Site icon Vistara News

Gadag News : ಮಕ್ಕಳ ಕೂದಲು ಕಟ್ ಮಾಡಿದ ಕಂಪ್ಯೂಟರ್ ಶಿಕ್ಷಕನಿಗೆ ಧರ್ಮದೇಟು!

Gadag News

ಗದಗ: ಮಕ್ಕಳ ಕೂದಲು ಕಟ್ ಮಾಡಿದ್ದಕ್ಕೆ ಕಂಪ್ಯೂಟರ್ ಶಿಕ್ಷಕನಿಗೆ ಧರ್ಮದೇಟು ಬಿದ್ದಿದೆ. ಗದಗ (Gadag News) ಬೆಟಗೇರಿ ಸೇಂಟ್ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹೈಡ್ರಾಮಾವೇ ನಡೆದಿದೆ. ಶಿಕ್ಷಕ ಬೆನೋಯ್ ಎಂಬಾತ ಶಾಲೆಯ ಆರು ಮಕ್ಕಳಿಗೆ ಹೇರ್ ಕಟ್ ಮಾಡಿದ್ದಾರೆ.

ಕೂದಲು ಕಟ್ ಮಾಡುವ ವೇಳೆ ವಿದ್ಯಾರ್ಥಿ ಹಣೆಗೆ ಗಾಯವಾಗಿದೆ. ಏಳನೇ ತರಗತಿ ವಿದ್ಯಾರ್ಥಿಗೆ ಬೆನೋಯ್ ಕತ್ತರಿಯಿಂದ ಗಾಯ ಮಾಡಿದ್ದಾರೆ. ಶಿಕ್ಷಕ ಬೆನೋಯ್ ವರ್ತನೆಗೆ ಪೋಷಕರು ಆಕ್ರೋಶ ಹೊರಹಾಕಿದ್ದಾರೆ. ಸ್ಥಳಕ್ಕೆ ಆಗಮಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಆರ್ ಎಸ್ ಬುರಡಿ ಎದುರೇ ಪೋಷಕರು ಧರ್ಮದೇಟು ನೀಡಿದ್ದಾರೆ.

ಬಳಿಕ ಬೆನೋಯ್‌ನ್ನು ವಜಾಗೊಳಿಸುವಂತೆ ಪಾಲಕರು ಆಗ್ರಹಿಸಿದ್ದಾರೆ. ದುರ್ವರ್ತನೆ ತೋರಿದ ಶಿಕ್ಷಕನ ಬಗ್ಗೆ ಬಿಇಒ ಅಧಿಕಾರಿ ವರದಿ ಪಡೆದಿದ್ದಾರೆ. ಮೇಲಾಧಿಕಾರಿಗಳಿಗೆ ವರದಿ ನೀಡಿ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ಗದಗ ಶಹರ ಬಿಇಒ ಆರ್‌ಎಸ್ ಬುರಡಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Self Harming: ಹೊಸದುರ್ಗದಲ್ಲಿ ಬ್ಯಾಂಕ್‌ ಆಫೀಸರ್‌ ಸೂಸೈಡ್‌; ರೈಲಿಗೆ ಸಿಲುಕಿ ಮತ್ತಿಬ್ಬರು ಸಾವು

ಶಾಲೆ ಆವರಣದಲ್ಲೇ ಎಣ್ಣೆ ಪಾರ್ಟಿ ಮಾಡಿದ ಕಿಡಿಗೇಡಿಗಳು

ಕಿಡಿಗೇಡಿಗಳು ಸರ್ಕಾರಿ ಶಾಲೆ ಆವರಣದಲ್ಲೇ ರಾತ್ರಿಯಿಡೀ ಎಣ್ಣೆ ಪಾರ್ಟಿ ಮಾಡಿದ್ದಾರೆ. ಶಾಲಾ ಆವರಣವನ್ನೇ ಬಾರ್ ಮಾಡಿಕೊಂಡಿರುವ ಯುವಕರು ಕುಡಿದು, ಕಿರುಚಾಡಿ ಮದ್ಯದ ಬಾಟಲಿಗಳನ್ನು ಬಿಟ್ಟುಹೋಗಿದ್ದಾರೆ. ಚಿಕ್ಕಮಗಳುರಿನ ವಸ್ತಾರೆ ಗ್ರಾಮದಲ್ಲಿ ಘಟನೆ ನಡೆದಿದೆ.

ಗ್ರಾಮದ ಪ್ರಾಥಮಿಕ ಸರ್ಕಾರಿ ಶಾಲೆಯಲ್ಲಿ ಮದ್ಯದ ಬಾಟಲಿಗಳು ಪತ್ತೆಯಾಗಿದೆ. ದಿನವೂ ಎಣ್ಣೆ ಪಾರ್ಟಿ ಮಾಡಲು ಸರ್ಕಾರಿ ಶಾಲೆಯನ್ನೇ ಅಡ್ಡ ಮಾಡಿಕೊಂಡಿದ್ದಾರೆ. ಕಿಡಿಗೇಡಿಗಳ ಕೃತ್ಯಕ್ಕೆ ವಿದ್ಯಾರ್ಥಿಗಳು, ಶಿಕ್ಷಕರು ಬೇಸರ ವ್ಯಕ್ತಪಡಿಸಿದ್ದಾರೆ. ಕೃತ್ಯ ಎಸಗುವ ಯುವಕರ ವಿರುದ್ಧ ಸೂಕ್ತ ಕ್ರಮಕ್ಕೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version