ಮಂಗಳೂರು: ನಿಷೇಧಿತ ಪಿಎಫ್‌ಐ ಸಂಘಟನೆಗೆ ವಿದೇಶದಿಂದ ಫಂಡಿಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಸೇರಿ ದಕ್ಷಿಣ ಕನ್ನಡ ಜಿಲ್ಲೆಯ 3 ಕಡೆ ಎನ್‌ಐಎ ಅಧಿಕಾರಿಗಳು (NIA Raid) ಭಾನುವಾರ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಉಳ್ಳಾಲದ ಕಿನ್ಯಾ, ಒಳಚ್ಚಿಲ್ ಪದವು ಮತ್ತು ಪಾಣೆ ಮಂಗಳೂರಿನಲ್ಲಿ ಅಧಿಕಾರಿಗಳು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.
ಕೇರಳದಲ್ಲಿ ಧಾರ್ಮಿಕ ಶಿಕ್ಷಕನಾಗಿದ್ದ ಇಬ್ರಾಹಿಂ ನಂದಾವರ ಎಂಬುವವರ ಬಂಟ್ವಾಳದ ಮೇಲ್ಕಾರ್ ಮನೆಯಲ್ಲಿ ಎನ್‌ಐಎ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಈತ ಪಿಎಫ್‌ಐ ನಿಷೇಧದ ಬಳಿಕ ತಲೆ ಮರೆಸಿಕೊಂಡಿದ್ದಾನೆ. ಇಬ್ರಾಹಿಂ ಮನೆಯಲ್ಲಿ ಪರಿಶೀಲನೆ ನಡೆಸಿ ಕೆಲ ದಾಖಲೆಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಅದೇ ರೀತಿ ಒಳಚ್ಚಲ್‌ನ ಮುಸ್ತಾಕ್ ಎಂಬಾತನ ಮನೆಯಲ್ಲೂ ಪರಿಶೀಲನೆ ನಡೆಸಲಾಗಿದೆ.
ಇದನ್ನೂ ಓದಿ | BBMP Fire Accident: BBMP ಅಗ್ನಿ ಅವಘಡ; ಗಾಯಗೊಂಡ 9 ಮಂದಿಯ ಆರೋಗ್ಯ ಸ್ಥಿತಿ ಈಗ ಹೇಗಿದೆ?; ಇದು Latest Bulletin
ಈ ಹಿಂದೆ ನಿಷೇಧಿತ ಪಿಎಫ್‌ಐ ಸಂಘಟನೆಯ ಫಂಡಿಂಗ್ ನೆಟ್‌ವರ್ಕ್ ಅನ್ನು ಎನ್‌ಐಎ ಭೇದಿಸಿತ್ತು. ಬಂಧಿತರ ವಿಚಾರಣೆ ಸಂದರ್ಭದಲ್ಲಿ ಇಬ್ರಾಹಿಂ ಹೆಸರು ಪ್ರಸ್ತಾಪವಾಗಿತ್ತು. ಭಾರತದಲ್ಲಿ ಭಯೋತ್ಪಾದನೆಗೆ ಫಂಡಿಂಗ್ ಮಾಡುತ್ತಿದ್ದ ಹವಾಲಾ ನೆಟ್‌ವರ್ಕ್‌ನ ಹಿಡಿಯಲು ಮಂಗಳೂರು ಹೊರವಲಯದ ಒಳಚ್ಚಿಲ್ ಪದವು ಮತ್ತು ಬಂಟ್ವಾಳದ ಮೆಲ್ಕಾರ್ ಸೇರಿ ಮೂರು ಕಡೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
NIA Raid: ಪಿಎಫ್‌ಐ ಉಗ್ರ ಚಟುವಟಿಕೆ ಶಂಕೆ; ಐದು ರಾಜ್ಯಗಳ 14 ಕಡೆ ಎನ್‌ಐಎ ದಾಳಿ
ಬೆಂಗಳೂರು: ನಿಷೇಧಿತ ಪಿಎಫ್‌ಐ ಸಂಘಟನೆ ಉಗ್ರ ಚಟುವಟಿಕೆ ಹಾಗೂ ಇನ್ನಿತರ ಅಕ್ರಮ ಚಟುವಟಿಕೆ ಭಾಗಿಯಾಗಿರುವ ಶಂಕೆ ಹಿನ್ನೆಲೆಯಲ್ಲಿ ಎನ್‌ಐಎ ಅಧಿಕಾರಿಗಳು ಐದು ರಾಜ್ಯಗಳ 14 ಕಡೆ ಏಕಕಾಲಕ್ಕೆ ದಾಳಿ (NIA Raid) ನಡೆಸಿ ಪರಿಶೀಲನೆ ನಡೆಸಿದ್ದಾರೆ.
ನಿಷೇಧಿತ ಮೂಲಭೂತವಾಡಿ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಭಾರತವನ್ನು 2047ರ ಹೊತ್ತಿಗೆ ಇಸ್ಲಾಮಿಕ್ ರಾಷ್ಟ್ರವಾಗಿ ಬದಲಿಸಲು ಪಣತೊಟ್ಟಿತ್ತು ಎಂಬ ಅಂಶ ತನಿಖೆ ವೇಳೆ ಬಂದಿತ್ತು. ಈ ನಿಟ್ಟಿನಲ್ಲಿ ಪಿಎಫ್‌ಐ ಆರ್ಮಿ ಸ್ಥಾಪಿಸಲು ಯುವಕರಿಗೆ ಪ್ರೋತ್ಸಾಹ ನೀಡಿ ಶಸ್ತ್ರಾಸ್ತ್ರ ತರಬೇತಿ ನೀಡಿರುವ ಬಗ್ಗೆ ತನಿಖೆಯಲ್ಲಿ ತಿಳಿದುಬಂದಿದ್ದರಿಂದ ಎನ್‌ಐಎ ದಾಳಿ ನಡೆಸಿದೆ.
ಇದನ್ನೂ ಓದಿ | Krishna river : ಪುಣ್ಯ ಸ್ನಾನ ಮಾಡಲು ಹೋದ ಯುವಕ ನೀರುಪಾಲು
ಈ ಹಿಂದೆ ಶಸ್ತ್ರಾಸ್ತ್ರ ತರಬೇತಿ ನೀಡುತ್ತಿದ್ದ ಹಿನ್ನೆಲೆಯಲ್ಲಿ ಕೆಲ ಪಿಎಫ್‌ಐ ಏಜೆಂಟರನ್ನು ಎನ್‌ಐಎ ಬಂಧಿಸಿತ್ತು. ಕರ್ನಾಟಕ ದಕ್ಷಿಣ ಕನ್ನಡ ಸೇರಿ ಮಹಾರಾಷ್ಟ್ರ, ಕೇರಳ, ಪಶ್ಚಿಮ ಬಂಗಾಳ ಹಾಗೂ ಇತರ ರಾಜ್ಯಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಲಾಗಿತ್ತು. ಈ ಹಿಂದೆ ಪಿಎಫ್‌ಐನ 19 ಜನರ ವಿರುದ್ಧ ಎನ್‌ಐಎ ಚಾರ್ಚ್ ಶೀಟ್ ಸಲ್ಲಿಕೆ ಮಾಡಿತ್ತು.