ಗದಗ: ವಿಸ್ತಾರ ನ್ಯೂಸ್ ಸಹಯೋಗದಲ್ಲಿ ಜಿಲ್ಲೆಯ ಮುಂಡರಗಿ ಪಟ್ಟಣದಲ್ಲಿ ಬುಧವಾರ 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ (International Yoga Day) ಕಾರ್ಯಕ್ರಮವನ್ನು ಆಚರಿಸಲಾಯಿತು.
ವಿಸ್ತಾರ ನ್ಯೂಸ್ ಹಾಗೂ ಜಿಲ್ಲಾ ಆಯುಷ್ ಇಲಾಖೆ, ತಾಲೂಕು ಆಡಳಿತ ಮುಂಡರಗಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಶ್ರೀ.ಜ.ಅ.ವಿದ್ಯಾ ಸಮಿತಿ, ಪತಂಜಲಿ ಯೋಗ ಸಮಿತಿ, ಅನ್ಮೂಲ್ ಯೋಗ ಮತ್ತು ಆಯುರ್ವೇದ ಚಿಕಿತ್ಸಾ ಕೇಂದ್ರ, ರಾಷ್ಟ್ರೀಯ ಸ್ವಯಂಸೇವಕ ಸಂಘ, ವಿವೇಕ ಜಾಗೃತ ಬಳಗ, ಮದರ್ ತೆರೇಸಾ ಮಹಿಳಾ ಮಂಡಳಿ, ಪುರಸಭೆ ಮುಂಡರಗಿ, ಕ.ರಾ.ಬೆಲ್ಲದ ಕಲಾ ವಾಣಿಜ್ಯ ಮಹಾವಿದ್ಯಾಲಯದ ಎನ್ ಸಿ ಸಿ ಘಟಕದ ಸಹಯೋಗದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮವನ್ನು ಮುಂಡರಗಿ ಅನ್ನದಾನೀಶ್ವರ ಸಂಸ್ಥಾನಮಠದ ಜಗದ್ಗುರು ನಾಡೋಜ ಡಾ.ಅನ್ನದಾನೀಶ್ವರ ಸ್ವಾಮೀಜಿ, ಯೋಗಭ್ಯಾಸ ಮಾಡುವ ಮೂಲಕ ಚಾಲನೆ ನೀಡಿದರು.
ಇದನ್ನೂ ಓದಿ: Indian Army Recruitment 2023 : ಎಂಜಿನಿಯರಿಂಗ್ ಪದವೀಧರರಿಗೆ ಸೇನೆಯಲ್ಲಿ ಆಫೀಸರ್ ಹುದ್ದೆ; ಕೂಡಲೇ ಅರ್ಜಿ ಸಲ್ಲಿಸಿ!
ಬಳಿಕ ಮಾತನಾಡಿದ ಶ್ರೀಗಳು, ಪ್ರಾಚೀನ ಕಾಲದಿಂದಲೂ ಭಾರತದಲ್ಲಿ ಯೋಗದ ಸಾಧನೆ ನಿರಂತರವಾಗಿದೆ. ಯೋಗದ ಮೂಲಕ ಆಧ್ಯಾತ್ಮದಲ್ಲಿ ಅಭೂತಪೂರ್ವ ಬದಲಾವಣೆ ತರಬಹುದು. ವಿಶೇಷವಾಗಿ ಇಂದಿನ ಡಿಜಿಟಲ್ ಯುಗದಲ್ಲಿ ಮಕ್ಕಳು ಯೋಗವನ್ನು ಕಡ್ಡಾಯವಾಗಿ ಮಾಡುವದರಿಂದ ಏಕಾಗ್ರತೆ ಹೆಚ್ಚುತ್ತದೆ ಎಂದು ತಿಳಿಸಿದರು.
ಯೋಗ ಸಾಧಕಿ ಮಂಗಳಾ ಇಟಗಿ ಮಾತನಾಡಿ, ವಿಸ್ತಾರ ನ್ಯೂಸ್ ಸಹಯೋಗದಲ್ಲಿ ಯೋಗ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಂಡಿರುವುದು ನಮ್ಮೆಲ್ಲರಿಗೂ ಯೋಗದ ಕುರಿತು ಮತ್ತಷ್ಟು ಪ್ರೇರಣದಾಯಕವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಮುಂಡರಗಿ ತಹಶೀಲ್ದಾರ್ ಶ್ರುತಿ ಮಳ್ಳಪ್ಪಗೌಡರ, ಡಾ. ಬಿ.ಜಿ.ಜವಳಿ, ಹಾಗೂ ಬಸಪ್ಪ ಶೆಟ್ಟರ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು.
ಇದನ್ನೂ ಓದಿ: Women’s Asia Cup 2023: ಭಾರತದ ವನಿತೆಯರ ತಂಡ ‘ಎ’ ಒನ್; ಬಾಂಗ್ಲಾ ಮಣಿಸಿ ಏಷ್ಯಾ ಕಪ್ ಚಾಂಪಿಯನ್ಸ್
ಈ ಸಂದರ್ಭದಲ್ಲಿ ಮಂಜುನಾಥ ಅಳವಂಡಿ, ನಾಗೇಶ್ ಹುಬ್ಬಳ್ಳಿ, ಜ್ಯೋತಿ ಹಾನಗಲ್, ಪವಿತ್ರಾ ಕಲ್ಲಕುಟಗರ, ದೇವಪ್ಪ ಇಟಗಿ, ರವೀಂದ್ರಗೌಡ ಪಾಟೀಲ, ಮಂಜುನಾಥ ಮುಧೋಳ, ವೀಣಾ ಹೇಮಂತಗೌಡ ಪಾಟೀಲ, ಮಂಜುಳಾ ಇಟಗಿ, ವಿಸ್ತಾರ ನ್ಯೂಸ್‌ನ ತಾಲೂಕು ವರದಿಗಾರ ರಂಗನಾಥ ಕಂದಗಲ್ಲ ಸೇರಿದಂತೆ ನೂರಾರು ಸಂಖ್ಯೆಯಲ್ಲಿ ಯೋಗಪಟುಗಳು ಪಾಲ್ಗೊಂಡಿದ್ದರು.