Site icon Vistara News

Self Harming : ಕೌಟುಂಬಿಕ ಕಲಹ; ಒಂದೇ ಕುಟುಂಬದ ಮೂವರು ಆತ್ಮಹತ್ಯೆ

family disputes Three members of a family commit suicide

ಗದಗ: ಕೌಟುಂಬಿಕ ಕಲಹಕ್ಕೆ (Family Dispute) ಒಂದೇ ಕುಟುಂಬದ ಮೂವರು (Self Harming) ಬಲಿ‌ಯಾಗಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಗೋನಾಳ ಗ್ರಾಮದಲ್ಲಿ (Gadag News) ಈ ಘಟನೆ ನಡೆದಿದೆ. ರೇಣುಕಾ ತೇಲಿ (49), ಮಂಜುನಾಥ್ (22), ಸಾವಕ್ಕ ತೇಲಿ (47) ಮೃತ ದುರ್ದೈವಿಗಳು.

ಸಾಲದ ವಿಷಯಕ್ಕೆ ಮನಸ್ತಾಪ ಉಂಟಾಗಿತ್ತು ಎನ್ನಲಾಗಿದೆ. ಇದರಿಂದ ಮನನೊಂದ ರೇಣುಕಾ ತೇಲಿ ರೈಲು ಹಳಿಗೆ ಹಾರಿದ್ದರು. ತಾಯಿಯನ್ನು ಹಿಂಬಾಲಿಸಿ ಬಂದಿದ್ದ ಮಂಜುನಾಥ್‌ ತಾಯಿಯನ್ನು ಕಾಪಾಡಲು ಹೋಗಿ ಹಳಿಗೆ ಬಿದ್ದಿದ್ದರು. ಈ ವೇಳೆ ವೇಗವಾಗಿ ಬಂದ ರೈಲು ಇವರಿಬ್ಬರ ಪ್ರಾಣವನ್ನು ತೆಗೆದಿತ್ತು.

ಹಾವೇರಿ ಜಿಲ್ಲೆಯ ಎಲವಿಗಿ ರೈಲು ನಿಲ್ದಾಣದ ಬಳಿ ನಿನ್ನೆ ಭಾನುವಾರ ರೈಲಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಇತ್ತ ಅಕ್ಕ ರೇಣುಕಾಳ ಸಾವಿನ ವಿಷಯ ತಿಳಿದು ಸಾವಕ್ಕ ತೇಲಿ (47) ಎಂಬುವವರು ಮನೆಯಲ್ಲೇ ನೇಣು ಬಿಗಿದುಕೊಂಡಿದ್ದಾರೆ. ಒಂದೇ ಕುಟುಂಬದ ಮೂವರನ್ನು ಕಳೆದುಕೊಂಡು ಕುಟುಂಬಸ್ಥರು ಕಂಗಲಾಗಿದ್ದಾರೆ.

ಸಾವಕ್ಕ, ರೇಣುಕಾ ಮಧ್ಯೆ ಟ್ರ್ಯಾಕ್ಟರ್ ಸಾಲ ಕಟ್ಟುವ ವಿಷಯವಾಗಿ ಜಗಳವಾಡಿಕೊಂಡಿದ್ದರು. ಬ್ಯಾಂಕ್‌ನಿಂದ 4 ಲಕ್ಷ ರೂ. ಸಾಲ ಪಡೆದು ಟ್ರ್ಯಾಕ್ಟರ್ ಖರೀದಿ ಮಾಡಿದ್ದರು. ಟ್ರ್ಯಾಕ್ಟರ್ ಕಂತು ವಿಚಾರವು ಕೂಡು ಕುಟುಂಬದಲ್ಲಿ ಗಲಾಟೆಗೆ ಕಾರಣವಾಗಿತ್ತು ಎನ್ನಲಾಗಿದೆ. ಸ್ಥಳಕ್ಕಾಗಮಿಸಿದ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: Acid attack : ಕಡಬದಲ್ಲಿ ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ!

ಕೃಷಿ ಹೊಂಡಕ್ಕೆ ಬಿದ್ದು ಮೂವರು ಸಾವು; ದೇವರ ಊಟ ಮಾಡಿ ಕೈ ತೊಳೆಯುವಾಗ ದುರಂತ

ಬೆಂಗಳೂರು ಹೊರವಲಯದ (Bangalore news) ಹೊಸಕೋಟೆ ಬಳಿ ಒಂದೇ ಕುಟುಂಬದ ಮೂವರು (three of the Family dead) ಕೃಷಿ ಹೊಂಡದಲ್ಲಿ ಮುಳುಗಿ ಮೃತಪಟ್ಟಿದ್ದಾರೆ (Drowned in Pond). ಹೊಸಕೋಟೆ ತಾಲೂಕಿನ ಕರಿಬೀರನಹೊಸಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಊಟ ಮಾಡಿ ಕೈ ತೊಳೆಯಲು ಹೋದ ವೇಳೆ ಅವರು ನೀರಿಗೆ ಬಿದ್ದು ಜಲ ಸಮಾಧಿ ಹೊಂದಿದ್ದಾರೆ.

ಮರಿಯಪ್ಪ (70) ಮುನಿಯಮ್ಮ ( 60 ) ಮತ್ತು ಭಾರತಿ (40) ಮೃತ ದುರ್ದೈವಿಗಳು. ಇವರು ಕರಿಬೀರನಹಳ್ಳಿ ಹೊಸಕಟ್ಟೆ ಸಮೀಪ ನಡೆಯುತ್ತಿದ್ದ ದೇವರ ಉತ್ಸವದಲ್ಲಿ (Temple Festival) ಭಾಗಿಯಾಗಿದ್ದರು. ಅಲ್ಲಿ ಮಧ್ಯಾಹ್ನ ಊಟದ ವ್ಯವಸ್ಥೆ ಇತ್ತು. ಕುಟುಂಬದ ಕಷ್ಟ ಪರಿಹಾರಕ್ಕಾಗಿ ಅವರು ಅಲ್ಲಿಗೆ ಹೋಗಿ ದೇವರ ಊಟದ ಪ್ರಸಾದವನ್ನು ಸ್ವೀಕರಿಸಿದ್ದರು. ಈ ವೇಳೆ ಊಟ ಮಾಡಿದ ಬಳಿಕ ಕೈ ತೊಳೆಯಲು ಹೋದಾಗ ಸಾವು ಬೆನ್ನಟ್ಟಿದೆ.

ಮಗಳು ಭಾರತಿ ಸ್ವಲ್ಪ ಬುದ್ಧಿ ಮಾಂದ್ಯಳಾಗಿದ್ದು, ಆಕೆ ಕೈ ತೊಳೆಯಲು ಹೋದಾಗ ನೀರಿಗೆ ಬಿದ್ದಿರುವ ಶಂಕೆ ಇದೆ. ಆಕೆಯನ್ನು ರಕ್ಷಣೆ ಮಾಡಲು ವಯಸ್ಸಾದ ಅಪ್ಪ ಅಮ್ಮ ಮುಂದೆ ನುಗ್ಗಿದ್ದಾರೆ. ಆಗ ಅವರೆಲ್ಲರೂ ಪ್ರಾಣ ಕಳೆದುಕೊಂಡಿದ್ದಾರೆ ಎನ್ನಲಾಗಿದೆ.

ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಜಾತ್ರೆಗೆ ಬಂದ ಸ್ಥಳೀಯರು ಸೇರಿ ಮೃತದೇಹಗಳನ್ನು ನೀರಿನಿಂದ ಹೊರತೆಗೆದಿದ್ದಾರೆ. ಸ್ಥಳಕ್ಕೆ ಹೊಸಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಕರಿಬೀರನಹೊಸಹಳ್ಳಿ ಗ್ರಾಮದಲ್ಲಿ ದುರ್ಘಟನೆ ನಡೆದಿದ್ದು, ಉತ್ಸವಕ್ಕೆ ಬಂದವರು ಕಣ್ಣೀರು ಹಾಕುತ್ತಿದ್ದ ದೃಶ್ಯ ಕಂಡುಬಂತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version