ಗದಗ: ಪಿಎಸ್ಐ ಅಕ್ರಮದ ಬೆನ್ನಲ್ಲೇ ಈಗ ಕೆಪಿಟಿಸಿಎಲ್ ಪರೀಕ್ಷೆಯಲ್ಲೂ ಅಕ್ರಮದ ವಾಸನೆ ಬಡಿದಿದ್ದು, ಪಶ್ನೆ ಪತ್ರಿಕೆ ಸೋರಿಕೆ ಆರೋಪ ಕೇಳಿ ಬಂದಿದೆ.
ಆಗಸ್ಟ್ 7ರಂದು ಕೆಪಿಟಿಸಿಎಲ್ ಪ್ರವೇಶ ಪರೀಕ್ಷೆ ನಡೆದಿತ್ತು. ಈ ಸಂದರ್ಭದಲ್ಲಿ ನಕಲು ನಡೆಸಿದ ಆರೋಪದಲ್ಲಿ ಗದಗ ಮುನ್ಸಿಪಲ್ ಕಾಲೇಜ್ ಉಪ ಪ್ರಾಚಾರ್ಯ ಮಾರುತಿ ಸೋನಾವಣೆ ಹಾಗೂ ಅವರ ಮಗ ಸಮೀತ್ ಕುಮಾರ್‌ರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.
ಕೆಪಿಟಿಸಿಲ್ ವಿವಿಧ ಹುದ್ದೆ ನೇಮಕಾತಿಯ ಪ್ರಶ್ನೆ ಪತ್ರಿಕೆಗಳನ್ನು ಬಹಿರಂಗಪಡಿಸಿದ ಆರೋಪ ಇವರ ಮೇಲಿದೆ. ಪತ್ರಕರ್ತರ ಸೋಗಿನಲ್ಲಿ ಪರೀಕ್ಷಾ ಕೇಂದ್ರಕ್ಕೆ ಬಂದಿದ್ದ ತಂದೆ ಮಗ, ಮೊಬೈಲ್‌ನಲ್ಲಿ ವಿಡಿಯೋ ಮಾಡಿ ಹರಿಬಿಟ್ಟಿದ್ದರು ಎನ್ನಲಾಗಿದೆ. ಈ ಕುರಿತು ಬೆಳಗಾವಿ ವಿಭಾಗ ಮಟ್ಟದ ಸಿಇಎನ್(ಕ್ರೈಂ) ಅಧಿಕಾರಿಗಳಿಂದ ಪರಿಶೀಲನೆ ನಡೆದಿದ್ದು, ತನಿಖೆ ನಡೆಸುತ್ತಿದ್ದಾರೆ. ಕಾಲೇಜು ಪ್ರಾಂಶುಪಾಲ ಎಸ್.ಎಸ್ ಕುಲಕರ್ಣಿ ಅವರನ್ನೂ ವಿಚಾರಣೆ ನಡೆಸಲಾಗುತ್ತಿದೆ.