ಗದಗ: ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ (Physical Abuse) ಯತ್ನಿಸಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 16 ವರ್ಷದ ಬಾಲಕಿ ಮೇಲೆ ವಿಜಯಕುಮಾರ್ ಎಂಬಾತ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.
ಮನೆಯಲ್ಲಿ ಬಾಲಕಿ ಒಬ್ಬಳೇ ಇರುವುದನ್ನು ನೋಡಿ ಒಳ ನುಗ್ಗಿದ ವಿಜಯಕುಮಾರ್ ಅತ್ಯಾಚಾರಕ್ಕೆ ಮುಂದಾಗಿದ್ದ. ಅತ್ಯಾಚಾರಕ್ಕೆ ಯತ್ನಿಸುವ ವೇಳೆ ಬಾಲಕಿ ಚಿರಾಡಿದ್ದಾಳೆ. ಬಾಲಕಿಯ ಚಿರಾಟ ಕೇಳಿ ಸ್ಥಳೀಯ ಮಹಿಳೆಯೊಬ್ಬರು ಮನೆಯೊಳಗೆ ಬಂದಾಗ, ಕಾಮುಕ ವಿಜಯಕುಮಾರ್ ಓಡಿ ಹೋಗಿದ್ದಾನೆ.
ಸಂತ್ರಸ್ತೆಯ ಪೋಷಕರು ಮುಂಡರಗಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ವಿಜಯ್ ಕುಮಾರ್‌ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಕರಣ ಸಂಬಂಧ ತನಿಖೆಯನ್ನು ನಡೆಸುತ್ತಿದ್ದಾರೆ.
ಇದನ್ನೂ ಓದಿ: ಬೆಡ್‌ರೂಂ ಕಿಟಕಿ ಹಾಕದೆ ರತಿಕೇಳಿ, ಪಕ್ಕದ ಮನೆ ಮಹಿಳೆಗೆ ಕಿರಿಕ್! ಬೆಂಗಳೂರಿನಲ್ಲಿ ವಿಚಿತ್ರ ದೂರು
ಲೈಂಗಿಕ ಕಿರುಕುಳ ಕೊಟ್ಟ ಶಿಕ್ಷಕ; ತಿರುಗಿ ಬಿದ್ದ ವಿದ್ಯಾರ್ಥಿನಿಯರು
ಮಂಗಳೂರು: ಶಾಲಾ ಶಿಕ್ಷಕನಿಂದ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ (POSCO Case) ನೀಡುತ್ತಿರುವ ಆರೋಪ (Physical Abuse) ಕೇಳಿ ಬಂದಿದೆ. ದಕ್ಷಿಣ ಕನ್ನಡದ ಮೂಡಬಿದ್ರೆ ಠಾಣಾ ವ್ಯಾಪ್ತಿಯಲ್ಲಿರುವ ಶಾಲೆಯಲ್ಲಿ ಘಟನೆ ನಡೆದಿದೆ. ಬೆಳ್ತಂಗಡಿ ಮೂಲದ ಶಿಕ್ಷಕ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ವಿದ್ಯಾರ್ಥಿನಿಯರು ದೂರು ನೀಡಿದ್ದಾರೆ.
ವಿದ್ಯಾರ್ಥಿನಿಯರು ದೂರಿನ ಮೇರೆಗೆ ಶಾಲಾ ಆಡಳಿತ ಮಂಡಳಿ ಮತ್ತು ಶಿಕ್ಷಕ ರಕ್ಷಕ ಸಂಘದಿಂದ ಮೂಡಬಿದರೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಾಗಿದೆ.
ಶಾಲೆಗೆ ಚೈಲ್ಡ್ ಲೈನ್ ಅಧಿಕಾರಿಗಳು, ಪಂಚಾಯತ್ ಸದಸ್ಯರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಂಗಳೂರು ಮಹಿಳಾ ಠಾಣೆಯ ಪೊಲೀಸರು ಭೇಟಿ ನೀಡಿ ವಿದ್ಯಾರ್ಥಿಗಳಿಂದ ಮಾಹಿತಿ ಸಂಗ್ರಹಿಸಿದ್ದಾರೆ. ಶಿಕ್ಷಕನನ್ನು ಬಂಧಿಸುವಂತೆ ಪೋಷಕರಿಂದಲ್ಲೂ ಒತ್ತಾಯ ಕೇಳಿ ಬಂದಿದೆ.
ಯುವತಿಯನ್ನು ಹಿಂಬಾಲಿಸಿ ಹಿಂದಿನಿಂದ ಬಂದು ತಬ್ಬಿಕೊಂಡ ಕಾಮುಕ
ಬೆಂಗಳೂರು: ವಿಕೃತ ಮನಸ್ಥಿತಿಯ ವ್ಯಕ್ತಿಗಳು ಹೆಚ್ಚಾಗುತ್ತಿದ್ದಾರೆ. ಯಾರ ಭಯವು ಇಲ್ಲದೇ ಸಾರ್ವಜನಿಕವಾಗಿಯೇ ಅಸಭ್ಯವಾಗಿ ನಡೆದುಕೊಳ್ಳುತ್ತಿದ್ದಾರೆ. ಮಹಿಳೆಯರು ಇದರಿಂದ ಮುಜುಗರಕ್ಕೀಡಾಗುತ್ತಿರುವುದು ಮಾತ್ರವಲ್ಲ ಅವರಿಗೆ ಭದ್ರತೆಯೇ ಇಲ್ಲದಂತಾಗಿದೆ. ಯುವತಿಯನ್ನು ಹಿಂಬಾಲಿಸಿಕೊಂಡು ಬಂದ ಕಾಮುಕನೊಬ್ಬ, ಹಿಂದಿನಿಂದ ತಬ್ಬಿಕೊಂಡು ಅಸಭ್ಯವಾಗಿ (Physical Abuse) ವರ್ತಿಸಿದ್ದಾನೆ.
ಶೃತಿ ಸಿಂಗ್ ಎಂಬಾಕೆ ತಮಗಾದ ಅನುಭವವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಶೃತಿ ಅವರು ತಮ್ಮ ಸ್ನೇಹಿತನ ಜತೆ ಡ್ರಾಪ್ ಪಡೆದು ಮನೆ ಬಳಿ ಬರುತ್ತಿದ್ದರು. ಆಕೆ ಒಬ್ಬಂಟಿಯಾಗಿದ್ದನ್ನು ಗಮನಿಸಿದ ಕಾಮುಕ ಹಿಂಬಾಲಿಕೊಂಡು ಬಂದಿದ್ದ. ನಂತರ ಆಕೆ ನಡೆದುಕೊಂಡು ಹೋಗುವ ಸಂದರ್ಭದಲ್ಲಿ ಬೈಕ್‌ನಿಂದ ಇಳಿದು, ಓಡಿ ಬಂದವನೇ ಹಿಂಭಾಗದಿಂದ ತಬ್ಬಿ ಅಸಭ್ಯವಾಗಿ ವರ್ತಿಸಿದ್ದಾನೆ.
ಇದರಿಂದ ಆತಂಕಗೊಂಡ ಯುವತಿ ಗಾಬರಿಯಾಗಿ ಕಿರುಚಾಡಿದ್ದಾಳೆ. ಕೂಡಲೇ ಜನರನ್ನು ಸೇರಿದ್ದಾಳೆ. ಇದನ್ನು ವಿರೋಧಿಸಿದ ಯುವತಿ ಅಲ್ಲಿದ್ದ ಸ್ಥಳೀಯರ ಸಹಕಾರದಿಂದ ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾಳೆ. ಅಷ್ಟಲ್ಲದೆ ಆತನ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾಳೆ. ಮಹಿಳೆಯರಿಗೆ ನಗರದಲ್ಲಿ ಸುರಕ್ಷತೆ ಎಲ್ಲಿದೆ ಎಂದು ಪ್ರಶ್ನೆ ಮಾಡಿದ್ದಾರೆ.
ಈ ಘಟನೆ ಬಗ್ಗೆ ನಾನು ಯಾವುದೇ ರೀತಿಯ ದೂರು ಕೊಡುವುದಿಲ್ಲ. ಒಂದು ವೇಳೆ ದೂರು ಕೊಟ್ಟರೆ ಕೋರ್ಟ್, ಕಛೇರಿ ಎಂದು ಅಲೆಯಬೇಕಾಗುತ್ತದೆ. ಇದರಿಂದ ಇನ್ನಷ್ಟು ಮಾನಸಿಕವಾಗಿ ಹಿಂಸೆಯಾಗುತ್ತೆ ಎಂದು ಬರೆದುಕೊಂಡಿದ್ದಾಳೆ. ಇಂತಹ ಬೀದಿ ಕಾಮಣ್ಣರನ್ನು ಪೊಲೀಸರು ನಿರ್ನಾಮ ಮಾಡಬೇಕು. ಹೆಣ್ಮಕ್ಕಳು ನೆಮ್ಮದಿಯಾಗಿ ನಿರ್ಭಿತಿಯಾಗಿ ಓಡಾಡುವಂತಾಗಬೇಕೆಂದು ಆಗ್ರಹಿಸಿದ್ದಾರೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ