ಗದಗ: ಮಹಾತಾಯಿಯೊಬ್ಬಳು ತನ್ನ ನವಜಾತ ಶಿಶುವೊಂದನ್ನು (Newborn Baby) ಶೌಚಾಲಯದಲ್ಲಿ ಎಸೆದು ಜಾಗ ಖಾಲಿ ಮಾಡಿರುವ ಘಟನೆ ನಡೆದಿದೆ. ಈ ಅಮಾನವೀಯ ಕೃತ್ಯಕ್ಕೆ ಎಲ್ಲೆಡೆ ವ್ಯಾಪಕ ಟೀಕೆಗಳು ವ್ಯಕ್ತವಾಗಿವೆ. ಸಾರ್ವಜನಿಕ ಶೌಚಾಲಯದಲ್ಲಿ ಹೆಣ್ಣು ನವಜಾತ ಶಿಶುವಿನ ಶವ ಪತ್ತೆಯಾಗಿದೆ. ಗದಗದ ಬೆಟಗೇರಿಯ ಹುಯಿಲಗೋಳ ರಸ್ತೆಯ ವೆಂಕಟೇಶ್ವರ ಕಲ್ಯಾಣ ಮಂಟಪ ಬಳಿ ಇರುವ ಸಾರ್ವಜನಿಕ ಶೌಚಾಲಯದಲ್ಲಿ ಘಟನೆ ನಡೆದಿದೆ.
ಬುಧವಾರ ರಾತ್ರಿ ಹೆರಿಗೆ ಆದ ಮೇಲೆ ಶೌಚಾಲಯದಲ್ಲೇ ಮಾಂಸದ ಮುದ್ದೆ ಸಮೇತ ನವಜಾತ ಶಿಶುವನ್ನು ಬಿಟ್ಟು ಹೋಗಿದ್ದಾಳೆ. ನವಜಾತ ಶಿಶುವಿನ ದೇಹದ ತುಂಬೆಲ್ಲ ಇರುವೆಗಳು ಮೆತ್ತಿಕೊಂಡು ಮೃತ ಸ್ಥಿತಿಯಲ್ಲಿ ಶಿಶು ಪತ್ತೆಯಾಗಿದೆ. ಗುರುವಾರ ಬೆಳಗ್ಗೆ ಸಾರ್ವಜನಿಕರು ಬಂದು ನೋಡಿದಾಗ ಕೃತ್ಯ ಬಯಲಾಗಿದೆ. ಇಂಥ ಒಂದು ಅಮಾನವೀಯ ಘಟನೆಗೆ ಹಿಡಿಶಾಪ ಹಾಕಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬೆಟಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನವಜಾತ ಶಿಶುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಗದಗದ ಬೆಟಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.
ಇದನ್ನೂ ಓದಿ: Sadguru Jaggi Vasudev: ಆಸ್ಪತ್ರೆ ಬೆಡ್‌ನಲ್ಲೂ ಸದ್ಗುರು ಜಗ್ಗಿ ವಾಸುದೇವ್ ತಮಾಷೆ! ವೈರಲ್ ಆಯ್ತು ವಿಡಿಯೋ
ಅವಳಿ ಮಕ್ಕಳ ಜೊತೆ ತಾಯಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ
ಬೆಂಗಳೂರು: ಸಾಲದ ಹೊರೆಗೆ ಅಂಜಿ, ಖಾಸಗಿ ಬ್ಯಾಂಕ್ ಸಿಬ್ಬಂದಿಯ ತಾಕೀತಿಗೆ ಅಂಜಿ ಇಬ್ಬರು ಮಕ್ಕಳೊಂದಿಗೆ ತಾಯಿಯೊಬ್ಬರು ಆತ್ಮಹತ್ಯೆ (self harm) ಮಾಡಿಕೊಂಡಿದ್ದಾರೆ. ಜೆಪಿ ನಗರದ ಮೂರನೇ ಹಂತದಲ್ಲಿ ಈ ದುರಂತ ಸಂಭವಿಸಿದ್ದು, ಖಾಸಗಿ ಬ್ಯಾಂಕ್ ಸಾಲದ ಹೊರೆಗೆ ಮೂವರೂ ಬಲಿಯಾಗಿದ್ದಾರೆ.
ಉಡುಪಿ ಜಿಲ್ಲೆಯ ಅಂಬಲಪಾಡಿ ಮೂಲದವರಾದ ಕುಟುಂಬ ಬೆಂಗಳೂರಿನಲ್ಲಿ ವಾಸವಾಗಿತ್ತು. ಮೃತಪಟ್ಟ ಮಹಿಳೆ ಸುಕನ್ಯ (58). ನಿಖಿತ್, ನಿಶ್ಚಿತ ಮೃತ ಪಟ್ಟಿರುವ ಅವಳಿ ಮಕ್ಕಳು. ನಿನ್ನೆ ಸಂಜೆ ಬ್ಯಾಂಕ್ ಸಿಬ್ಬಂದಿಗಳು ಮನೆಗೆ ಆಗಮಿಸಿ ಸಾಲದ ಹಣ ವಾಪಸು ಕೇಳಿದ್ದರು. ಗಂಡ ಮನೆಯಲ್ಲಿರದ ವೇಳೆ ಬ್ಯಾಂಕ್ ಸಿಬ್ಬಂದಿಗಳು ಬಂದಿದ್ದರು ಎಂದು ಗೊತ್ತಾಗಿದೆ.
ಇದರಿಂದ ನೊಂದ ಸುಕನ್ಯ ಮರ್ಯಾದೆಗೆ ಅಂಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಜೆಪಿ ನಗರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ