ಗಜೇಂದ್ರಗಡ (ಗದಗ): ಐಪಿಎಲ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಆರೋಪಿಗಳಿಗೆ ಜಾಮೀನು ಕೊಡಿಸಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಗಜೇಂದ್ರಗಡ ಪೊಲೀಸ್ ಠಾಣೆ ಪಿಎಸ್‌ಐ ಸೇರಿ ಮೂವರು ಲೋಕಾಯುಕ್ತ (Lokayukta Raid) ಬಲೆಗೆ ಬಿದ್ದಿದ್ದಾರೆ.
ಲಂಚ ಪಡೆಯುವ ವೇಳೆ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ ನಡೆದಿದೆ. ಐಪಿಎಲ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಆರೋಪಿಗಳಿಗೆ ಜಾಮೀನು ಕೊಡಿಸಲು ಲಂಚಕ್ಕೆ ಬೇಡಿಕೆ ಇಡಲಾಗಿತ್ತು. ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ದಂದೆಧ ಹಿನ್ನೆಲೆಯಲ್ಲಿ ಗಜೇಂದ್ರಗಡ ಠಾಣೆಯಲ್ಲಿ 3 ಪ್ರಕರಣಗಳು ದಾಖಲಾಗಿದ್ದವು. ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿಗಾಗಿ 2 ಲಕ್ಷ ಬೇಡಿಕೆ ಇಡಲಾಗಿದೆ ಎಂದು ದೂರು ದಾಖಲಿಸಲಾಗಿತ್ತು.
ಇದನ್ನೂ ಓದಿ: Bhatkala News : ಸರ್ಕಾರದ ದುಡ್ಡಿನಲ್ಲಿ ತಮ್ಮ ಫಾರ್ಮ್‌ಗೆ ರಸ್ತೆ ಮಾಡಿಕೊಂಡ ಸುನೀಲ್ ನಾಯ್ಕ; ಲೋಕಾಯುಕ್ತಕ್ಕೆ ದೂರು
ಪಿಎಸ್‌ಐ ಒಂದೂವರೆ ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರು. ಅದರಂತೆ, ಹಣ ಪಡೆಯುವಾಗ ಧಾರವಾಡ ಲೋಕಾಯುಕ್ತ ಎಸ್.ಪಿ.ಸತೀಶ ಚಿಟಗುಬ್ಬಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಪಿಎಸ್ಐ ಮತ್ತು ಇಬ್ಬರು ಪೇದೆಗಳನ್ನು ವಶಪಡಿಸಿಕೊಂಡಿರುವ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.