000/- ಹಣವನ್ನು ಪಡೆದು, ನಂತರ ಉದ್ಯೋಗವನ್ನು ಕೊಡಿಸದೆ ವಂಚಿಸಿದ್ದಾರೆ. ದೂರುದಾರರು ಹಣವನ್ನು ವಾಪಸ್ಸು ಕೇಳಿದರೂ ಹಿಂತಿರುಗಿಸದ ಹಿನ್ನೆಲೆಯಲ್ಲಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಸೋಮೇಶ್ವರ: ಮೀನಿನ ಬಲೆಗೆ ಬೆಂಕಿ, 15 ಲಕ್ಷ ರೂ. ಮೌಲ್ಯದ ಸೊತ್ತು ನಾಶ
ಉಳ್ಳಾಲ: ಮೀನಿನ ಬಲೆಗೆ ಆಕಸ್ಮಿಕ ಬೆಂಕಿ ಬಿದ್ದು ರೂ.15 ಲಕ್ಷ ಸೊತ್ತುಗಳು ಹಾನಿಯಾಗಿರುವ ಘಟನೆ ಸೋಮೇಶ್ವರ ಸಮುದ್ರ ತೀರದ ರುದ್ರಪಾದೆಯಲ್ಲಿ ಜರಗಲಿದೆ.
ಬುಧವಾರ ಮದ್ಯಾಹ್ನದ ವೇಳೆ ಸೋಮೇಶ್ವರ ಕಡಲ ಕಿನಾರೆಯ ರುದ್ರಪಾದೆ ಬಳಿಯ ನಾಡ ದೋಣಿಗಳ ಶೆಡ್ ಹತ್ತಿರ ಇಡಲಾಗಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಮೀನಿನ ಬಲೆಗೆ ಬೆಂಕಿ ತಗುಲಿದ್ದು ಬಲೆಗಳು ಸುಟ್ಟು ಕರಕಲಾಗಿವೆ. ಕಿಡಿಗೇಡಿಗಳ ಕೃತ್ಯದಿಂದ ಘಟನೆ ಸಂಭವಿಸಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.
ನಾಡ ದೋಣಿ ಮೀನುಗಾರರಾದ ಹೇಮಂತ್ ಉಚ್ಚಿಲ,ಸಂತೋಷ್ ಉಚ್ಚಿಲ,ಸಾಧನ ಉಚ್ಚಿಲ,ಶೇಖರ್ ಸೋಮೇಶ್ವರ,ಯೋಗೀಶ್ ಸೋಮೇಶ್ವರ ಅವರ ಮೀನಿನ ಬಲೆಗಳು ಸಂಪೂರ್ಣ ಸುಟ್ಟು ಕರಕಲಾಗಿವೆ.ಕಳೆದ ಮಾರ್ಚ್ ತಿಂಗಳಲ್ಲೂ ಇದೇ ಪ್ರದೇಶದಲ್ಲಿ ಎರಡು ನಾಡ ದೋಣಿ ಮತ್ತು ಅದರಲ್ಲಿದ್ದ ಮೀನಿನ ಬಲೆಗಳು ಬೆಂಕಿ ಆಕಸ್ಮಿಕದಿಂದ ಸುಟ್ಟು ಕರಕಲಾಗಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿತ್ತು.
ಸ್ಥಳಕ್ಕೆ ಬಿಜೆಪಿ ಮುಖಂಡರಾದ ಸತೀಶ್ ಕುಂಪಲ ಭೇಟಿ ನೀಡಿ ಬಡ ಮೀನುಗಾರರಿಗೆ ಶೀಘ್ರವೆ ಸೂಕ್ತ ಪರಿಹಾರ ತೆಗೆಸಿ ಕೊಡುವಂತೆ ಅಧಿಕಾರಿಗಳಲ್ಲಿ ಆಗ್ರಹಿಸಿದ್ದಾರೆ.
ಇದನ್ನೂ ಓದಿ : Murder Case : ಹೆಂಡತಿ ಬಂಧುಗಳಿಂದ ಯುವಕನ ಕೊಲೆ; ಆರೋಪಿಗಳ ಮನೆಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಸ್ನೇಹಿತರು