Site icon Vistara News

Road Accident: ವಿಜಯಪುರದಲ್ಲಿ ಬೈಕ್‌ಗೆ ಲಾರಿ ಡಿಕ್ಕಿ, ಬೈಕ್ ಸವಾರ ಸಾವು

road accident vijaypura

ವಿಜಯಪುರ: ನಿಯಂತ್ರಣ ತಪ್ಪಿದ ಲಾರಿ ಹಿಂಬದಿಯಿಂದ ಬೈಕ್‌ಗೆ ಡಿಕ್ಕಿಯಾದ ಪರಿಣಾಮ (Road Accident) ಬೈಕ್ ಸವಾರ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ.

ಈ ದುರ್ಘಟನೆ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಧೂಳಖೇಡ ಗ್ರಾಮದ ಬಳಿ ನಡೆದಿದೆ. ಲಾರಿ ಚಾಲಕನ ನಿಯಂತ್ರಣ ತಪ್ಪಿ ಜೋರಾಗಿ ಬಂದು ಬೈಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರ ಮಲಕಾರಿ ಖಂಡಪ್ಪ ತೋರತೆ(33) ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಝಳಕಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಚೂರಿ ಇರಿತದಿಂದ ಗಂಭೀರ ಗಾಯ

ಗದಗ: ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರಿಗೆ ಚಾಕುವಿನಿಂದ (knife attack) ಇರಿಯಲಾಗಿದ್ದು, ಗಂಭೀರಗೊಂಡು ಸಾವು ಬದುಕಿನ ನಡುವೆ ಸೆಣಸುತ್ತಿದ್ದಾರೆ.

ಗದಗನ ಎಸ್‌ಬಿಎಸ್ ಗಾರ್ಡನ್ ಬಳಿಯ 76ನೇ ಫ್ಲಾಟ್‌ನಲ್ಲಿ ಘಟನೆ ನಡೆದಿದೆ. ಕೆಂಚಪ್ಪ ಲಕ್ಕುಂಡಿ (32) ಎಂಬಾತ, ಇಮಾಮಸಾಬ್ ಖಾಗದಗಾರ್ (48) ಎಂಬವರಿಗೆ ಚಾಕುವಿನಿಂದ ಇರಿದು ಗಂಭೀರವಾಗಿ ಗಾಯಗೊಳಿಸಿದ್ದಾನೆ. ದೇಹದ 6 ಕಡೆಗಳಲ್ಲಿ ಚಾಕುವಿನಿಂದ ಇರಿಯಲಾಗಿದೆ.

ಹೊಟ್ಟೆಗೆ ಚಾಕು ಇರಿತದಿಂದ ಕರುಳು ಹೊರಗೆ ಬಂದಿದೆ. ಗಾಯಾಳುವನ್ನು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗದಗ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿ ಕೆಂಚಪ್ಪನನ್ನು ಪೊಲೀಸರ ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: Road Accident: ಕಾರು-ಬೈಕ್‌ ನಡುವೆ ಭೀಕರ ಅಪಘಾತ: ಮದುವೆಗೆಂದು ಹೋಗುತ್ತಿದ್ದ ಸಹೋದರರಿಬ್ಬರ ದುರ್ಮರಣ

Exit mobile version