ಗದಗ: ಗದಗ ತಾಲೂಕಿನ ಲಕ್ಕುಂಡಿ ಕ್ರಾಸ್‌ನ (Lakkundi cross at gadag) ಅಯ್ಯಪ್ಪಸ್ವಾಮಿ ದೇವಸ್ಥಾನದ ಬಳಿ ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರಿನ (Accident between bus and Car) ನಡುವೆ ಭೀಕರ ಅಪಘಾತ (Road accident) ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ (Two died on spot). ಅಪಘಾತದ ತೀವ್ರತೆಗೆ ಬಸ್ ಹೆದ್ದಾರಿಯಲ್ಲೇ ಪಲ್ಟಿಯಾಗಿದೆ.
ಗದಗದಿಂದ ಕೊಪ್ಪಳ ಕಡೆ ತೆರಳುತ್ತಿದ್ದ KSRTC ಬಸ್ ಮತ್ತು ಹೊಸಪೇಟೆಯಿಂದ ಗದಗ ಮಾರ್ಗವಾಗಿ ಬರುತ್ತಿದ್ದ ಕಾರಿನ ನಡುವೆ ಈ ಅವಘಾತ ಸಂಭವಿಸಿದೆ. ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರು ತಂದೆ ಮತ್ತು ಮಗ ಆಗಿದ್ದಾರೆ. ತಂದೆ ಡಾ. ಎಚ್ ಬಾಲರಾಜ್ (64) ಅವರು ಶಿಕ್ಷಣ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕರಾಗಿದ್ದರೆ, ಮಗ ಡಾ ವಿನಯ ಅವರು ಪ್ರೊಫೆಸರ್ ಆಗಿದ್ದಾರೆ. ಅವರು ವಿಜಯನಗರ ಜಿಲ್ಲೆಯ ಮೂಲದವರಾಗಿದ್ದು, ಗದಗ ಮಾರ್ಗವಾಗಿ ಬರುತ್ತಿದ್ದರು.
ಅಪಘಾತದ ತೀವ್ರತೆ ಎಷ್ಟಿತ್ತೆಂದರೆ ಕಾರಿಗೆ ಮುಖಾಮುಖಿ ಡಿಕ್ಕಿ ಹೊಡೆದ ಬಳಿಕ ನಿಯಂತ್ರಣ ಕಳೆದುಕೊಂಡ ಬಸ್ ಅಲ್ಲೇ ಮಗುಚಿ ಬಿದ್ದಿದೆ. ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸ್ಥಳಕ್ಕೆ ಗ್ರಾಮೀಣ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ಮಾಡಿದ್ದಾರೆ.
ಇದನ್ನೂ ಓದಿ: Mandya Accident: ನಿಂತಿದ್ದ ಬಸ್‌ಗೆ ಕಾರು ಡಿಕ್ಕಿ; ಯುವತಿ ಸಹಿತ ನಾಲ್ವರು ಟೆಕ್ಕಿಗಳು ಸ್ಥಳದಲ್ಲೇ ದುರ್ಮರಣ
Car Accident: ಮರಕ್ಕೆ ಕಾರು ಡಿಕ್ಕಿ ಹೊಡೆದು ಚಾಲಕ ಸಾವು
ಧಾರವಾಡ: ಮರಕ್ಕೆ ಕಾರು ಡಿಕ್ಕಿ ಹೊಡೆದು ಚಾಲಕ ಮೃತಪಟ್ಟಿರುವುದು ತಾಲೂಕಿನ ಸೋಮಾಪುರ ಬಳಿ ನಡೆದಿದೆ. ಅತಿ ವೇಗದಿಂದ ಬಂದಾಗ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿಯಾಗಿದ್ದರಿಂದ (Car Accident) ಸ್ಥಳದಲ್ಲೇ ಚಾಲಕ ಮೃತಪಟ್ಟಿದ್ದಾರೆ.
ಹುಬ್ಬಳ್ಳಿಯ ಮೊಹಮ್ಮದ್ ಕಿಲ್ಲೆದಾರ್ ಮೃತ ವ್ಯಕ್ತಿ. ನವಲಗುಂದದಿಂದ ಧಾರವಾಡಕ್ಕೆ ಬರುತ್ತಿದ್ದ ವೇಳೆಯಲ್ಲಿ ಅಪಘಾತ ನಡೆದಿದೆ. ಮರಕ್ಕೆ ಗುದ್ದಿದ್ದರಿಂದ ಕಾರು ಪಲ್ಟಿಯಾಗಿದ್ದು, ಚಾಲಕ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಧಾರವಾಡ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.