ಗದಗ: ಗ್ಯಾರಂಟಿ ಸಮಾವೇಶದ ಸಂದರ್ಭದಲ್ಲೇ ಕಾಂಗ್ರೆಸ್ ಕಾರ್ಯಕರ್ತನ ಭೀಕರ ಹತ್ಯೆ (Murder Case) ನಡೆದಿದೆ. ಗದಗ ಜಿಲ್ಲೆಯ ಡಂಬಳ ಗ್ರಾಮದ ಬಳಿ ಘಟನೆ ನಡೆದಿದೆ. ಶರಣಪ್ಪ ಸಂದೀಗೌಡರ್ ಕೊಲೆಯಾದ ಕಾಂಗ್ರೆಸ್ ಕಾರ್ಯಕರ್ತರಾಗಿದ್ದಾರೆ.
ಬೈಕ್‌ನಲ್ಲಿ ಹೋಗುತ್ತಿದ್ದ ಶರಣಪ್ಪರನ್ನು ದುಷ್ಕರ್ಮಿಗಳು ಅಡ್ಡಗಟ್ಟಿ ಹಲ್ಲೆ ಮಾಡಿ, ನಂತರ ಅಲ್ಲಿದ್ದ ಮರಕ್ಕೆ ಹಗ್ಗದಿಂದ ಕಟ್ಟಿ ಹಾಕಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಡೋಣಿ ಗ್ರಾಮದಲ್ಲಿ ಶರಣಪ್ಪ ಪ್ರಮುಖ ಕಾಂಗ್ರೆಸ್ ಕಾರ್ಯಕರ್ತ ಎಂದು ಗುರುತಿಸಿಕೊಂಡಿದ್ದ ಎನ್ನಲಾಗಿದೆ.
ಇನ್ನೂ ಕೊಲೆಯದ ಸ್ವರೂಪ ನೋಡಿ ಡೋಣಿ ಹಾಗೂ ಡಾಂಬಳ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಮುಂಡರಗಿ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಮರದಲ್ಲಿದ್ದ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಮುಂಡರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: REIT Investment : ರಿಯಲ್ ಎಸ್ಟೇಟ್ ಇನ್ವೆಸ್ಟ್‌ಮೆಂಟ್ ಟ್ರಸ್ಟ್‌ನಲ್ಲಿ ಹೂಡಿಕೆಯ ಲಾಭವೇನು?
ಬೆಡ್ ರೂಂನಲ್ಲಿ ನಗ್ನ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ
ಆನೇಕಲ್: ಕೊಳೆತ ಸ್ಥಿತಿಯಲ್ಲಿ ಯುವತಿ ಶವ (Dead Body Found) ಪತ್ತೆಯಾಗಿದೆ. ಬೆಂಗಳೂರು ಹೊರವಲಯದ ಚಂದಾಪುರ ಹೆಡ್ ಮಾಸ್ಟರ್ ಬಡಾವಣೆಯಲ್ಲಿ ಘಟನೆ ನಡೆದಿದೆ. ಬಡಾವಣೆಯ ನಾಲ್ಕನೇ ಫ್ಲೋರ್‌ನಲ್ಲಿರುವ ಮನೆಯೊಂದರ ಕೊಠಡಿಯಲ್ಲಿ ನಗ್ನ ಸ್ಥಿತಿಯಲ್ಲಿ ಯುವತಿ ಶವ ಪತ್ತೆಯಾಗಿದೆ.
ಐದಾರು ದಿನಗಳ ಹಿಂದೆ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ. ಒರಿಸ್ಸಾ ಮೂಲದ ಸಪನ್ ಕುಮಾರ್ ಎಂಬಾತ ಈ ಮನೆಯಲ್ಲಿ ವಾಸವಾಗಿದ್ದ ಎನ್ನಲಾಗಿದೆ. ಯುವತಿ ಈತನ ಜತೆಗಿದ್ದಳು. ಸಪನ್ ಕುಮಾರ್ ಮೊಬೈಲ್ ಸ್ವಿಚ್ಡ್ ಆಫ್ ಮಾಡಿ ನಾಪತ್ತೆಯಾಗಿದ್ದಾನೆ. ಯುವತಿ ಕೊಲೆಗೈದ ಬಳಿಕ ಸಪನ್ ನಾಪತ್ತೆಯಾಗಿರುವ ಸಾಧ್ಯತೆ ಇದೆ ಎನ್ನಲಾಗಿದೆ.
ಕೊಲೆಗೂ ಮೊದಲು ಮದ್ಯಪಾನ ಮಾಡಿರಬಹುದು ಎಂದು ಅಂದಾಜಿಸಲಾಗಿದೆ. ಶವ ಪತ್ತೆಯಾದ ಸ್ಥಳದಲ್ಲಿ ಮದ್ಯದ ಬಾಟಲಿಗಳು, ಸಿಗರೇಟ್ ಪ್ಯಾಕ್ ಜತೆಗೆ ಊಟದ ಪ್ಯಾಕೇಟ್‌ಗಳು ಇವೆ. ಇನ್ನೂ ಕಳೆದ ಐದಾರು ದಿನಗಳಿಂದ ಬಾಗಿಲು ಹಾಕಿದಂತೆ ಇತ್ತು. ಮನೆಯಿಂದ ಕೆಟ್ಟ ವಾಸನೆ ಬರುತ್ತಿದ್ದ ಕಾರಣಕ್ಕೆ ಸ್ಥಳೀಯರು ಕಿಟಕಿಯಿಂದ ನೋಡಿದ್ದಾರೆ.
ಈ ವೇಳೆ ಯುವತಿ ಶವವಾಗಿ ಬಿದ್ದಿರುವುದು ಕಂಡಿದೆ. ಹೀಗಾಗಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಸೂರ್ಯನಗರ ಪೊಲೀಸರು ಬಾಗಿಲನ್ನು ಮುರಿದು ಒಳಪ್ರವೇಶಿಸಿದ್ದಾರೆ. ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಯುವತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣವನ್ನು ದಾಖಲು ಮಾಡಿಕೊಂಡಿದ್ದು, ನಾಪತ್ತೆಯಾಗಿರುವ ಸಪನ್ ಕುಮಾರ್‌ಗಾಗಿ ಹುಡುಕಾಟ ನಡೆಸಿದ್ದಾರೆ. ಪೊಲೀಸರ ತನಿಖೆಯ ನಂತರವೇ ಹತ್ಯೆ ಯಾಕಾಗಿ ಆಗಿದ್ದು ಎಂಬುದು ತಿಳಿದು ಬರಲಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ