1. ಒಕ್ಕಲಿಗ, ವೀರಶೈವ ಪಂಚಮಸಾಲಿ ಮೀಸಲಾತಿ ತಲಾ 2% ಹೆಚ್ಚಳ; ಧಾರ್ಮಿಕ ಅಲ್ಪಸಂಖ್ಯಾತರ ಮೀಸಲು ರದ್ದು
ಅತ್ಯಂತ ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯದಲ್ಲಿ ಒಕ್ಕಲಿಗ ಮತ್ತು ವೀರಶೈವ ಪಂಚಮಸಾಲಿ ಮೀಸಲಾತಿ ಪ್ರಮಾಣವನ್ನು ತಲಾ ಶೇಕಡಾ 2ರಷ್ಟು ಹೆಚ್ಚಿಸಲಾಗಿದೆ. ಇತರ ಹಿಂದುಳಿದ ವರ್ಗದ ಮೀಸಲಾತಿಯನ್ನು ಬದಲಾವಣೆ ಮಾಡಿ ಈ ಹೆಚ್ಚಳವನ್ನು ಮಾಡಲಾಗಿದ್ದು, ಇದರ ಪ್ರಕಾರ, ಇನ್ನು ಮುಂದೆ ಧಾರ್ಮಿಕ ಅಲ್ಪಸಂಖ್ಯಾತರಿಗೆ ಇದುವರೆಗೆ ಇದ್ದ ಪ್ರವರ್ಗ 2ಬಿಯಲ್ಲಿ ಮೀಸಲಾತಿ ಸಿಗುವುದಿಲ್ಲ. ಧಾರ್ಮಿಕ ಅಲ್ಪಸಂಖ್ಯಾತರಿಗೆ ಇನ್ನು ಮುಂದೆ ಕೇಂದ್ರ ಸರಕಾರ ಮೇಲ್ವರ್ಗದ ಬಡವರಿಗೆ ನಿಗದಿಪಡಿಸಿದ ಶೇ. 10 ಮೀಸಲಾತಿಯಲ್ಲಿ ಅವರು ಪಾಲುಪಡೆಯಲಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
ಪೂರಕ ಸುದ್ದಿ: ಎಸ್ಸಿ ಒಳಮೀಸಲಾತಿಗೆ ಸಂಪುಟ ಅಸ್ತು, ಅಲ್ಪಸಂಖ್ಯಾತರಿಗೆ ಇನ್ನು EWSನಲ್ಲಿ ಮಾತ್ರ ಅವಕಾಶ
2. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಬಿಗ್ ಶಾಕ್; ಸಂಸದ ಸ್ಥಾನದಿಂದ ಅನರ್ಹ
ಎಲ್ಲ ಕಳ್ಳರ ಸರ್ನೇಮ್ ಮೋದಿ ಎಂದೇ ಇರುತ್ತದೆ ಎಂದು 2019ರ ಚುನಾವಣೆಯಲ್ಲಿ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi)ಗೆ ಈಗ ಮತ್ತೊಂದು ಬಿಗ್ ಶಾಕ್ ಎದುರಾಗಿದೆ. ಅವರನ್ನು ಲೋಕಸಭಾ ಸದಸ್ಯನ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಈ ಪ್ರಕರಣದಲ್ಲಿ ರಾಹುಲ್ ಗಾಂಧಿ ದೋಷಿ ಎಂದು ಮಾ.23ರಂದು ಗುಜರಾತ್ನ ಸೂರತ್ ಕೋರ್ಟ್ ತೀರ್ಪು ನೀಡಿತ್ತು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
3. ವಿಜಯೇಂದ್ರ ಹೆಗಲ ಮೇಲೆ ಕೈ, ಅವರಿಂದಲೇ ಹೂಗುಚ್ಛ ಸ್ವೀಕಾರ; ದೊಡ್ಡ ಸಂದೇಶ ರವಾನಿಸಿದ ಅಮಿತ್ ಶಾ
ರಾಜ್ಯಕ್ಕೆ ಭೇಟಿ ನೀಡಿರುವ ಬಿಜೆಪಿಯ ನಂಬರ್ ಟು ನಾಯಕ, ಕೇಂದ್ರ ಸಚಿವ ಅಮಿತ್ ಶಾ (Amit Shah Visit) ಅವರು ಶುಕ್ರವಾರ ಮುಂಜಾನೆಯೇ ರಾಜ್ಯ ರಾಜಕಾರಣಕ್ಕೆ ಸಂಬಂಧಿಸಿ ದೊಡ್ಡ ಸಂದೇಶವೊಂದನ್ನು ರವಾನಿಸಿದ್ದಾರೆ. ಶುಕ್ರವಾರ ಮುಂಜಾನೆ ಉಪಾಹಾರಕ್ಕಾಗಿ ಸ್ವತಃ ತಾವೇ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಿವಾಸಕ್ಕೆ ಆಗಮಿಸಿದ ಅಮಿತ್ ಶಾ ಅವರು ಬಿಎಸ್‌ವೈ ಪುತ್ರ ಬಿ.ವೈ ವಿಜಯೇಂದ್ರ ಅವರ ಜತೆ ನಡೆದುಕೊಂಡ ರೀತಿ, ತೋರಿದ ಆತ್ಮೀಯತೆಗಳು ಹಲವು ಸಂದೇಶಗಳನ್ನು ನೀಡಿದವು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
ಪೂರಕ ಸುದ್ದಿ: ಅಭಿವೃದ್ಧಿಯ ಬಿಜೆಪಿ ಬೇಕಾ? ಭ್ರಷ್ಟಾಚಾರಿ ಕಾಂಗ್ರೆಸ್ ಬೇಕಾ?; ಅಮಿತ್ ಶಾ ಪ್ರಶ್ನೆ
4. ಶನಿವಾರ ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ; ಪ್ರವಾಸದ ಇಂಚಿಂಚು ಮಾಹಿತಿ ಇಲ್ಲಿದೆ
ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಮಾರ್ಚ್ 25ರಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಅವರು ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿಯಲ್ಲಿ ಖಾಸಗಿ ಮೆಡಿಕಲ್ ಕಾಲೇಜು ಉದ್ಘಾಟನೆ, ಬೆಂಗಳೂರಿನ ವೈಟ್‌ಫೀಲ್ಡ್-ಕೆ.ಆರ್.ಪುರ ಮೆಟ್ರೋ ಮಾರ್ಗ ಉದ್ಘಾಟನೆ ಹಾಗೂ ದಾವಣಗೆರೆ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಲಿದ್ದು, ಪ್ರಧಾನಿ (Modi In Karnataka) ಕಾರ್ಯಕ್ರಮಗಳ ವೇಳಾಪಟ್ಟಿಯ ಸಂಪೂರ್ಣ ಮಾಹಿತಿ ಇಲ್ಲಿ ನೀಡಲಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
5. ಚುಂಚಶ್ರೀಗಳ ಬಗ್ಗೆ ಅಡ್ಡ ಮಾತು; ರಂಗಾಯಣ ಕಚೇರಿಗೆ ಮುತ್ತಿಗೆ ಹಾಕಲು ಒಕ್ಕಲಿಗರ ಸಂಘ ಯತ್ನ
ಆದಿಚುಂಚನಗಿರಿ ಮಠದ ಪೀಠಾಧಿಪತಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ಬಗ್ಗೆ ಹಗುರವಾಗಿ ಮಾತನಾಡಿದ ರಂಗಾಯಣ ಅಧ್ಯಕ್ಷ ಅಡ್ಡಂಡ ಕಾರ್ಯಪ್ಪ (Addanda c Cariappa) ಅವರ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ಶುಕ್ರವಾರ ಒಕ್ಕಲಿಗ ಸಂಘಟನೆಯ ವತಿಯಿಂದ ಮೈಸೂರಿನ ರಂಗಾಯಣ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಲಾಯಿತು. ಆದರೆ, ಪೊಲೀಸರು ಅದಕ್ಕೆ ಅವಕಾಶ ಕೊಡದೆ ಇದ್ದಾಗ ಪ್ರತಿಭಟನೆ ಬೇರೆ ಸ್ವರೂಪವನ್ನು ಪಡೆದುಕೊಂಡಿತು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
6. ಮಾ. 27ಕ್ಕೆ ನಿಗದಿಯಾದ 5, 8ನೇ ತರಗತಿ ಪಬ್ಲಿಕ್ ಪರೀಕ್ಷೆ ಮುಂದೂಡಲು ಹೈಕೋರ್ಟ್ ನಕಾರ
ಮಾರ್ಚ್ 27ರಿಂದ ಆರಂಭವಾಗಲಿರುವ ಐದು ಮತ್ತು ಎಂಟನೇ ತರಗತಿ ಪಬ್ಲಿಕ್ ಪರೀಕ್ಷೆಯನ್ನು (Public Exam) ಮುಂದೂಡಬೇಕು ಎಂಬ ಮನವಿಯನ್ನು ಹೈಕೋರ್ಟ್ ತಳ್ಳಿಹಾಕಿದೆ. ಪ್ರಕರಣಕ್ಕೆ ಸಂಬಂಧಿಸಿ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ ಬಾಕಿ ಇರುವುದರಿಂದ ತಾನು ಮಧ್ಯ ಪ್ರವೇಶಿಸುವುದಿಲ್ಲ ಎಂದು ಹೈಕೋರ್ಟ್ ಹೇಳಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
7. ಅಮೃತ್ಪಾಲ್ ಸಿಂಗ್ನನ್ನು ರಾತ್ರಿ ಮನೆಯಲ್ಲಿಟ್ಟುಕೊಂಡಿದ್ದ ಮಹಿಳೆ ಅರೆಸ್ಟ್; ಯುಕೆ ಪೌರತ್ವ ಪಡೆಯಲು ಅರ್ಜಿ ಸಲ್ಲಿಸಿರುವ ಖಲಿಸ್ತಾನಿ ನಾಯಕ
ಪರಾರಿಯಾಗಿರುವ ಖಲಿಸ್ತಾನಿ ನಾಯಕ ಅಮೃತ್ಪಾಲ್ ಸಿಂಗ್ (Amritpal Singh) ಜಾಡು ಹಿಡಿದು, ಹುಡುಕಾಟ ನಡೆಸುತ್ತಿರುವ ಪೊಲೀಸರು ಈಗ ಹರ್ಯಾಣದ ಮಹಿಳೆಯೊಬ್ಬರನ್ನು ಅರೆಸ್ಟ್ ಮಾಡಿ, ವಿಚಾರಣೆಗೆ ಒಳಪಡಿಸಿದ್ದಾರೆ. ಮಾ.18ರಂದು ಅಮೃತ್ಪಾಲ್ ಸಿಂಗ್ ಮತ್ತು ಆತನ ಸಹಚರರನ್ನು ಪಂಜಾಬ್ನ ನಾಕೋಡರ್ ಎಂಬಲ್ಲಿ ಪೊಲೀಸರು ಅಡ್ಡಗಟ್ಟಿದರು. ಆದರೆ ಸಚಹರರನ್ನು ಮಾತ್ರ ಬಂಧಿಸಲು ಸಾಧ್ಯವಾಯಿತು ಹೊರತು, ಅಮೃತ್ಪಾಲ್ ಸಿಗಲಿಲ್ಲ. ಆತ ಅಲ್ಲಿಂದ ತಪ್ಪಿಸಿಕೊಂಡು, ಬಟ್ಟೆ ಬದಲಿಸಿಕೊಂಡು ಬೈಕ್ನಲ್ಲಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆತ ಪರಾರಿಯಾಗಲು ಬಳಸಿದ್ದ ಪ್ಲಾಟಿನಾ ಬೈಕ್ ಕೂಡ ಸಿಕ್ಕಿದೆ. ಅವನ ವಿವಿಧ ಫೋಟೋಗಳೂ ಲಭ್ಯವಾಗುತ್ತಿವೆ. ಆದರೆ ಅಮೃತ್ಪಾಲ್ ಮಾತ್ರ ಸಿಗುತ್ತಿಲ್ಲ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
8. ಹೊಸ ಕೋವಿಡ್ ತಳಿಯ ತೀವ್ರತೆಗೆ ಯಾವುದೇ ಪುರಾವೆ ಇಲ್ಲ ಎಂದ ತಜ್ಞರು
ಭಾರತದಲ್ಲಿ ಮತ್ತೆ ಕೋವಿಡ್(Covid-19) ಸೋಂಕು ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಹಾಗಿದ್ದೂ, ತೀರಾ ಆತಂಕ ಪಡಬೇಕಾದ ಅಗತ್ಯವಿಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಭಾರತದಲ್ಲಿ ಎಕ್ಸ್‌ಬಿಬಿ.1.16(XBB.1.16) ಕೊರೊನಾ ವೈರಸ್‌ನ ಪ್ರಧಾನ ರೂಪಾಂತರವಾಗಿದೆ. ಭಾರತೀಯ ತಜ್ಞರು ಬಿಡುಗಡೆ ಮಾಡಿದ ಜೀನೋಮ್ ಅನುಕ್ರಮ ವಿಶ್ಲೇಷಣೆಯ ಪ್ರಕಾರ, ಸೋಂಕು ಹೆಚ್ಚಳ ಸ್ವಲ್ಪಮಟ್ಟಿಗೆ ಕಂಡುಬಂದರೂ, ತೀವ್ರತೆಯ ಯಾವುದೇ ಆತಂಕಕಾರಿ ಚಿಹ್ನೆಗಳೊಂದಿಗೆ ಪರಸ್ಪರ ಸಂಬಂಧ ಹೊಂದಿಲ್ಲ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
9.ಇತರ ಕಂಪನಿಗಳ ಷೇರುಗಳಲ್ಲಿ ತನ್ನ ಹೂಡಿಕೆಗೆ ಮಿತಿ ವಿಧಿಸಲು ಎಲ್‌ಐಸಿ ನಿರ್ಧಾರ
ಹಿಂಡೆನ್ ಬರ್ಗ್ ವರದಿಯ ಬಳಿಕ ಅದಾನಿ ಸಮೂಹದ ಕಂಪನಿಗಳ ಷೇರು ಮಾರುಕಟ್ಟೆ ಮೌಲ್ಯದಲ್ಲಿ 100 ಶತಕೋಟಿ ಡಾಲರ್ ( ಅಂದಾಜು 8.20 ಲಕ್ಷ ಕೋಟಿ ರೂ.) ನಷ್ಟವಾಗಿರುವ ಹಿನ್ನೆಲೆಯಲ್ಲಿ ಭಾರತೀಯ ಜೀವ ವಿಮಾ ನಿಗಮವು (Life Insurance Corporation) ಬೇರೆ ಕಂಪನಿಗಳಲ್ಲಿ (Adani stocks) ತನ್ನ ಈಕ್ವಿಟಿ ಮತ್ತು ಡೆಟ್ ಹೂಡಿಕೆಗಳ ಮೇಲೆ ಮಿತಿ ವಿಧಿಸಲು ನಿರ್ಧರಿಸಿದೆ ಎಂದು ವರದಿಯಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
10. ಹೆದ್ದಾರಿಗಳಲ್ಲಿ 6 ತಿಂಗಳಲ್ಲಿ ಟೋಲ್ ಪ್ಲಾಜಾ ತೆರವು, ಜಿಪಿಎಸ್ ಆಧರಿತ ಟೋಲ್ ಸಂಗ್ರಹ ವ್ಯವಸ್ಥೆ
ಸರ್ಕಾರ ಮುಂದಿನ 6 ತಿಂಗಳಲ್ಲಿ ಹೆದ್ದಾರಿಗಳಲ್ಲಿ ಈಗಿನ ಟೋಲ್ ಪ್ಲಾಜಾ (Toll plaza) ಬದಲಿಗೆ ಜಿಪಿಎಸ್ ಆಧರಿತ ಟೋಲ್ ವ್ಯವಸ್ಥೆಯನ್ನು (GPS-based toll colletction) ಅಳವಡಿಸಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಶುಕ್ರವಾರ ತಿಳಿಸಿದ್ದಾರೆ. ಹೆದ್ದಾರಿಗಳಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವುದು, ಮೋಟಾರು ವಾಹನಗಳಿಗೆ ಸಂಚರಿಸಿದಷ್ಟೇ ದೂರದ ಲೆಕ್ಕದಲ್ಲಿ ನಿಖರವಾಗಿ ಶುಲ್ಕ ನಿಗದಿಪಡಿಸಲು ಜಿಪಿಎಸ್ ಆಧರಿತ ಟೋಲ್ ಸಂಗ್ರಹ ಪದ್ಧತಿ ಸಹಕಾರಿಯಾಗಲಿದೆ ಎಂದು ಗಡ್ಕರಿ ತಿಳಿಸಿದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
ಇನ್ನಷ್ಟು ಪ್ರಮುಖ ಸುದ್ದಿಗಳಿವು
- ರಾಜ ಮಾರ್ಗ ಅಂಕಣ : ದಕ್ಷಿಣ ಭಾರತದ ಕೋಗಿಲೆ ಕೆ.ಎಸ್.ಚಿತ್ರಾ; ಅವರ ಕಂಠವೆಂದರೆ ಜಿನುಗುವ ಭಾವದೊರತೆ
- ಮೊಗಸಾಲೆ ಅಂಕಣ: ರಾಜ್ಯ ಬಿಜೆಪಿ ಕಲಿಯಲೊಲ್ಲದ ಪಾಠ
- ಸೂರ್ಯಕುಮಾರ್ ಜತೆ ಸಂಜು ಸ್ಯಾಮ್ಸನ್ ಹೋಲಿಕೆ ಬೇಡ; ಕಪಿಲ್ ದೇವ್
- ಎರಡನೇ ಮದುವೆ ವಂದತಿಗಳಿಗೆ ಕೊನೆಗೂ ಸ್ಪಷ್ಟನೆ ಕೊಟ್ಟ ನಟಿ ಮೀನಾ ಸಾಗರ್
- ವಿವಿಧ ಹುದ್ದೆಗಳ ನೇಮಕಕ್ಕೆ ನಡೆದ ಸ್ಪರ್ಧಾತ್ಮಕ ಪರೀಕ್ಷೆಯ ಕೀ ಉತ್ತರ ಪ್ರಕಟ