ಗದಗ
Doctor Negligence: ರೋಗಿ ಸಾವು, ವೈದ್ಯರ ಮೇಲೆ ಆಕ್ರೋಶ, ಕಲ್ಲು ತೂರಾಟ
ಮೊದಲೇ ಸಾವನ್ನಪ್ಪಿದ್ದ ರೋಗಿಯನ್ನು ಬದುಕಿದ್ದಾನೆ ಎಂದು ಸುಳ್ಳು ಹೇಳಿ ಐಸಿಯುನಲ್ಲಿ ಇಟ್ಟುಕೊಂಡಿದ್ದಾರೆ. ಹಣ ಪೀಕಲು ರೋಗಿಗೆ ಚಿಕಿತ್ಸೆ ನೀಡುವ ನಾಟಕವನ್ನು ವೈದ್ಯರು ಮಾಡಿದ್ದರು ಎಂದು ರೋಗಿಯ ಸಂಬಂಧಿಕರು ಅನುಮಾನ ವ್ಯಕ್ತಪಡಿಸಿದ್ದಾರೆ.
ಗದಗ: ವೈದ್ಯರ ನಿರ್ಲಕ್ಷ್ಯದಿಂದ ರೋಗಿ ಸಾವಿಗೀಡಾಗಿದ್ದಾನೆ ಎಂದು ರೋಗಿಯ ಸಂಬಂಧಿಕರು ಆರೋಪಿಸಿ, ರೊಚ್ಚಿಗೆದ್ದು ಆಸ್ಪತ್ರೆ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಗದಗ ನಗರದ ಬೆಟಗೇರಿಯಲ್ಲಿ ನಡೆದಿದೆ.
ಗದಗ ನಗರದ ಬೆಟಗೇರಿ ಜರ್ಮನ್ ಆಸ್ಪತ್ರೆಯಲ್ಲಿ ತಡರಾತ್ರಿ ಈ ಘಟನೆ ನಡೆದಿದೆ. ಇಸ್ಮಾಯಿಲ್ ಡಂಬಳ ಎಂಬ ವ್ಯಕ್ತಿ ನ್ಯುಮೋನಿಯಾದಿಂದ ಬಳಲುತ್ತಿದ್ದ. ನಾಲ್ಕು ದಿನಗಳ ಹಿಂದೆ ಜರ್ಮನ್ ಆಸ್ಪತ್ರೆಗೆ ದಾಖಲಾಗಿದ್ದ. ರೋಗಿ ಗುಣವಾಗುತ್ತಾನೆ ಎಂದು ನಾಲ್ಕು ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ನೀಡುತ್ತಿದ್ದರು. ಆದರೆ ನಾಲ್ಕು ದಿನಗಳಿಂದ ರೋಗಿಯನ್ನು ನೋಡಲು ಸಂಬಂಧಿಕರಿಗೆ ಬಿಟ್ಟಿರಲಿಲ್ಲ. ಹೆಚ್ಚಿನ ಚಿಕಿತ್ಸೆಗೆ ಬೇರೆ ಆಸ್ಪತ್ರೆಗೆ ಹೋಗಲು ಅಂಬ್ಯುಲೆನ್ಸ್ ತಯಾರಿ ಮಾಡುತ್ತಿದ್ದಂತೆ ರೋಗಿ ಸಾವನ್ನಪ್ಪಿದ್ದಾನೆ ಎಂದು ಆಸ್ಪತ್ರೆ ಸಿಬ್ಬಂದಿ ಹೇಳಿದ್ದಾರೆ.
ಮೊದಲೇ ಸಾವನ್ನಪ್ಪಿದ್ದ ರೋಗಿಯನ್ನು ಬದುಕಿದ್ದಾನೆ ಎಂದು ಸುಳ್ಳು ಹೇಳಿ ಐಸಿಯುನಲ್ಲಿ ಇಟ್ಟುಕೊಂಡಿದ್ದಾರೆ. ಹಣ ಪೀಕಲು ರೋಗಿಗೆ ಚಿಕಿತ್ಸೆ ನೀಡುವ ನಾಟಕವನ್ನು ವೈದ್ಯರು ಮಾಡಿದ್ದರು ಎಂದು ರೋಗಿಯ ಸಂಬಂಧಿಕರು ಅನುಮಾನ ವ್ಯಕ್ತಪಡಿಸಿದ್ದಾರೆ.
ಆಸ್ಪತ್ರೆ ಎದುರು ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಸಂಬಂಧಿಕರು, ಕಲ್ಲು ತೂರಾಟ ನಡೆಸಿ ಆಸ್ಪತ್ರೆಯಲ್ಲಿನ ಕಿಟಕಿ ಗಾಜು ಪುಡಿ ಮಾಡಿದ್ದಾರೆ. ನಂತರ ಬೆಟಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲು ಮುಂದಾಗಿದ್ದಾರೆ. ರೋಗಿಯ ಸಂಬಂಧಿಕರ ಮೇಲೂ ಆಸ್ಪತ್ರೆಯ ಮಕ್ಕಳ ವಾರ್ಡ್ ಜಖಂಗೊಳಿಸಿದ ಆರೋಪ ಮಾಡಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಇದನ್ನೂ ಓದಿ: Doctor Negligence: ಓವರ್ ಡೋಸ್‌ನಿಂದ 6 ತಿಂಗಳ ಮಗು ಸಾವು; ವೈದ್ಯರ ನಿರ್ಲಕ್ಷ್ಯಕ್ಕೆ ಪೋಷಕರು ಕಿಡಿ
ಉಡುಪಿ
Weather Report: ಬಿಪರ್‌ಜಾಯ್ ಸೈಕ್ಲೋನ್ ಎಫೆಕ್ಟ್; ರಾಜ್ಯಾದ್ಯಂತ ಇನ್ನೂ 4 ದಿನ ಜಡಿ ಮಳೆ
Weather Report: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಚಂಡಮಾರುತ ಎದ್ದಿದ್ದು, ಇದರ ಪ್ರಭಾವದಿಂದಾಗಿ ರಾಜ್ಯಾದ್ಯಂತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಯಾವ್ಯಾವ ಜಿಲ್ಲೆಗಳಿಗೆ ಅಲರ್ಟ್ ನೀಡಲಾಗಿದೆ ಎಂಬುದರ ಮಾಹಿತಿ ಇಲ್ಲಿದೆ.
ಬೆಂಗಳೂರು: ಬಿಪರ್‌ಜಾಯ್ ಸೈಕ್ಲೋನ್ (Cyclone Biporjoy) ಎಫೆಕ್ಟ್‌ನಿಂದಾಗಿ ರಾಜ್ಯಾದ್ಯಂತ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಕರಾವಳಿ ಸೇರಿ ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಮುಂದಿನ 4 ದಿನ ಮಳೆಯ ಅಬ್ಬರ (Weather Report) ಇರಲಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ್, ಗದಗ ಹಾಗೂ ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಸಾಧಾರಣ ಮಳೆಯಾಗಲಿದೆ. ಉಳಿದ ಬಾಗಲಕೋಟೆ, ಧಾರವಾಡ, ಹಾವೇರಿಯಲ್ಲಿ ಒಣಹವೆ ಇರಲಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು, ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನದಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗಲಿದೆ. ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಲ್ಲೂ ಮಳೆಯ ಅಬ್ಬರ ಇರಲಿದೆ. ವಿಜಯನಗರ, ದಾವಣಗೆರೆಯಲ್ಲಿ ಯಾವುದೇ ಮಳೆ ಮುನ್ಸೂಚನೆ ಇಲ್ಲ.
ಬೆಂಗಳೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಸುಳಿಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 32 ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.
ತಾಪಮಾನ ಏರಿಕೆ ಮುನ್ಸೂಚನೆ
ಮಳೆ ಎಚ್ಚರಿಕೆಯ ನಡುವೆಯೂ ಗರಿಷ್ಠ ಉಷ್ಣಾಂಶವು ರಾಜ್ಯಾದ್ಯಂತ ಹೆಚ್ಚಾಗುವ ಸಾಧ್ಯತೆ ಇದೆ. ಸಾಮಾನ್ಯಕ್ಕಿಂತ 4-5 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. ಮುಂದಿನ 24 ಗಂಟೆಯಲ್ಲಿ ಬಿರುಗಾಳಿ ಸಹಿತ ಗುಡುಗು, ಮಿಂಚಿನ ಮಳೆಯಾಗಲಿದೆ. ಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ತಲುಪುವ ಸಾಧ್ಯತೆ ಇದೆ.
ಮೀನುಗಾರರಿಗೆ ಎಚ್ಚರಿಕೆ
ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-50 ಕಿ.ಮೀ ಯಿಂದ 60 ಕಿ.ಮೀ ವೇಗದಲ್ಲಿ ಬೀಸುವ ವಾತಾವರಣ ಇರಲಿದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಇದನ್ನೂ ಓದಿ: Cyclone Biparjoy: ಬಿಪರ್‌ಜಾಯ್ ಚಂಡಮಾರುತ ಭೀತಿ; ಈ ಪದದ ಅರ್ಥ ಏನು? ಮೊದಲು ಎಲ್ಲಿ ಬಳಕೆ?
ಮಂಗಳವಾರ (ಜೂ.6) ಶಿವಮೊಗ್ಗದ ಹೊಳೆಹೊನ್ನೂರು, ಹಾಸನದ ಚನ್ನರಾಯಪಟ್ಟಣದಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ. ಕಲಬುರಗಿಯ ಮಹಾಗಾವ್, ಯಾದಗಿರಿಯ ಶೋರಪುರದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ. ಗರಿಷ್ಠ ಉಷ್ಣಾಂಶ 39.9 ಡಿಗ್ರಿ ಸೆಲ್ಸಿಯಸ್ ಕಲಬುರಗಿಯಲ್ಲಿ ದಾಖಲಾಗಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಉಡುಪಿ
Weather Report: ಮತ್ತೆ ಸೈಕ್ಲೋನ್ ಎಫೆಕ್ಟ್; ರಾಜ್ಯಾದ್ಯಂತ ಇನ್ನೂ 5 ದಿನ ಭಾರಿ ಮಳೆ
Weather Report: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಮುಂದಿನ 5 ದಿನಗಳು ಭಾರಿ ಮಳೆಯಾಗುವ ಎಚ್ಚರಿಕೆಯನ್ನು (Rain alert) ಹವಾಮಾನ ಇಲಾಖೆ (Weather Update) ನೀಡಿದೆ. ಈ ಜಿಲ್ಲೆಗಳಿಗೆ ಅಲರ್ಟ್ ನೀಡಲಾಗಿದೆ.
ಬೆಂಗಳೂರು: ರಾಜ್ಯಾದ್ಯಂತ ಮೇ 11ರವರೆಗೆ ಭಾರಿ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ (Weather report) ನೀಡಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಈಗ ಪ್ರಭಾವ ತೀವ್ರಗೊಂಡಿದೆ. ಮುಂದಿನ 12 ಗಂಟೆಯಲ್ಲಿ ಚಂಡಮಾರುತವಾಗಿ ಪರಿವರ್ತನೆ ಆಗಲಿದೆ. ಇದರ ಪ್ರಭಾವದಿಂದಾಗಿ ರಾಜ್ಯದಲ್ಲಿ ಮುಂದಿನ ಐದು ದಿನಗಳು ಭಾರಿ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ.
ಸೈಕ್ಲೋನ್ ಎಫೆಕ್ಟ್‌ನಿಂದಾಗಿ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಬಳ್ಳಾರಿ, ಕೊಡಗು, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರಕ್ಕೆ ಯಾವುದೇ ಅಲರ್ಟ್ ನೀಡಿಲ್ಲವಾದರೂ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಈ ವೇಳೆ ಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರಲಿದೆ. ಗುಡುಗು, ಮಿಂಚಿನ ಮಳೆಯಾಗಲಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಈ ಸಮಯಲ್ಲಿ ಗಾಳಿಯ ವೇಗವು 50 ಕಿ.ಮೀ ದಾಟುವ ಸಾಧ್ಯತೆ ಇದೆ.
ಮೈಸೂರು ಮತ್ತು ಮಂಡ್ಯ, ಹಾವೇರಿ ಮತ್ತು ಧಾರವಾಡ, ವಿಜಯನಗರ, ಬೆಳಗಾವಿ ಮತ್ತು ಗದಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿ ಒಣ ಹವೆ ಇರಲಿದೆ. ಹಾಸನ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ: Dog Lovers: ಮನೆಯಲ್ಲಿ ನಾಯಿ ಇದೆಯೇ ಎಚ್ಚರ! ನಿಮ್ಮ ಹೊಟ್ಟೆಯಲ್ಲಿ ಬೆಳೆಯಲಿದೆ ವೈರಾಣುಗಡ್ಡೆ
ಉಡುಪಿಯಲ್ಲಿ ಹೈ ಅಲರ್ಟ್
ಅರಬ್ಬಿ ಸಮುದ್ರದಲ್ಲಿ ವಾಯಭಾರ ಕುಸಿತದಿಂದ ಚಂಡಮಾರುತ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ ಐದು ದಿನಗಳಲ್ಲಿ ಸಮುದ್ರದ ಅಲೆಗಳಲ್ಲಿ ಏರಿಳಿತ ಉಂಟಾಗುವ ಮತ್ತು ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಸಾರ್ವಜನಿಕರಿಗೆ ಕೆಲವು ಸೂಚನೆಯನ್ನು ನೀಡಿದೆ.
ಮೀನುಗಾರರು, ಮೀನುಗಾರಿಕೆಗಾಗಿ ಸಮುದ್ರಕ್ಕೆ ತೆರಳುವುದನ್ನು ಕಡ್ಡಾಯವಾಗಿ ನಿಷೇಧ ಮಾಡಲಾಗಿದೆ. ಸಾರ್ವಜನಿಕರು ಹಾಗೂ ಪ್ರವಾಸಿಗರು ಸಮುದ್ರ, ನದಿ ತೀರ ಪ್ರದೇಶಗಳಲ್ಲಿ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ನೆರೆ ಪೀಡಿತ, ತಗ್ಗು ಪ್ರದೇಶದಲ್ಲಿ ವಾಸಿಸುವ ಸಾರ್ವಜನಿಕರು ಸುರಕ್ಷಿತ ಸ್ಥಳಕ್ಕೆ ತೆರಳಲು ಸೂಚನೆ ನೀಡಲಾಗಿದೆ. ಇನ್ನು ಸಹಾಯವಾಣಿಯನ್ನು ತೆರೆದಿದ್ದು, 0820-2574802 ಅಥವಾ ಟೋಲ್ ಫ್ರೀ ನಂಬರ್ 1077 ಕರೆ ಮಾಡಬಹುದಾಗಿದೆ.
ರಾಜ್ಯದ ಪ್ರಮುಖ ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಕರ್ನಾಟಕ
ಸರ್ಕಾರಿ ಶಾಲೆಗೆ ಬೀಗ ಹಾಕಿ ದನ ಕಟ್ಟಿದ ಮೂಲ ಮಾಲೀಕರು; ಈಗ ಬೀದಿಯಲ್ಲೇ ಮಕ್ಕಳಿಗೆ ಪಾಠ!
Government School: ಜಾಗದ ವಿವಾದ ಹಾಗೂ ಶಿಕ್ಷಣ ಇಲಾಖೆಯ ನಿರ್ಲಕ್ಷ್ಯವು ಈಗ ಮಕ್ಕಳನ್ನು ಬೀದಿಗೆ ತಂದಿದೆ. ಈ ಹಿಂದೆ ಶಾಲೆಗೆ ಜಾಗ ನೀಡಿದ್ದ ಮಾಲೀಕರು ಈಗ ಶಾಲೆಗೆ ಬೀಗ ಹಾಕಿದ್ದಾರೆ. ತಮಗೆ ಪರ್ಯಾಯ ಜಾಗದ ವ್ಯವಸ್ಥೆ ಮಾಡಿಕೊಡುವವರೆಗೂ ಈ ಜಾಗವನ್ನು ಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.
ಗದಗ: ಮುಂಡರಗಿ ತಾಲೂಕಿನ ಚಿಕ್ಕವಡ್ಡಟ್ಟಿ ಗ್ರಾಮದಲ್ಲಿ ಸರ್ಕಾರಿ ಶಾಲೆಗೆ (Government School) ಜಾಗದ ಸಮಸ್ಯೆಯೊಂದು (Land Issue) ಕೇಳಿ ಬಂದಿದೆ. ಈ ಹಿಂದೆ ತಮಗೆ ಸರ್ಕಾರ ಕೊಟ್ಟಿದ್ದ ಜಾಗದ ಬಗ್ಗೆ ನೈಜ ಮಾಲೀಕ ತಗಾದೆ ತೆಗೆದಿದ್ದರಿಂದ ತಮ್ಮ ಜಾಗದಲ್ಲಿ ಕಟ್ಟಲಾಗಿದ್ದ ಸರ್ಕಾರಿ ಶಾಲೆಗೆ ಕುಟುಂಬವೊಂದು ಬೀಗ ಜಡಿದಿದೆ. ಅಲ್ಲದೆ, ಶಾಲೆಯ ಆವರಣದಲ್ಲಿ ದನ-ಕರುಗಳನ್ನು ಕಟ್ಟಿದೆ. ಹೀಗಾಗಿ ಈಗ ಶಾಲೆಯ ಮಕ್ಕಳು ಬೀದಿಗೆ ಬಂದಿದ್ದಾರೆ. ಮರದ ಕೆಳಗೆ ಪಾಠ ಮಾಡಲಾಗುತ್ತಿದೆ.
ಈಗ ಜಾಗದ ಮೂಲ ಮಾಲೀಕರು ಶಾಲೆಯ ಗೇಟ್‌ಗೆ ಬೀಗ ಹಾಕಿ, ದಾರಿಗೆ ಮುಳ್ಳಿನ ಬೇಲಿಯನ್ನು ಹಾಕಿದ್ದಾರೆ. ಲಕ್ಷ್ಮವ್ವ ತಳವಾರ ಎಂಬುವವರ ಕುಟುಂಬದಿಂದ ಶಾಲಾ ಜಾಗದ ಬಗ್ಗೆ ತಗಾದೆ ತಗೆಯಲಾಗಿದೆ. ಸರ್ಕಾರಿ ಶಾಲೆಗೆಂದು ಹದಿನಾಲ್ಕು ಗುಂಟೆ ಜಾಗವನ್ನು ಈ ಕುಟುಂಬದವರು ನೀಡಿದ್ದರು. ಆದರೆ, ತಮಗೆ ಕೊಟ್ಟಿದ್ದ ಪರ್ಯಾಯ ಜಾಗ ಈಗ ತಮ್ಮ ಕೈತಪ್ಪಿ ಹೋಗುತ್ತಿರುವುದರಿಂದ ಶಾಲೆಯ ಜಾಗಕ್ಕೆ ಪಟ್ಟು ಹಿಡಿದಿದ್ದಾರೆ. ತಮಗೆ ಈ ಜಾಗವನ್ನು ಬಿಟ್ಟು ಕೊಡಿ ಇಲ್ಲವೇ ಪರ್ಯಾಯ ಜಾಗವನ್ನು ಮಾಡಿಕೊಡಿ ಎಂದು ಆಗ್ರಹಿಸಿದ್ದಾರೆ.
ಸಾರ್ವಜನಿಕ ಸಮಸ್ಯೆಯಾಗಿ ಬದಲಾಯ್ತು!
24 ವರ್ಷದ ಹಿಂದೆ ಸರ್ಕಾರಿ ಶಾಲೆ ಕಟ್ಟಿಕೊಂಡು ಮಕ್ಕಳಿಗೆ ಶಿಕ್ಷಣ ದೊರೆಯುವಂತಾಗಲಿ ಎಂಬ ಸದುದ್ದೇಶದಿಂದ ತನ್ನ ಹೆಸರಿನಲ್ಲಿದ್ದ 14 ಗುಂಟೆ ಜಮೀನನ್ನು ಮಾಲೀಕರೊಬ್ಬರು ಬಿಟ್ಟುಕೊಟ್ಟಿದ್ದರು. ಇದರ ಬದಲಾಗಿ ಅವರಿಗೆ ಅರ್ಧ ಗುಂಟೆ ಜಾಗವನ್ನು ಕೊಡಲಾಗಿತ್ತು. ಆದರೆ, ಈಗ ಆ ಜಾಗದ ಸಮಸ್ಯೆಯು ಸಾರ್ವಜನಿಕರ ಸಮಸ್ಯೆಯಾಗಿ ಮಾರ್ಪಟ್ಟಿದೆ.
ಶಾಲೆಗೆ ಜಾಗವನ್ನು ನೀಡಿದ್ದ ಕುಟುಂಬಸ್ಥರಿಗೆ ಪರ್ಯಾಯವಾಗಿ ವಾಸಿಸಲು ಶಾಲೆ ಹಿಂಭಾಗದಲ್ಲಿ ಅರ್ಧ ಗುಂಟೆ ಜಾಗದ ವ್ಯವಸ್ಥೆಯನ್ನು ಮಾಡಿಕೊಡಲಾಗಿತ್ತು. ಆದರೆ, ಅದು ಖಾಸಗಿ ಮಾಲೀಕರ ಜಾಗವಾಗಿದೆ ಎಂಬುದು ಈಗ ಗೊತ್ತಾಗಿದೆ. ಆ ಜಾಗದ ಮಾಲೀಕರು ಈಗ “ಇದು ತಮ್ಮ ಜಾಗ, ನೀವು ಇಲ್ಲಿಂದ ಖಾಲಿ ಮಾಡಿ” ಎಂದು ಪಟ್ಟು ಹಿಡಿದು ಕುಳಿತಿದ್ದಾರೆ. ಇದರಿಂದ ಲಕ್ಷ್ಮವ್ವ ತಳವಾರ ಕುಟುಂಬಸ್ಥರಿಗೆ ದಿಕ್ಕು ತೋಚದಂತೆ ಆಗಿದೆ.
ಸಾರ್ವಜನಿಕ ಉಪಯೋಗಕ್ಕಾಗಿ ತಮ್ಮ ಜಾಗವನ್ನು ತಾವು ಬಿಟ್ಟುಕೊಟ್ಟಿದ್ದೇವೆ. ಆದರೆ, ನಮಗೆ ಕೊಟ್ಟ ಜಾಗವನ್ನು ನಮಗೆ ಖಾತೆಯನ್ನಾಗಿ ಮಾಡಿಕೊಡಲೂ ಇಲ್ಲ. ಈಗ ಆ ಜಾಗದ ಮಾಲೀಕರು ತಮ್ಮ ಜಾಗವನ್ನು ಬಿಟ್ಟು ಕೊಡಿ ಎಂದು ನಮ್ಮ ಬೆನ್ನು ಬಿದ್ದಿದ್ದಾರೆ. ನಾವೀಗ ಎಲ್ಲಿಗೆ ಹೋಗಬೇಕು? ನಾವು ಬಡವರು, ಕಷ್ಟಪಟ್ಟು ದುಡಿದು ಜೀವನ ಸಾಗಿಸುವವರು. ನಮಗೆ ಈಗ ನೆಲೆಯೇ ಇಲ್ಲವಾದರೆ ಹೇಗೆ? ಎಂದು ಸಂಕಷ್ಟದಲ್ಲಿರುವ ಲಕ್ಷ್ಮವ್ವ ತಳವಾರ ಕುಟುಂಬದವರು ಪ್ರಶ್ನೆ ಮಾಡುತ್ತಿದ್ದಾರೆ.
ಖಾತೆ ಬದಲಾವಣೆಯೂ ಆಗಿಲ್ಲ
ಇಲ್ಲಿ ಇನ್ನೊಂದು ಪ್ರಮಾದದ ಸಂಗತಿ ಎಂದರೆ ಲಕ್ಷ್ಮವ್ವ ತಳವಾರ ಕುಟುಂಬದವರು ಈ ಜಾಗವನ್ನು ಬಿಟ್ಟು ಕೊಟ್ಟು ಸರ್ಕಾರ ಸೂಚಿಸಿದ ಜಾಗಕ್ಕೆ ಹೋದರು. ಅವರು ಬಿಟ್ಟುಕೊಟ್ಟ ಜಾಗದಲ್ಲಿ ಸರ್ಕಾರಿ ಶಾಲೆ ನಿರ್ಮಾಣವೂ ಆಯಿತು, ಪಾಠವೂ ಶುರುವಾಯಿತು. ಆ ಕುಟುಂಬದವರೂ ತಮಗೆ ಸೂಚಿಸಿದ ಜಾಗದಲ್ಲಿ ಮನೆ ಕಟ್ಟಿಕೊಂಡು ವಾಸವಾಗಿದ್ದರು. ಈ ಮಧ್ಯೆ ಶಿಕ್ಷಣ ಇಲಾಖೆಯಿಂದ ಸಹ ಖಾತೆ ಬದಲಾವಣೆಗೆ ಮುಂದಾಗಿಲ್ಲ. ಆ ಕುಟುಂಬದವರಿಗೆ ನೀಡಿದ ಜಾಗದ ಖಾತೆ ಮಾಡಿಸುವುದನ್ನೂ ಮರೆತುಬಿಟ್ಟಿದ್ದರು. ಈಗ ಇವರು ಮನೆ ಕಟ್ಟಿಕೊಂಡಿರುವ ಜಾಗದ ಮಾಲೀಕ ತನ್ನ ಹಕ್ಕಿನ ಜಾಗವನ್ನು ಕೇಳಿದ್ದೇ ಇಷ್ಟೆಲ್ಲ ಸಮಸ್ಯೆಗೆ ಕಾರಣವಾಗಿದೆ.
ನಮಗೆ ಶಾಲೆಯ ಜಾಗವನ್ನು ಬಿಟ್ಟುಕೊಡಿ
ತಮಗೆ ಜಾಗ ಇಲ್ಲದೇ ಹೇಗೆ ಜೀವನ ಸಾಗಿಸುವುದು? ಹೀಗಾಗಿ ಶಾಲೆಗೆ ನೀಡಿದ್ದ ಜಾಗವನ್ನು ಮರಳಿ ನಮಗೆ ಬಿಟ್ಟುಕೊಡಿ. ಇಲ್ಲವಾದಲ್ಲಿ ನಮಗೆ ಬೇರೆ ಕಡೆ ಜಾಗ ನೀಡಿ ನಮ್ಮ ಹೆಸರಿಗೆ ಮಾಡಿ ಎಂದು ತಳವಾರ ಕುಟುಂಬಸ್ಥರು ಪಟ್ಟು ಹಿಡಿದಿದ್ದಾರೆ. ಈ ಸಂಬಂಧ ತಹಸೀಲ್ದಾರ್‌ವರೆಗೂ ಮನವಿಯನ್ನು ನೀಡಲಾಗಿತ್ತು. ತಹಸೀಲ್ದಾರ್ ಸಹ ಕ್ಷೇತ್ರ ಶಿಕ್ಷಣಾಧಿಕಾರಿಯವರನ್ನು ಕರೆಸಿ ಸಮಸ್ಯೆಯನ್ನು ಬಗೆಹರಿಸುವಂತೆ ಸೂಚನೆ ನೀಡಿದ್ದರು. ಆದರೆ, ಅಧಿಕಾರಿಗಳು ದಿವ್ಯ ನಿರ್ಲಕ್ಷ್ಯ ವಹಿಸಿದ್ದರು. ಐದು ದಿನಗಳೊಳಗೆ ಮಾಡುತ್ತೇವೆಂದವರು ಏನೂ ಕ್ರಮ ಕೈಗೊಳ್ಳದೇ ಇದ್ದ ಕಾರಣ, ಲಕ್ಷ್ಮವ್ವ ತಳವಾರ ಕುಟುಂಬದವರು ಶಾಲೆಗೆ ಬೀಗ ಹಾಕಿದ್ದಾರೆ. ಶಾಲಾ ಆವರಣದಲ್ಲಿ ದನ ಕರುಗಳನ್ನು ಕಟ್ಟಿದ್ದಾರೆ. ತಮಗೆ ಪರ್ಯಾಯ ಜಾಗವನ್ನು ಕಲ್ಪಿಸುವವರೆಗೂ ಬೀಗ ತೆಗೆಯುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.
ಇದನ್ನೂ ಓದಿ: Tungabhadra Dam: ಬರಿದಾದಳೇ ತುಂಗಭದ್ರೆ? 105 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲೀಗ 5 ಟಿಎಂಸಿ ನೀರೂ ಇಲ್ಲ!
ಇನ್ನಾದರೂ ಅಧಿಕಾರಿಗಳು ತುರ್ತು ಕ್ರಮವನ್ನು ಕೈಗೊಳ್ಳುವ ಮೂಲಕ ಮಕ್ಕಳು ಬಿಸಿಲಿನಲ್ಲಿ ಪಾಠ ಕೇಳುವುದನ್ನು ತಪ್ಪಿಸುತ್ತಾರೆಯೇ ಎಂಬ ಪ್ರಶ್ನೆ ಸಾರ್ವಜನಿಕರದ್ದಾಗಿದೆ.
ಉಡುಪಿ
Weather report : ಉಡುಪಿ, ದಕ್ಷಿಣ ಕನ್ನಡದಲ್ಲಿ ಗುಡುಗಲಿರುವ ವರುಣ; ಯಾವ ಜಿಲ್ಲೆಗಳಲ್ಲಿ ಹೆಚ್ಚು ಮಳೆ ಸಾಧ್ಯತೆ?
Weather report: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಮಂಗಳವಾರ ಬೀದರ್, ಕಲಬುರಗಿ ಜಿಲ್ಲೆಗಳಿಗೆ ಮಳೆ ಅಲರ್ಟ್ (Rain alert) ನೀಡಲಾಗಿದೆ. ಈ ಕುರಿತ ಹವಾಮಾನ ವರದಿ (weather updates) ಇಲ್ಲಿದೆ.
ಬೆಂಗಳೂರು: ಬೀದರ್‌ನಲ್ಲಿ ಬಿರುಗಾಳಿ ಬೀಸಿದರೆ, ಕಲಬುರಗಿಯಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಎಚ್ಚರಿಕೆಯನ್ನು (rain News) ಹವಾಮಾನ ಇಲಾಖೆ (Weather Report) ನೀಡಿದೆ. ಮೇ 6, 7 ರಂದು ಬಹುತೇಕ ದಕ್ಷಿಣ ಹಾಗೂ ಉತ್ತರ ಒಳನಾಡು ಸೇರಿದಂತೆ ಕರಾವಳಿಯಲ್ಲಿ ಮಳೆಯ ಅಬ್ಬರ ಇರಲಿದೆ.
ಮಳೆಯ ಜತೆಗೆ ಗಾಳಿ ವೇಗವು ಗಂಟೆಗೆ 30-40 ಕಿ.ಮೀನಷ್ಟು ಇರಲಿದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆಯನ್ನು ನೀಡಲಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಹಾವೇರಿ, ಧಾರವಾಡ ಮತ್ತು ಬೆಳಗಾವಿಯ ಕೆಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ವಿಜಯನಗರ, ಬಳ್ಳಾರಿ, ಗದಗ, ಕೊಪ್ಪಳ ಮತ್ತು ಬಾಗಲಕೋಟೆಯಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು, ತುಮಕೂರು ಜಿಲ್ಲೆಯಾದ್ಯಂತ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಹಾಸನ, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ಜಿಟಿ ಜಿಟಿ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 32 ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.
ರಾತ್ರಿ ಸುರಿದ ಮಳೆಗೆ ಕೆರೆಯಂತಾದ ಅಂಡರ್‌ಪಾಸ್
ಸೋಮವಾರ ರಾತ್ರಿ ಸುರಿದ ಸಾಧಾರಣ ಮಳೆಗೆ ತುಮಕೂರು ನಗರದ ಅಂತರಸನಹಳ್ಳಿ ಮಾರುಕಟ್ಟೆ ಬಳಿಯ ಅಂಡರ್‌ಪಾಸ್ ಕೆರೆಯಂತಾಗಿದೆ. ಅಂಡರ್‌ಪಾಸ್‌ನಲ್ಲಿ ನೀರು ತುಂಬಿದ್ದರಿಂದ ಸಾರ್ವಜನಿಕರ ಓಡಾಟಕ್ಕೆ ಪರದಾಡಬೇಕಾಯಿತು. ಈಗಾಗಲೇ ರಾಜ್ಯ ಸರ್ಕಾರ ಯಾವುದೇ ರೀತಿಯ ಮಳೆ ಅವಘಡಗಳು ಆಗದಂತೆ ಮುನ್ನೆಚ್ಚರಿಕೆ ವಹಿಸಲು ಆಯಾ ಜಿಲ್ಲಾಡಳಿತಗಳಿಗೆ ಸೂಕ್ತ ನಿರ್ದೇಶನ ನೀಡಿದೆ. ಆದರೆ ಜಿಲ್ಲಾಡಳಿತ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಕೂಗು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.
ಇದನ್ನೂ ಓದಿ: Monsoon Driving: ಮಳೆಗಾಲದಲ್ಲಿ ಕಾರು ಪ್ರಯಾಣಕ್ಕೆ ಹೊರಡುವಾಗ ಈ ಟಿಪ್ಸ್ ಗಮನದಲ್ಲಿರಲಿ
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಕಲಬುರಗಿ: 42 ಡಿ.ಸೆ – 25 ಡಿ.ಸೆ
ಗದಗ: 36 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 35 ಡಿ.ಸೆ – 23 ಡಿ.ಸೆ
ಬೆಳಗಾವಿ: 35 ಡಿ.ಸೆ – 22 ಡಿ.ಸೆ
ಕಾರವಾರ: 36 ಡಿ.ಸೆ – 27 ಡಿ.ಸೆ
ಮಂಗಳೂರು: 35 ಡಿ.ಸೆ – 26 ಡಿ.ಸೆ
ಹೊನ್ನಾವರ: 33 ಡಿ.ಸೆ- 25 ಡಿ.ಸೆ
ಬೆಂಗಳೂರು ನಗರ: 32 ಡಿ.ಸೆ – 22 ಡಿ.ಸೆ
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
-
ಸುವಚನ11 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
South Cinema23 hours ago
Priya Prakash Varrier: ಕಣ್ಣು ಹೊಡೊಯೊ ಐಡಿಯಾ ಕೊಟ್ಟಿದ್ದು ನಾನೆ ಎಂದ ಪ್ರಿಯಾ; ಆಕೆಗೆ ತೈಲ ಕೊಡ್ರಪ್ಪ ಎಂದ ನಿರ್ದೇಶಕ!
-
South Cinema21 hours ago
Kannada New Movie: ಹಿಮಾಲಯದ ಕೊರೆಯುವ ಚಳಿಯಲ್ಲಿ ‘ಎಲ್ಲೋ ಜೋಗಪ್ಪ ನಿನ್ನರಮನೆ’ ಶೂಟಿಂಗ್!
-
South Cinema21 hours ago
Nandamuri Balakrishna: ‘ಐ ಡೋಂಟ್ ಕೇರ್ʼ ಎಂದು ಮಾಸ್ ಅವತಾರವೆತ್ತ ನಂದಮೂರಿ ಬಾಲಕೃಷ್ಣ; ಟೈಟಲ್ ರಿವೀಲ್!
-
ಪ್ರಮುಖ ಸುದ್ದಿ17 hours ago
ವಿಸ್ತಾರ ಸಂಪಾದಕೀಯ: ಇಂದಿರಾ ಗಾಂಧಿ ಹತ್ಯೆಯ ಸಂಭ್ರಮ; ಕೆನಡಾದಲ್ಲಿ ಖಲಿಸ್ತಾನಿಗಳ ಉದ್ಧಟತನ ಖಂಡನೀಯ
-
South Cinema24 hours ago
Sara Ali Khan: ಶುಭ್ಮನ್ ಗಿಲ್ ಜತೆ ಡೇಟಿಂಗ್, ಕೂನೆಗೂ ಉತ್ತರ ಕೊಟ್ಟರಾ ಸಾರಾ
-
ಪ್ರಮುಖ ಸುದ್ದಿ22 hours ago
ವಿಧವೆ ಅನ್ನೋದಕ್ಕೆ ರಾಷ್ಟ್ರಪತಿಯನ್ನು ಸಂಸತ್ ಭವನ ಉದ್ಘಾಟನೆಗೆ ಮೋದಿ ಆಹ್ವಾನಿಸಿಲ್ಲವೆಂದ ಕುಂ. ವೀರಭದ್ರಪ್ಪ
-
ಪ್ರಮುಖ ಸುದ್ದಿ23 hours ago
Textbook Revision: ಬುದ್ಧಿಜೀವಿ ಎಂದು ಹೇಳಿಕೊಂಡು ಕೆಲವರು ಓಡಾಡುತ್ತಿದ್ದಾರೆ!: ಸರ್ಕಾರಕ್ಕೆ ಹಿಗ್ಗಾಮುಗ್ಗಾ ಜಾಡಿಸಿದ ಮಾಜಿ ಸಚಿವ ಬಿ.ಸಿ. ನಾಗೇಶ್